ಸೆಂಚುರಿ ಸ್ಟಾರ್ ಡಾ || ಶಿವರಾಜ್ಕುಮಾರ್ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದು ಅವರ ನಟನೆಯ ಘೋಸ್ಟ್ ಚಿತ್ರದ ಚಿತ್ರೀಕರಣ ನಗರದ ಮಿನರ್ವ ಮಿಲ್ನಲ್ಲಿ ಭರದಿಂದ ಸಾಗಿದೆ.
ಇನ್ನು ಚಿತ್ರತಂಡವನ್ನ ಮಲಯಾಳಂನ ಖ್ಯಾತ ನಟ ಜಯರಾಮ್ ಕೂಡಿಕೊಂಡಿದ್ದಾರೆ. ಸಿನಿಮಾ ಚಿತ್ರೀಕರಣಕ್ಕಾಗಿ 3 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಒಟ್ಟು 15 ಸೆಟ್ಗಳನ್ನು ನಿರ್ಮಾಣ ಮಾಡಲಾಗಿದ್ದು ಚಿತ್ರವು ಬಹುತೇಕ ಕಾರಾಗೃಹ ಹಿನ್ನೆಲೆಯಲ್ಲಿ ನಡೆಯಲಿದೆ ಎಂದು ಹೇಳಲಾಗಿದೆ.
ಮಾಲಿವುಡ್ ಅಲ್ಲದೆ ಟಾಲಿವುಡ್ ಹಾಗೂ ಕಾಲಿವುಡ್ ಚಿತ್ರಗಳಲ್ಲಿ ಅಭಿನಯಿಸಿ ತಮ್ಮದೇ ಆದ ಛಾಪನ್ನು ಮೂಡಿಸಿರುವ ಜಯರಾಮ್ ಘೋಸ್ಟ್ ಚಿತ್ರದಲ್ಲಿ ಖಡಕ್ ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗಿದೆ. ಇನ್ನು ಚಿತ್ರದಲ್ಲಿ ಬಾಲಿವುಡ್ ನಟ ಪ್ರಶಾಂತ್ ನಾರಾಯಣನ್ ಕೂಡ ಕಾಣಿಸಿಕೊಳ್ಳಲಿದ್ದಾರೆ.
ಈಗಾಗಲೇ ಫರ್ಸ್ಟ್ ಲುಕ್ನಿಂದ ಸಾಕಷ್ಟು ಕ್ರೇಜ್ ಹುಟ್ಟಿಸಿರುವ ಚಿತ್ರತಂಡ ಮುಂದಿನ ದಿನಗಳಲ್ಲಿ ಅಪ್ಡೇಟ್ ನೀಡುವುಡದಾಗಿ ಹೇಳಿದೆ. ಇನ್ನು ಚಿತ್ರಕ್ಕೆ ಟೋಪಿವಾಲ, ಶ್ರೀನಿವಾಸ ಕಲ್ಯಾಣ, ಓಲ್ಡ್ ಮಾಂಕ್, ಬೀರ್ಬಲ್ ಖ್ಯಾತಿ ಶ್ರೀನಿ ಆಕ್ಷನ್ ಕಟ್ ಹೇಳುತ್ತಿದ್ದು ಸಂದೇಶ್ ನಾಗರಾಜ್ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ.