ಕನ್ನಡ ಚಿತ್ರರಂಗದ ಖ್ಯಾತ ನಟ ಸತ್ಯ ಉಮ್ಮಾತ್ತಾಲ್(70) ಹೃದಯಾಘಾತದಿಂದ ಇಹಲೋಕ ತ್ಯಜಿಸಿದ್ದಾರೆ.
ಮೂಲತಃ ಚಿತ್ರದುರ್ಗ ಜಿಲ್ಲೆಯ ಕೆಳಗೋಟೆ ಮೂಲದವರಗಿದ್ದ ಸತ್ಯರವರು ಅನೇಕ ಕನ್ನಡ ಚಿತ್ರಗಳಲ್ಲಿ ನಟಿಸಿ ಖ್ಯಾತಿ ಪಡೆದಿದ್ದರು.
ಇವರು ನಟ/ನಿರ್ದೇಶಕ ಯೋಗರಾಜ್ ಭಟ್ರವರ ಮಾವ ಎಂದು ತಿಳಿದು ಬಂದಿದೆ. ಮೃತರ ಅಂತಿಮ ದರ್ಶನವನ್ನ ಯೋಗರಾಜ್ ಬಟ್ ಮೆನಯಲ್ಲೇ ವ್ಯವಸ್ಥೆ ಮಾಡಲಾಗಿದ್ದು ಸಂಜೆ ಬೆಂಗಳೂರಿನಲ್ಲಿ ಅಂತ್ಯ ಸಂಸ್ಕಾರ ನೆರವೇರಿಸಲಾಗುವುದು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಸತ್ಯರ ಸಾವಿಗೆ ಕನ್ನಡ ಚಿತ್ರರಂಗದ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.