ಚಿತ್ರದುರ್ಗದ ರೇಣುಕಾಸ್ವಾಮಿ (Renukaswamy) ಕೊಲೆ ಪ್ರಕರಣದ ಆರೋಪಿಗಳಾದ ನಟ ದರ್ಶನ್ (Actor darshan), ಪವಿತ್ರಗೌಡ (Pavitra gowda) ಸೇರಿದಂತೆ 7 ಆರೋಪಿಗಳ ಜಾಮೀನು ರದ್ದು ಕೋರಿ ಸುಪ್ರೀಂ ಕೋರ್ಟ್ ನಲ್ಲಿ ಇಂದು ನಡೆಯಬೇಕಿದ್ದ ಅರ್ಜಿ ವಿಚಾರಣೆ ಮುಂದೂಡಿಕೆಯಾಗಿದೆ.ನಟ ದರ್ಶನ್ ಪರ ವಕೀಲ ಕಪಿಲ್ ಸಿಬಲ್ (Kapil sibal) ಕೋರ್ಟ್‌ಗೆ ಹಾಜರಾಗಲು ಸಾಧ್ಯವಾಗದ ಕಾರಣ ಕೇಸ್ ನ ಸಿದ್ದಾರ್ಥ ದಾವೆ ತೆಗೆದುಕೊಂಡಿದ್ದಾರೆ.

ಹೀಗಾಗಿ ತಾವು ಈ ಕೇಸ್ ನ ಬಗ್ಗೆ ಸ್ಟಡಿ ಮಾಡಬೇಕು. ಮಾನ್ಯ ನ್ಯಾಯಾಲಯವು ನನಗೆ ಒಂದು ದಿನ ಸಮಯಾವಕಾಶ ನೀಡಬೇಕು ಎಂದು ಕೇಳಿದ್ದು,ಈ ಕೇಸ್ ವಿಚಾರಣೆ ಗುರುವಾರಕ್ಕೆ (ಜು.24) ಮುಂದೂಡಲಾಗಿದೆ. ಲಿಖಿತ ರೂಪದಲ್ಲಿ ವಾದ ಮಂಡನೆಗೆ ಅವಕಾಶ ಕಲ್ಪಿಸಲಾಗಿದ್ದು ಅಂದೇ ತೀರ್ಪು ಬರುವ ಸಾಧ್ಯತೆ ಇದೆ.

ನಟ ದರ್ಶನ್ ಸೇರಿದಂತೆ 7 ಜನರ ಜಾಮೀನು ರದ್ದು ಕೋರಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿ ಅರ್ಜಿ ವಿಚಾರಣೆ ಸುಪ್ರೀಂಕೋರ್ಟ್‌ನಲ್ಲಿ ನಡೆಯುತ್ತಿದ್ದು ಈಗಾಗಲೇ ಜುಲೈ 17 ರಂದು ಸರ್ಕಾರದ ಪರ ವಕೀಲರ ವಾದ ಆಲಿಸಿರುವ ಸುಪ್ರೀಂಕೋರ್ಟ್, ಹೈಕೋರ್ಟ್ ಜಾಮೀನು ನೀಡಲು ನೀಡಿರುವ ಕಾರಣಗಳು ಸಮಂಜಸವಾಗಿಲ್ಲ ಎಂದು ಹೇಳಿದೆ.

ಈ ಕೇಸ್ ನ ಆರೋಪಿಗಳೈಗೆ ಜಾಮೀನು ನೀಡುವಲ್ಲಿ ಹೈಕೋರ್ಟ್ ತನ್ನ ವಿವೇಚನೆ ಸೂಕ್ತವಾಗಿ ಬಳಸಿಲ್ಲ ಎಂದು ಹೈಕೋರ್ಟ್ ನ ಆದೇಶದ ಬಗ್ಗೆ ಸುಪ್ರೀಂಕೋರ್ಟ್ ಈ ಹಿಂದಿನ ಜುಲೈ 17 ರ ವಿಚಾರಣೆಯಂದು ಅಸಮಾಧಾನ ವ್ಯಕ್ತಪಡಿಸಿತ್ತು. ಇದು ದರ್ಶನ್ ಪಾಲಿಗೆ ಮುಳುವಾಗಬಹುದು ಎನ್ನಲಾಗಿದೆ.