ಮೈಸೂರು :ನಗರದ ಚಾಮುಂಡಿ ಬೆಟ್ಟ ಅಭಿನಯ ಚಕ್ರವರ್ತಿ , ಕಿಚ್ಚ ಸುದೀಪ ಭೇಟಿ ನೀಡಿದ್ದಾರೆ. ನಾಡಿನ ಅದಿದೇವತೆ ಚಾಮುಂಡೇಶ್ವರಿಯ ದರ್ಶನ ಪಡೆದ ಕಿಚ್ಚ ಸುದೀಪ್ ಒಳಿತಾಗಲೆಂದು ಪ್ರಾರ್ಥನೆ ಸಲ್ಲಿಸಿದ್ರು.
ನಟ ಸುದೀಪ್ರನ್ನು ಚಾಮುಂಡಿ ಬೆಟ್ಟದಲ್ಲಿ ನೋಡುತ್ತಿದ್ದಂತೆಯೇ ಅಭಿಮಾನಿಗಳು ಶಿಳ್ಳೆ, ಕೇಕೆ , ಜೈಕಾರ ಹಾಕಿ ಖುಷಿಯನ್ನು ಹೊರ ಹಾಕಿದ್ದಾರೆ. ಇನ್ನೂ ಕೆಲವು ಫ್ಯಾನ್ಸ್ ನೆಚ್ಚಿನ ನಟನ ಜೊತೆ ಸೆಲ್ಫಿ ತೆಗೆದುಕೊಳ್ಳಲು ಮುಗಿಬಿದ್ದ ದೃಶ್ಯಗಳೂ ಸಹ ಕಂಡು ಬಂತು.
ಸದ್ಯ ನಟ ಕಿಚ್ಚ ಸುದೀಪ ತಮಿಳು ಚಿತ್ರರಂಗಕ್ಕೆ ಕಾಲಿಡಲಿದ್ದಾರೆ ಎಂಬ ಸುದ್ದಿ ಕೂಡ ಎಲ್ಲೆಡೆ ವೈರಲ್ ಆಗ್ತಿದೆ. ವಿಜಯ್ ನಿರ್ದೇಶನದ ಸಸ್ಪೆನ್ಸ್ , ಥ್ರಿಲ್ಲರ್ ಸಿನಿಮಾದಲ್ಲಿ ನಟ ಕಿಚ್ಚ ಸುದೀಪ ನಟಿಸಲಿದ್ದಾರೆ ಎಂದು ಹೇಳಲಾಗ್ತಿದೆ.