ಬೆಂಗಳೂರು:ರೇಣುಕಾಸ್ವಾಮಿ ಕೊಲೆ ಕೇಸ್ನ ಆರೋಪಿ ನಟ ದರ್ಶನ್ ಅವರು ಪರಪ್ಪನ ಅಗ್ರಹಾರದ ಜೈಲು ಸೇರಿ 2 ತಿಂಗಳು ಕಳೆದಿವೆ. ತಮಗೆ ಜೈಲಿನ ಊಟ ಸೇರುತ್ತಿಲ್ಲ..ಅದರಿಂದ ದೇಹದ ತೂಕ ಮಾತ್ರವಲ್ಲ ಆರೋಗ್ಯದ ಸಮಸ್ಯೆಯಾಗುತ್ತಿದೆ ಎಂದು ಹೋಕೋರ್ಟ್ಗೆ ಮೇಲಿಂದ ಮೇಲೆ ಅರ್ಜಿ ಸಲ್ಲಿಸಿದ್ದರು.
ಅದೇ ರೀತಿ ಮನೆಯ ಊಟಕ್ಕೆ ಅವಕಾಶ ನೀಡದಂತೆಯೂ ಅವರ ವಿರುದ್ಧ ಪೊಲೀಸ್ ಪರ ವಕೀಲರು ನ್ಯಾಯಾಲಯಕ್ಕೆ ರಿಟ್ ಅರ್ಜಿ ಸಲ್ಲಿಸುತ್ತಾ ಬಂದಿದ್ದಾರೆ. ಇದೀಗ ದರ್ಶನ್ಗೆ ಮನೆ ಊಟ ನೀಡದಂತೆ ಆಕ್ಷೇಪಿಸಿ ಅರ್ಜಿ ಸಲ್ಲಿಸಿದ್ದ ವಕೀಲರೊಬ್ಬರಿಗೆ ಹೈಕೋರ್ಟ್ ದಂಡವಿಧಿಸುವುದಾಗಿ ಎಚ್ಚರಿಕೆ ನೀಡಿದೆ.
ಈ ಬಗ್ಗೆ ಅರ್ಜಿ ವಿಚಾರಣೆ ನಡೆಸಿರುವ ನ್ಯಾಯಾಲಯ, ಪ್ರಚಾರಕ್ಕಾಗಿ ಈ ರೀತಿ ಆಕ್ಷೇಪ ವ್ಯಕ್ತಪಡಿಸಿ ಅರ್ಜಿ ಸಲ್ಲಿಸಲಾಗುತ್ತಿದೆಯಾ ಎಂದು ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ಅಲ್ಲದೇ ಸರ್ಕಾರ ಆರೋಪಿಗೆ ಮನೆ ಊಟ ನೀಡಲು ಅನುಮತಿ ಕೊಟ್ಟರೆ, ಆಗ ಆಕ್ಷೇಪ ವ್ಯಕ್ತಪಡಿಸಿ ಅರ್ಜಿ ಸಲ್ಲಿಸಬಹುದು. ಅದಕ್ಕೂ ಮುನ್ನ ಹೀಗೆ ಆಕ್ಷೇಪ ವ್ಯಕ್ತಪಡಿಸುವುದು ಸರಿಯಲ್ಲ. ನಿಮಗೆ ಏನು ಅಧಿಕಾರವಿದೆ ಎಂದು ಕೋರ್ಟ್ ಪ್ರಶ್ನೆ ಮಾಡಿದೆ.
ಇದೇ ರೀತಿ ಮುಂದುವರಿದರೆ ದಂಡ ವಿಧಿಸುವುದಲ್ಲದೇ, ಅರ್ಜಿಯನ್ನು ವಜಾಗೊಳಿಸಲಾಗುವುದು ಎಂದು ನ್ಯಾ.ಹೇಮಂತ್ ಚಂದನ್ ಗೌಡರ್ ಪೀಠ ಎಚ್ಚರಿಕೆ ನೀಡಿದೆ.