
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಗೆ ಮತ್ತೆ 13 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶಿಸಿದೆ.ಪ್ರಕರಣ ಸಂಬಂಧ ಇಂದು ನಟ ದರ್ಶನ್ ಅವರನ್ನ 24ನೇ ಎಸಿಎಂಎಂ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ಇದೀಗ ನಟ ದರ್ಶನ್ ಸೇರಿ ಎಲ್ಲಾ ಆರೋಪಿಗಳಿಗೂ 13 ದಿನಗಳ ಕಾಲ ಅಂದರೇ ಸೆಪ್ಟಂಬರ್ 9ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.ಈ ನಡುವೆ ಪರಪ್ಪನ ಅಗ್ರಹಾರದಲ್ಲಿ ರಾಜಾತಿಥ್ಯ ನೀಡಿದ ಪ್ರಕರಣ ಸಂಬಂಧ ನಟ ದರ್ಶನ್ ಅವರನ್ನ ಬಳ್ಳಾರಿ ಜೈಲಿಗೆ ಇಂದು ಸ್ಥಳಾಂತರಿಸಲಿದ್ದಾರೆ.ಇನ್ನೇನು ಕೆಲವೇ ದಿನಗಳಲ್ಲಿ ರೇಣುಕಾಸ್ವಾಮಿ ಕೊಲೆ ಕೇಸ್ ನ ಚಾರ್ಜ್ ಶೀಟ್ ಅನ್ನು ಪೊಲೀಸರು ಸಬ್ಮಿಟ್ ಮಾಡಲಿದ್ದಾರೆ. ಕೇಸ್ ನಲ್ಲಿ ಪವಿತ್ರಾಗೌಡ A1 ಅಂಡ್ ದರ್ಶನ್ A2 ಆರೋಪಿಯಾಗಿದ್ದಾರೆ.