ಅಭಿನಯ ಚಕ್ರವರ್ತಿ ನಟ ಕಿಚ್ಚ ಸುದೀಪ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿರನ್ನು ದೆಹಲಿಯಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಚಿವ 13 ವರ್ಷಗಳ ಬಳಿಕ ದೆಹಲಿಗೆ ನಟ ಭೇಟಿ ನೀಡಿದ್ದು ಕಲೆ, ಸಂಸ್ಕೃತಿ ಹಾಗೂ ಸಾಮಾಜಿಕ ಚಟುವಟಿಕೆಗಳು ಸೇರಿದಂತೆ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದಾರೆ.
ಬಹುಭಾಷಾ ನಟರಾಗಿ ಮಿಂಚುತ್ತಿರುವ ಅವರು ಚುತ್ರರಂಗದಲ್ಲಿ ಬಹುಎತ್ತರಕ್ಕೆ ಬೆಳೆಯಲಿ ಎಂದು ಟ್ವೀಟ್ ಮಾಡಿ ಶುಭ ಹಾರೈಸಿದ್ದಾರೆ.






