ಸ್ಯಾಂಡಲ್ವುಡ್ ನಟ ಶ್ರೀ ಮುರಳಿ ಕಾಲಿಗೆ ಪೆಟ್ಟಾಗಿದ್ದು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬಘೀರ ಚಿತ್ರದ ಶೂಟಿಂಗ್ನಲ್ಲಿ ಭಾಗಿಯಾಗಿದ್ದ ನಟ ಮುರಳಿ ಕಾಲಿಗೆ ಪೆಟ್ಟಾಗಿದೆ. ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿರುವ ಮುರಳಿಗೆ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ.
ಹೊಂಬಾಳೆ ಪ್ರೊಡಕ್ಷನ್ನಲ್ಲಿ ಮೂಡಿ ಬರುತ್ತಿರುವ ಈ ಚಿತ್ರವನ್ನು ಲಕ್ಕಿ ಚಿತ್ರದ ನಿರ್ದೇಶಕ ಸೂರಿ ನಿರ್ದೇಶನ ಮಾಡುತ್ತಿದ್ದಾರೆ. ಫೈಟಿಂಗ್ ಸೀನ್ ಶೂಟಿಂಗ್ ಮಾಡುವಾಗ ಅವಘಡ ಸಂಭವಿಸಿದೆ. ಸ್ಟಂಟ್ ಮಾಡಲು ಹೋಗಿ ಪೆಟ್ಟು ಮಾಡಿಕೊಂಡು ಆಸ್ಪತ್ರೆ ಸೇರಿದ್ದಾರೆ ನಟ ಶ್ರೀಮುರಳಿ.
ಸದ್ಯಕ್ಕೆ ಆತಂಕ ಪಡುವಂತಹ ವಿಚಾರ ಏನಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಮೈಸೂರಿನಲ್ಲೇ ಚಿಕಿತ್ಸೆ ನೀಡಬೇಕಾ..? ಅಥವಾ ಬೆಂಗಳೂರಿಗೆ ಶಿಫ್ಟ್ ಮಾಡಬೇಕಾ..? ಅನ್ನೋ ಬಗ್ಗೆ ಕುಟುಂಬಸ್ಥರು ಇನ್ನೂ ನಿರ್ಧಾರ ಮಾಡಿಲ್ಲ, ತಜ್ಞ ವೈದ್ಯರ ಸಲಹೆಯಂತೆ ಮುಂದುವರಿಯಲು ನಿರ್ಧಾರ ಮಾಡಲಾಗಿದೆ.