• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ನಾನು ತಪ್ಪು ಮಾಡಿದ್ರೆ ಶಿರಬಾಗಿ ಒಪ್ಪಿಕೊಳ್ಳುತ್ತೇನೆ ಎಂದ ನಟ ಕಿಚ್ಚ ಸುದೀಪ್

Any Mind by Any Mind
July 10, 2023
in ಸಿನಿಮಾ
0
ಕಿಚ್ಚ ಸುದೀಪ್‌ಗೆ ಬೆದರಿಕೆ ಪತ್ರ ಪ್ರಕರಣ: ಕಾರು ಚಾಲಕನ ವಿಚಾರಣೆ ನಡೆಸಿದ ಸಿಸಿಬಿ
Share on WhatsAppShare on FacebookShare on Telegram

ನಿರ್ಮಾಪಕ ಎಂ.ಎನ್ ಕುಮಾರ್ ಅವರ ಆರೋಪ ಹಿನ್ನಲೆ ಕೊನೆಗೂ ನಟ ಕಿಚ್ಚ ಸುದೀಪ್ ಮೌನ ಮುರಿದಿದ್ಧಾರೆ. ಈ ಆರೋಪಗಳ ಕುರಿತು ತಮ್ಮ ತೀಕ್ಷ್ಣವಾದ ಉತ್ತರವನ್ನ ಪತ್ರದ ಮೂಲಕ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ, ನಿರ್ಮಾಪಕರ ಸಂಘ ಮತ್ತು ಕಲಾವಿದರ ಸಂಘಗಳಿಗೆ ವಿವರಿಸಿದ್ದಾರೆ.

ADVERTISEMENT

ನಾನೇನಾದರೂ ತಪ್ಪು ಮಾಡಿದ್ದರೆ ನ್ಯಾಯಾಲಯದಲ್ಲಿ ಶಿರಬಾಗಿ ಒಪ್ಪಿಕೊಂಡು ದಂಡ ಕಟ್ಟುತ್ತೇನೆ. ನಾನು ಸರಿ ಇದ್ದೇನೆ. ನ್ಯಾಯ ಮತ್ತು ಸತ್ಯ ನನ್ನೊಂದಿಗೆ ಇದೆ ಎಂದು ನಟ ಕಿಚ್ಚ ಸುದೀಪ್‌ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಪತ್ರದಲ್ಲಿ ” ಎಲ್ಲರಿಗೂ ನಮಸ್ಕಾರ. ಕನ್ನಡ ಚಿತ್ರರಂಗ ಮಹಾನ್ ಸಾಧಕರಿಂದ ಬೆಳೆದು ನಿಂತಿದೆ. ಅವರೆಲ್ಲರ ಸಾಧನೆಯ ನಡುವೆ, ನನ್ನದೂ ಒಂದು ಅಳಿಲು ಸೇವೆ ಇದ. ಅಂತಹ ಮಹಾನ್ ಸಾಧಕರೆದುರು ನಾನು ತುಂಬಾ ಕಿರಿಯವ. ಈ ಕಳೆದ 27 ವರ್ಷಗಳಲ್ಲಿ, ನಿರ್ದೇಶಕನಾಗಿ, ನಿರ್ಮಾಪಕನಾಗಿ, ಕಲಾವಿದನಾಗಿ, ಬರಹಗಾರ, ಗಾಯಕ, ಇತ್ಯಾದಿ ಇತ್ಯಾದಿ ಆಗಿ ನಾನು ಈ ಪತ್ರವನ್ನು ನಿಮಗೆ ಬರೆಯುತ್ತಿಲ್ಲ. ಚಿತ್ರೋದ್ಯಮದಲ್ಲಿ ಆ 27 ವರ್ಷಗಳ ಕಾಲ ಕಾಪಾಡಿಕೊಂಡು ಬಂದ ಒಳ್ಳೆಯತನ ಮತ್ತು ಮಾನವೀಯತೆಯ ಆಧಾರದಲ್ಲಿ, ಈ ಮೇಲ್ಕಂಡ ಸಂಸ್ಥೆಗಳ ಮೇಲಿನ ಗೌರವಾಧಾರದ ಮೇಲೆ ಈ ಪತ್ರವನ್ನು ಬರೆಯುತ್ತಿದ್ದೇನೆ.’

‘ವಾಣಿಜ್ಯ ಮಂಡಳಿಗೆ ನಿರ್ಮಾಪಕರೊಬ್ಬರು ಮೊರೆ ಬಂದಿರುವುದು ಸರಿ ಅಷ್ಟೇ. ಸ್ಪಂದಿಸಬೇಕಾದುದ್ದು ನಿಮ್ಮ ಕರ್ತವ್ಯ, ನೀವು ಸ್ಪಂದಿಸಿದ್ದೀರಿ. ಆ ಬಗ್ಗೆ ನನಗೆ ಯಾವುದೂ ತಕರಾರು ಇರುವುದಿಲ್ಲ. ಆದರೂ, ಯಾವುದೇ ನಿರ್ಮಾಪಕರು, ಯಾರೇ ಕಲಾವಿದರ ತಂತ್ರಜ್ಞರ ಮೇಲೆ ನಿರಾಧಾರ ಸುಳ್ಳು ಆರೋಪಗಳನ್ನು ಮಾಡುವಾಗ, ಕನಿಷ್ಠ ದಾಖಲಾತಿಗಳನ್ನು ಪರಿವೀಕ್ಷಿಸುವುದು ಮಾತೃ ಸಂಸ್ಥೆಗಳಾದ ನಿಮ್ಮದೂ ಜವಾಬ್ದಾರಿ ಆಗಿರುತ್ತದೆಂದು ವಿನಮ್ರತೆಯಿಂದ ಮನವಿ ಮಾಡುತ್ತೇನೆ. ಈ ಹಿಂದೆ ನೀವು ಇದನ್ನೆಲ್ಲ ಪರಿಶೀಲಿಸಲಿಲ್ಲವೆಂದಲ್ಲ. ಈ ಬಾರಿ ನನ್ನ ವಿಚಾರದಲ್ಲಿ ಅದೇಕೋ ನಡೆಯುತ್ತಿಲ್ಲ, ಕಾರಣವೂ ನನಗೆ ತಿಳಿಯುತ್ತಿಲ್ಲ.’

ಅಲ್ಲದೆ, ಈಗಾಗಲೇ ಒಂದು ಪತ್ರದ ಮೂಲಕ ಮತ್ತು ನನ್ನ ಮನೆಯಲ್ಲಿ ನಡೆದ ಸುದೀರ್ಘ ಚರ್ಚೆಯಲ್ಲಿ, ನನ್ನ ಕಡೆಯಿಂದ ಕೊಡಬೇಕಾದ ಅಷ್ಟೂ ವಿವರಣೆಗಳನ್ನು ಅತ್ಯಂತ ಸಂಯಮದಿಂದ ತಮ್ಮ ಮುಂದೆ ಇಟ್ಟಿದ್ದೇನೆ. ಆ ಬಗ್ಗೆ ಬಹಿರಂಗವಾಗಿ ವಿವರಿಸುವುದಾದರೆ ಎಂ.ಎನ್​. ಕುಮಾರ್ ಅವರನ್ನು ನಾನು ಹಲವು ಬಾರಿ ಮುಖತಃ ಭೇಟಿಯಾಗಿದ್ದೇನೆ. ಒಂದು ಅನುಕಂಪದ ಆಧಾರದಲ್ಲಿ ಅವರಿಗೆ ಸಹಾಯ ಮಾಡಲು ಪುಯತ್ನಿಸಿದ್ದೇನೆ. ನಾನಾ ಪುಯತ್ನಪಟ್ಟರೂ ಅವರ ಹಲವಾರು ಕಾರಣಗಳಿಂದ ಸಾಧ್ಯವಾಗಲಿಲ್ಲ. ಅವರು ನನ್ನ ವಿರುದ್ಧ ವದಂತಿಗಳನ್ನು ಹಬ್ಬಿಸಲು ಶುರುಮಾಡಿದಾಗ ಕುಮಾರ್ ಅವರನ್ನು ಮುಖತಃ ಭೇಟಿಯಾಗುವುದನ್ನು ನಿಲ್ಲಿಸಿದೆ.ಇದೆಲ್ಲವನ್ನೂ ತಮಗೆ ವಿವರಿಸಿದೆ. ಅದಾದ ನಂತರವೂ, ಮಂಡಳಿಯ ಕಚೇರಿಯಲ್ಲಿ, ನನ್ನ ವಿರುದ್ಧ ಸುಳ್ಳು, ನಿರಾಧಾರ ಆರೋಪಗಳ ಪತ್ರಿಕಾಗೋಷ್ಠಿ ನಡೆಯಿತು. ಆ ಅಭಿವ್ಯಕ್ತಿ ಸ್ವಾತಂತ್ರವನ್ನೂ ನಾನು ಗೌರವಿಸುತ್ತೇನೆ. ಜೊತೆಗೆ, ಸಂಧಾನ ಎಂಬ ಮಹತ್ತರ ಬೆಳವಣಿಗೆಯ ಪದವೊಂದು ಹುಟ್ಟಿಕೊಂಡಿತು. ಸಂಧಾನ ಎಂದರೇನು? ಆ ನಿರ್ಮಾಪಕರು, ಅವರೆಲ್ಲಾ ಕಷ್ಟಗಳಿಗೆ, ನನ್ನನ್ನೇ ಹೊಣೆಗಾರನನ್ನಾಗಿಸಿ, ಬಲವಂತವಾಗಿ ಹಣ ಪಡೆಯುವುದು. ನಾನು ಈ ಸುದೀರ್ಘ ವರ್ಷಗಳ ಕಾಲ ಕಾಪಾಡಿಕೊಂಡು ಬಂದ ನೈತಿಕತೆ, ಹೊಣೆಗಾರಿಕೆ, ವ್ಯಕ್ತಿತ್ವದ ಕಾರಣಕ್ಕೆ, ಹಣ ಕೊಡಬೇಕಾಗಿಲ್ಲವೆಂಬ ನನ್ನ ನಿಲುವಿಗೆ ನಾನು ಬದ್ಧವಾಗುವುದು.’

‘ಇದನ್ನು ಒಂದು ಉದಾಹರಣೆಯಾಗಿ ತಮಗೆ ಅರ್ಥ ಮಾಡಿಸುವುದಾದರೆ, ಒಂದು ದಾಂಪತ್ಯದಲ್ಲಿ ಬಿರುಕು ಬಂದರೆ, ಆ ಕುಟುಂಬದ ಸ್ನೇಹಿತರು, ಯಾರ ಪರವಾಗಿ ನಿಲ್ಲಬೇಕೆಂದು ಸಂಕಟ ಪಡುತ್ತಾರೆ. ಆ ಸಂಧಿಗ್ಧತೆಯಲ್ಲಿ ಒಬ್ಬರ ಪರ ನಿಲ್ಲುವುದು ಸಮಂಜಸವೂ ಆಗಿರುವುದಿಲ್ಲ. ಅಂತಹದ್ದೇ ಒಂದು ಒತ್ತಡ, ಸಂದಿಗ್ನತೆ ಈಗ ನಮ್ಮ ಮಾತೃ ಸಂಸ್ಥೆಗಳದ್ದು. ಆ ಒತ್ತಡ, ಸಂಕಷ್ಟಕ್ಕೆ ನೀವುಗಳು ಸಿಲುಕಬಾರದೆಂದೇ ನಾನು ನ್ಯಾಯಾಲಯದ ಮೊರೆ ಹೋಗಿದ್ದು.’

’27 ವರ್ಷಗಳ ಕಾಲ ನಾನು ಎಂದಾದರೂ ಒಂದೇ ಒಂದು ಕಪ್ಪು ಚುಕ್ಕೆ ಬೀಳುವಂತೆ ನಡೆದುಕೊಂಡಿಲ್ಲ. 80 ವರ್ಷಗಳ ಕಾಲ ಚಿತ್ರರಂಗದ ರಥ ಎಳದು ಬಂದಿರುವುದು, ಈ ನಂಬಿಕೆ ಎಂಬ ಹಗ್ಗದ ಮೇಲೆಯೇ. ಆ ನಂಬಿಕೆಯ ಹಗ್ಗದ ಮೇಲೆಯೇ ನಾನು ವಿಶೇಷ ಪಾತ್ರಗಳನ್ನು ಹೊರತು ಪಡಿಸಿ 45 ಸಿನಿಮಾಗಳಲ್ಲಿ ದಾಖಲೆಯಾಗಿ ಉಳಿದಿದ್ದೇನೆ. ನನಗೂ ಬಹುಪಾಲು ನಿರ್ಮಾಪಕರಿಂದ ಹಣ ಬರಬೇಕಿದೆ. ಎಂದಾದರೂ ಮಂಡಳಿಯ ಕದ ತಟ್ಟಿದ್ದೇನೆಯೇ? ಈವರೆಗೂ ಈ ನಿಮ್ಮ ಪ್ರೀತಿಯ ಸುದೀಪ ಒಳ್ಳೆತನಕ್ಕೆ ಉದಾಹರಣೆ ಆಗಿದ್ದಾನೆ ಹೊರತು ಕೆಟ್ಟ ತನಕಲ್ಲ.’

‘ಯಾಕೆ ನಿಮ್ಮ ಬಳಿ ಆಗ ಬರಲಿಲ್ಲವೆಂದರೆ, ಚಿತ್ರರಂಗದಲ್ಲಿ ಬಹುಪಾಲು ಸಂದರ್ಭಗಳಲ್ಲಿ ಬರಬೇಕಾದ ಹಣ ಬಂದಿಲ್ಲ. ಹಲವಾರು ಕಡೆ ಬಂದಿದೆ. ನಾನವರಿಗೆ ಋಣಿ ಆಗಿದ್ದೇನೆ. ಕೆಲವರು ತಲೆ ಮರೆಸಿಕೊಂಡಿದ್ದಾರೆ. ಕೆಲವರು ವದಂತಿಗಳನ್ನು ಹಬ್ಬಿಸುವುದರಲ್ಲಿ ಕಳೆದು ಹೋಗಿದ್ದಾರೆ. ಇಂತಹ ಎಲ್ಲ ಸಂದರ್ಭಗಳು ನಡೆದಿದ್ದು ಆ ನಂಬಿಕೆ ಇಂದಲೇ. ದಾಖಲೆಗಳಿದ್ದಲ್ಲಿ ತಮ್ಮ ಬಳಿ ನಾನೇ ಬರುತ್ತಿದ್ದೆ. ಇಂತಹ ಸಂದರ್ಭಗಳಲ್ಲಿ ಸ್ನೇಹ, ಅನುಕಂಪ, ಪ್ರೀತಿಗೆ ತಲೆ ಬಾಗಿದ್ದೇನೆ. ಹಲವು ಬಾರಿ ನನ್ನ ದಡ್ಡತನದಿಂದ ನಾನೇ ಪಾಠ ಕಲಿತಿದ್ದೇನೆ.’

‘ಈಗಲೂ, ಈ ವಿಷಯದಲ್ಲಿ ಇಷ್ಟು ಕಠಿಣವಾದ ಹೋರಾಟ ಮಾಡುತ್ತಿರುವುದು ಚಿತ್ರರಂಗದ ಮುಂದಿನ ಭವಿತವ್ಯಕ್ಕೆ ಕೆಟ್ಟ ಉದಾಹರಣೆಗಳು ದಕ್ಕಬಾರದು ಎಂದು. ಸಂಪೂರ್ಣ ಸಂಭಾವನೆ ಪಡೆದು ಸಿನಿಮಾ ಮಾಡಲಿಲ್ಲವೆಂಬ ದುಷ್ಟ ಸುಳ್ಳು, ಉದಾಹರಣೆಗೆ ನಾನು ಸಿಲುಕಬಾರದು. ಈ ಕಾರಣಕ್ಕೆ ಬೇರೆಲ್ಲರ ವಿಷಯದಲ್ಲಿ ಅತ್ಯಂತ ಮಾನವೀಯವಾಗಿ, ಪ್ರೀತಿಯಿಂದ ವರ್ತಿಸುವ ನಾನು ಕಠಿಣವಾಗಿದ್ದೇನೆ. ನನ್ನ ಮತ್ತು ನನ್ನ ಕುಟುಂಬದ ನಿಲುವಿಗೆ ಬದ್ಧನಾಗಿದ್ದೇನೆ.’

‘ಒಂದು ಮಾತು ನಿಮ್ಮ ಪತ್ರಿಕಾಗೋಷ್ಠಿಯಲ್ಲಿ ಹೊರಬಂತು. ಅದು ನನಗೆ ತೀವು ನೋವು ಉಂಟು ಮಾಡಿತು. ದುಃಖ ಉಂಟು ಮಾಡಿತು. ಶ್ರೀಯುತ ಸುರೇಶ್ ನನಗೂ ಪರಿಚಿತರು. ಎದುರಾದಾಗ ಕುಶಲ ಕ್ಷೇಮ ಮಾತನಾಡುವಷ್ಟು ಸಲಿಗೆ ಉಳ್ಳವರು. ನಿರ್ಮಾಪಕರೂ ಆದ ಅವರು, ಓರ್ವ ನಿರ್ಮಾಪಕರ ಪರ ನಿಲ್ಲಬೇಕೆಂಬ ಸೀಮಿತವಾದ ಕಾರಣಕ್ಕೆ, ಕುಮಾರ್ ಅವರು ಮೂರ್ ನಾಲ್ಕು ಬಾರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಹಾಗೇನಾದರೂ ಅವರಿಗೆ ಪ್ರಾಣಾಪಾಯವಾದರೆ, ಸುದೀಪ್ ಹೊಣೆ ಅಂದದ್ದು, ನನಗಲ್ಲ, ಇಡೀ ಸಮಾಜಕ್ಕೆ ಕೊಟ್ಟ ಅಪಾಯಕಾರಿ ಸಂದೇಶ, ಯಾವಾಗಿನಿಂದ ಕನ್ನಡ ಚಿತ್ರರಂಗದಲ್ಲಿ ಈ ಕೆಟ್ಟ ಬೆಳವಣಿಗೆ ಆರಂಭವಾಯಿತು?’

‘ದೈಹಿಕವಾಗಿ, ಮಾನಸಿಕವಾಗಿ, ಕುಮಾರ್​ಗಾಗಲಿ, ಯಾರಿಗೇ ಆಗಲಿ, ಹಲವಾರು ಸಮಸ್ಯೆಗಳು ಬರಬಹುದು, ಹಾಗೇನಾದರು ಅವರಿಗೆ ತೊಂದರೆ ಆದರೆ ಅದು ನನ್ನಿಂದ ಎಂಬ ಮಹಾಪರಾಧದ ಹೇಳಿಕೆ ನನಗೆ ತೀವ್ರು ನೋವು ತಂದಿದೆ. ನಾನು ಬದುಕಿನುದ್ದಕ್ಕೂ ಈ ನೋವನ್ನು ಅನುಭವಿಸಲೇ? ಇಂತಹ ಘಟನೆಗೆ ನಾನು ಸಾಕ್ಷಿ ಪ್ರಜ್ಞೆ ಆಗಲಾರೆ. ಹಾಗಾಗಿ ನ್ಯಾಯಾಲಯದ ಹೋರಾಟಕ್ಕೆ ಸುರೇಶವರನ್ನು ಭಾಗಿ ಮಾಡಿದ. ಅವರಿಗೂ ನೋಟೀಸ್ ಕಳಸಿದ ವಿನಃ ಕೋಪ ತಾಪ ಆಕ್ರೋಶದಿಂದಲ್ಲ. ನೋವಿನಿಂದ ಸುರೇಶ್ ಅವರ ವಿಚಾರದಲ್ಲಿ ಇನ್ನೂ ವಿವರಿಸುವುದಾದರೆ ನನ್ನ ತನಕ ಅಪರಿಚಿತರೋ, ಪರಿಚಿತರೋ, ಸಿನಿಮಾ ರಂಗದವರೋ ಅಲ್ಲವೋ, ಸಹಕಲಾವಿದರೋ, ತಂತ್ರಜ್ಞರೋ ಯಾರೇ ಬಂದು ಸಹಾಯ ಕೇಳಿದಾಗಲೂ ದೇವರು ಕೊಟ್ಟಿರುವ ಶಕ್ತಿಯಲ್ಲಿ ನನ್ನ ಕೈಲಾದಷ್ಟೂ ಸಹಾಯ ಮಾಡಿದ್ದೇನೆ. ಯಾರದೇ ಆಗಲಿ ಜೀವನ-ಜೀವ ಉಳಿಸಲು ಪ್ರಯತ್ನಿಸಿದ್ದೇನೇ ಹೊರತು ಯಾರ ಜೀವ ಹೋಗಲೂ ನಾನು ಬದುಕಿನುದ್ದಕ್ಕೂ ಸಾಕ್ಷಿಯಾಗಲಾರೆ.’

‘ಎಲ್ಲ ನಿರ್ಮಾಪಕರ ಬಗ್ಗೆ ಗೌರವವಿಲ್ಲದೆ, ನಂಬಿಕೆ ಇಲ್ಲದೆ, ಇಷ್ಟರವರೆಗೆ ನಾನು ಚಿತ್ರರಂಗದಲ್ಲಿ ನೆಲೆನಿಂತೇನೆ? ನನ್ನ ಮನೆಯಲ್ಲೂ ವೃದ್ಧ ಪೋಷಕರಿದ್ದಾರೆ. ನಂಗೂ ಕಣ್ಣೀರಿದೆ. ದುಃಖ ದುಮ್ಮಾನಗಳಿವೆ. ನಮ್ಮಲ್ಲಿ ಯಾರಿಗೇ ತೊಂದರೆಯಾದರೂ, ಮಂಡಳಿಯೇ ಅಥವಾ ಯಾವುದೇ ನಿರ್ದಿಷ್ಟ ವ್ಯಕ್ತಿ ಹೂಣೆಗಾರ ಎನ್ನಲಾದೀತೆ? ಎಂದಾದರೂ ಹಾಗೆ ನಡೆದುಕೊಂಡಿದ್ದೇನೆಯೇ?’

‘ಇನ್ನು, ರಾಜರಾಜೇಶ್ವರಿ ನಗರದ ಮನೆಯ ವಿಷಯದಲ್ಲಿ ಒಂದು ಸ್ಪಷ್ಟನೆ ತಮಗೆ ವಯಕ್ತಿಕವಾಗಿ ನೀಡುತ್ತೇನೆ. ನಾನು ತುಂಬಾ ಆಸ್ತಿವಂತ ಅಲ್ಲದೇ ಇರಬಹುದು. ಆದರೆ ಸಂಪಾದಿಸಿದ ಆಸ್ತಿಯಲ್ಲಿ ನನ್ನ ಬೆವರಿದೆ, ಶ್ರಮವಿದೆ. ಶೇಕಡ 95ರಷ್ಟು ಬ್ಯಾಂಕ್ ಲೋನ್ ಪಡೆದು ಆ ಮನೆ ಖರೀದಿಸಿದ್ದೇನೆ. ಈ ಎಲ್ಲ ವಿವರಗಳನ್ನು ನ್ಯಾಯಾಲಯಕ್ಕೆ ನೀಡಬಲ್ಲೆ ಎಂಬ ನೈತಿಕ ಶಕ್ತಿಯ ಮೇರೆಗೆ ಈ ಕಠಿಣ ನಿಲುವು ಹೊಂದಿದ್ದೇನೆ.’

‘ಈ ಮೇಲ್ಕಂಡ ಕಾರಣಕ್ಕೆ ನಾನು ಎರಡು ವಿನಂತಿಗಳನ್ನು ತಮ್ಮಲ್ಲಿ ಮಾಡಿಕೊಳ್ಳುತ್ತೇನೆ. ಯಾರೇ ನಿಮ್ಮಲ್ಲಿ ದೂರಿಟ್ಟರೂ, ಯಾವುದೇ ಕಲಾವಿದರಿರಬಹುದು, ತಂತ್ರಜ್ಞರಿರಬಹುದು, ಯಾವುದೇ ವಿಭಾಗದವರಾಗಿರಬಹುದು, ಆ ದೂರಿನ ಕುರಿತಾದ ಸಾಕ್ಷಾಧಾರಗಳನ್ನು ಪರಿಶೀಲಿಸಿ ಮುಂದುವರಿಯಿರಿ ಮತ್ತು ಈ ಕೆಟ್ಟ ಪರಂಪರೆಗೆ ನಾಂದಿ ಹೇಳುವುದಕ್ಕೆ ನಾವು ಯಾರು ಹೊಣೆಗಾರರಾಗುವುದು ಬೇಡ. ದಯಮಾಡಿ ತಾವು ಸಂದಿಗ್ಧತೆಗೆ ಒಳಗಾಗದೆ, ನನ್ನ ಮೇಲೂ ಬಲವಂತದ ಒತ್ತಡ ಹಾಕದೆ, ನ್ಯಾಯಾಲಯದಲ್ಲೇ ಇದನ್ನು ಬಗೆಹರಿಸಿಕೊಳ್ಳಲು ಬಿಡಿ. ನಾನೇನಾದರೂ ತಪ್ಪು ಮಾಡಿದರೆ ನ್ಯಾಯಾಲಯದಲ್ಲೇ ಶಿರಬಾಗಿ ಒಪ್ಪಿಕೊಂಡು ದಂಡ ಕಟ್ಟುತ್ತೇನೆ. ನಾನು ಸರಿ ಇದ್ದೇನೆ. ನ್ಯಾಯ ಮತ್ತು ಸತ್ಯ ನನ್ನೊಂದಿಗಿದೆ ಎಂದು ಸಾಬೀತು ಮಾಡಿಕೊಳ್ಳಲು ನಂಗೊಂದಿಷ್ಟು ಅವಕಾಶ ಕೊಡಿ ಎಂದು ಪ್ರೀತಿಯಿಂದ ಕೇಳಿಕೊಳ್ಳುತ್ತಾ’

ಎಂದೆಂದಿಗೂ ನಿಮ್ಮವ
ಕಿಚ್ಚ ಸುದೀಪ.’

ಎಂದು ಚಲನಚಿತ್ರೋದ್ಯಮದ ಹಲವು ಸಂಘಟನೆಗಳಿಗೆ ಬರೆದ ಪತ್ರದಲ್ಲಿ ತಮ್ಮ ವಿರುದ್ಧದ ಆರೋಪಗಳಿಗೆ ಸಾಕಷ್ಟು ಸ್ಪಷ್ಟನೆಯನ್ನ ನೀಡಿದ್ದಾರೆ. ಇನ್ನು ಈ ವಿಚಾರವನ್ನ ಸಂಧಾನದಲ್ಲಿ ಮುಗಿಸಿಕೊಳ್ಳುವುದಿಲ್ಲ ಎಂಬುವುದನ್ನ ನಟ ಕಿಚ್ಚ ಸುದೀಪ್ ತಮ್ಮ ಪತ್ರದ ಮೂಲಕ ಉತ್ತರ‌ ನೀಡಿದ್ದು, ಮುಂದಿನ ದಿನಗಳಲ್ಲಿ ಕೋರ್ಟ್ ಮುಖಾಂತರ ಹೋರಾಟ ಮಾಡುವುದಾಗಿಯೂ ಸ್ಪಷ್ಟ ಪಡಿಸಿದ್ದಾರೆ.

Tags: Kannada Film Industrykannada movie producerKFIkiccha sudeepsandalwood
Previous Post

ಸಿನಿ ಪ್ರಿಯರಲ್ಲಿ ಭಾರೀ ನಿರೀಕ್ಷೆ ಮೂಡಿಸಿದ ವಾಲಟ್ಟಿ ಟ್ರೈಲರ್

Next Post

50 ಸಾವಿರ ರಷ್ಯಾ ಯೋಧರ ಸಾವು: ಕೇವಲ 6 ಸಾವಿರ ಸಾವು ಎಂದು ಸುಳ್ಳು ಹೇಳಿದ್ದ ರಷ್ಯಾ

Related Posts

ಸ್ಟಾರ್ ನಟಿ ಸೌಂದರ್ಯ ನೆನಪು: ವದಂತಿಗಳಿಗೆ ತೆರೆ ಎಳೆದ ಜಗಪತಿ ಬಾಬು – ಭಾವುಕ ಮಾತುಗಳು ವೈರಲ್
ಸಿನಿಮಾ

ಸ್ಟಾರ್ ನಟಿ ಸೌಂದರ್ಯ ನೆನಪು: ವದಂತಿಗಳಿಗೆ ತೆರೆ ಎಳೆದ ಜಗಪತಿ ಬಾಬು – ಭಾವುಕ ಮಾತುಗಳು ವೈರಲ್

by ಪ್ರತಿಧ್ವನಿ
April 26, 2026
0

ಚಿತ್ರರಂಗದಲ್ಲಿ ಅತಿ ಕಡಿಮೆ ಅವಧಿಯಲ್ಲಿ ಅಪಾರ ಖ್ಯಾತಿ ಗಳಿಸಿದ ನಟಿಯರಲ್ಲಿ ಸೌಂದರ್ಯ ಪ್ರಮುಖರು. ತಮ್ಮ ಸಹಜ ಸೌಂದರ್ಯ, ಮೃದು ಅಭಿನಯ ಮತ್ತು ಪಾತ್ರಗಳಿಗೆ ಜೀವ ತುಂಬುವ ಸಾಮರ್ಥ್ಯದಿಂದ...

Read moreDetails
ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

ಸರ್ಜಾ–ದರ್ಶನ್ ಕುಟುಂಬಗಳ ನಡುವೆ ಬಿರುಕು? ಧ್ರುವ ಸರ್ಜಾ ಸ್ಪಷ್ಟನೆಗೆ ತೆರೆಬಿದ್ದ ವದಂತಿಗಳು

April 25, 2026
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ

April 24, 2026
ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

April 19, 2026
ರಾಮಾಯಣ ಹೇಳಿಕೆಗೆ ನಟ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ: ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ

ರಾಮಾಯಣ ಹೇಳಿಕೆಗೆ ನಟ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ: ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ

April 16, 2026
Next Post
50 ಸಾವಿರ ರಷ್ಯಾ ಯೋಧರ ಸಾವು: ಕೇವಲ 6 ಸಾವಿರ ಸಾವು ಎಂದು ಸುಳ್ಳು ಹೇಳಿದ್ದ ರಷ್ಯಾ

50 ಸಾವಿರ ರಷ್ಯಾ ಯೋಧರ ಸಾವು: ಕೇವಲ 6 ಸಾವಿರ ಸಾವು ಎಂದು ಸುಳ್ಳು ಹೇಳಿದ್ದ ರಷ್ಯಾ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada