ರೇಣುಕಸ್ವಾಮಿ ಕೊಲೆ ಪ್ರಕರಣದ (Renukaswamy murder case) ಆರೋಪಿ ನಟ ದರ್ಶನ್ (Actor darshan) ಜಾಮೀನು ರದ್ದು ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ಈಗಾಗಲೇ ಸುಪ್ರೀಂಕೋರ್ಟ್‌ನಲ್ಲಿ (Supreme court) ಪೂರ್ಣಗೊಂಡಿದ್ದು ಎಂದು ತೀರ್ಪು ಹೊರಬೀಳಲಿದೆ. ಹೀಗಾಗಿ ದರ್ಶನ್ ಜಾಮೀನು ರದ್ದಾಗಲಿದ್ಯಾ ಅಥವಾ ಬಿಗ್ ರಿಲೀಫ್ ಸಿಗುತ್ತಾ ಎಂಬ ಕುತೂಹಲ ಹೆಚ್ಚಾಗಿದೆ.

ಇಂದು ನ್ಯಾಯಮೂರ್ತಿಗಳಾದ ಜೆ.ಬಿ.ಪರ್ದಿವಾಲಾ ಮತ್ತು ಮಹದೇವನ್ ಅವರನ್ನೊಳಗೊಂಡ ಪೀಠವು ಈ ಕುರಿತು ಆದೇಶ ನೀಡಲಿದ್ದಾರೆ. ಬೆಂಗಳೂರು ಪೊಲೀಸರು ಸಲ್ಲಿಸಿದ್ದ ಜಾಮೀನು ರದ್ದು ಅರ್ಜಿಯನ್ನು ನ್ಯಾಯಾಲಯವು ವಿಚಾರಣೆ ನಡೆಸಿ ಆದೇಶ ಕಾಯ್ದಿರಿಸಿತ್ತು.

ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದ ಒಟ್ಟು 7 ಆರೋಪಿಗಳ ಜಾಮೀನು ಅರ್ಜಿ ವಜಾಗೊಳಿಸುವಂತೆ ಪೊಲೀಸರೂ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಕೆ ಮಾಡಿದ್ದರು. ಇಂದು ಈ ಪ್ರಕರಣ ಆದೇಶ ಹೊರಬೀಳಲಿದ್ದು ದರ್ಶನ್‌ಗೆ ಜಾಮೀನು ರದ್ದಾಗೋ ಟೆನ್ನನ್ ಶುರುವಾಗಿದೆ.