• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

“ಲ್ಯಾಂಡ್ ಲಾರ್ಡ್” ಚಿತ್ರದ ಚಿತ್ರೀಕರಣದಲ್ಲಿ ನಟ ವಿಜಯ್ ಕುಮಾರ್(ದುನಿಯಾ ವಿಜಯ್) ಹುಟ್ಟುಹಬ್ಬ .

ಪ್ರತಿಧ್ವನಿ by ಪ್ರತಿಧ್ವನಿ
January 21, 2025
in Top Story, ಇದೀಗ, ಸಿನಿಮಾ
0
“ಲ್ಯಾಂಡ್ ಲಾರ್ಡ್” ಚಿತ್ರದ ಚಿತ್ರೀಕರಣದಲ್ಲಿ ನಟ ವಿಜಯ್ ಕುಮಾರ್(ದುನಿಯಾ ವಿಜಯ್) ಹುಟ್ಟುಹಬ್ಬ .
Share on WhatsAppShare on FacebookShare on Telegram

ADVERTISEMENT

ಕೆ.ವಿ.ಸತ್ಯಪ್ರಕಾಶ್, ಕೆ.ಎಸ್ ಸೂರಜ್‌ ಗೌಡ ನಿರ್ಮಾಣದ ಹಾಗೂ ಜಡೇಶ ಕೆ ಹಂಪಿ ನಿರ್ದೇಶನದ ಈ ಚಿತ್ರಕ್ಕೆ ನೆಲಮಂಗಲದ ಬಳಿ ಬಿರುಸಿನ ಚಿತ್ರೀಕರಣ .

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ನಾಯಕರಾಗಿ ನಟಿಸಿದ್ದ “ಸಾರಥಿ” ಚಿತ್ರವನ್ನು ನಿರ್ಮಿಸಿದ್ದ ಕೆ‌.ವಿ.ಸತ್ಯಪ್ರಕಾಶ್ ಅವರು ಹನ್ನೆರಡು ವರ್ಷಗಳ ನಂತರ “ಸಾರಥಿ ಫಿಲಂಸ್” ಮೂಲಕ ನೂತನ ಚಿತ್ರ ನಿರ್ಮಾಣಕ್ಕೆ ಮುಂದಾಗಿದ್ದಾರೆ. ನಿರ್ಮಾಣಕ್ಕೆ ಸತ್ಯಪ್ರಕಾಶ್ ಅವರ ಪುತ್ರ ಸೂರಜ್ ಗೌಡ ಅವರು ಸಾಥ್ ನೀಡಿದ್ದಾರೆ. “ಜಂಟಲ್ ಮ್ಯಾನ್”, “ಗುರುಶಿಷ್ಯರು” ಚಿತ್ರಗಳ ನಿರ್ದೇಶಕ, “ಕಾಟೇರ” ಚಿತ್ರದ ಲೇಖಕ ಜಡೇಶ ಕೆ ಹಂಪಿ ನಿರ್ದೇಶನದ ಹಾಗೂ ವಿಜಯ್ ಕುಮಾರ್(ದುನಿಯಾ ವಿಜಯ್) ನಾಯಕರಾಗಿ ನಟಿಸುತ್ತಿರುವ ಚಿತ್ರ “ಲ್ಯಾಂಡ್ ಲಾರ್ಡ್”. ಪ್ರಸ್ತುತ ಈ ಚಿತ್ರದ ಚಿತ್ರೀಕರಣ ನೆಲಮಂಗಲದ ಬಳಿ ನಿರ್ಮಿಸಲಾಗಿರುವ ಅದ್ದೂರಿ ಸೆಟ್ ನಲ್ಲಿ ನಡೆಯುತ್ತಿದೆ. ಇದೇ‌ ಸಂದರ್ಭದಲ್ಲಿ ನಾಯಕ ದುನಿಯಾ ವಿಜಯ್ ಅವರ ಹುಟ್ಟುಹಬ್ಬ ಆಚರಣೆ ಹಾಗೂ ಪತ್ರಿಕಾಗೋಷ್ಠಿಯನ್ನು ಚಿತ್ರತಂಡ ಆಯೋಜಿಸಿತ್ತು. ದುನಿಯಾ ವಿಜಯ್ ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದ ಚಿತ್ರತಂಡದ ಸದಸ್ಯರು, ” ಲ್ಯಾಂಡ್ ಲಾರ್ಡ್” ಚಿತ್ರದ ಕುರಿತು ಮಾತನಾಡಿದರು.

ಇದೊಂದು ಗ್ರಾಮೀಣ ಸೊಗಡಿನ ಕಥೆ. 1980 ರ ಕಾಲಘಟ್ಟದಲ್ಲಿ ನಡೆಯುವ‌ ಕಥೆಯೂ ಹೌದು. ನಮ್ಮ ಚಿತ್ರಕ್ಕೆ “ಲ್ಯಾಂಡ್ ಲಾರ್ಡ್” ಅಂತ ಹೆಸರಿಡಲಾಗಿದ್ದು, ”ಆಳಿದವರ ಕಥೆಯಲ್ಲ. ಅಳಿದು ಉಳಿದವರ ಕಥೆ” ಎಂಬ ಅಡಿಬರಹವಿದೆ. “ಸಾರಥಿ” ಅಂತಹ ಸೂಪರ್ ಹಿಟ್ ಚಿತ್ರದ ನಿರ್ಮಾಪಕರಾದ ಕೆ.ವಿ.ಸತ್ಯಪ್ರಕಾಶ್ ಅವರು ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದು, ಅವರ ಪುತ್ರ ಸೂರಜ್ ಗೌಡ ಅವರು ತಂದೆಗೆ ನಿರ್ಮಾಣಕ್ಕೆ ಸಾಥ್ ನೀಡಿದ್ದಾರೆ. ಇನ್ನೂ, ಈ ಕಥೆಗೆ ವಿಜಯ್ ಅವರೆ ಸೂಕ್ತ ನಾಯಕ. ರಚಿತಾರಾಮ್ ಈ ಚಿತ್ರದ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ‌‌. ವಿಜಯ್ ಅವರ ಪುತ್ರಿ ರಿತನ್ಯ ಸಹ ಈ ಚಿತ್ರದ ಪ್ರಮುಖಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಸ್ಚಾಮಿ ಗೌಡ ಛಾಯಾಗ್ರಹಣ, ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನ, ಕೆ.ಎಂ.ಪ್ರಕಾಶ್ ಸಂಕಲನವಿದೆ. ಮಾಸ್ತಿ ಹಾಗೂ ಶ್ರೀಕಾಂತ್ ಸಂಭಾಷಣೆ ಬರೆದಿದ್ದಾರೆ ಎಂದು ನಿರ್ದೇಶಕ ಜಡೇಶ್ ಕೆ ಹಂಪಿ ತಿಳಿಸಿದರು.

ಈ ಬಾರಿ ನನ್ನ ಹುಟ್ಟುಹಬ್ಬವನ್ನು ಅಭಿಮಾನಿಗಳ ಜೊತೆಗೆ ಆಚರಿಸಿಕೊಳ್ಳಲು ಆಗಲಿಲ್ಲ. ಅದಕ್ಕಾಗಿ ಅವರಲ್ಲಿ ಕ್ಷಮೆ ಕೇಳುತ್ತೇನೆ ಎಂದು ಮಾತನಾಡಿದ ನಾಯಕ ವಿಜಯ್ ಕುಮಾರ್, ಜಡೇಶ್ ಒಂದೊಳ್ಳೆ ಗ್ರಾಮೀಣಾ ಸೊಗಡಿನ ಕಥೆ ಮಾಡಿಕೊಂಡಿದ್ದಾರೆ‌. ನನ್ನ ಬಾಲ್ಯದಲ್ಲಿ ನಮ್ಮ ಹಳ್ಳಿಯಲ್ಲಿ ವಿದ್ಯುತ್ ದೀಪಗಳು ಹೆಚ್ಚು ಇರಲಿಲ್ಲ. ಬುಡ್ಡಿ ದೀಪಗಳೆ ಹೆಚ್ಚು. ನಾನು ಈ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ ಗೆಟಪ್ ನಲ್ಲಿ ನಮ್ಮ ಹಳ್ಳಿಯ ಹಿರಿಯರು ಇರುತ್ತಿದ್ದರು. ಅಲ್ಲಿ ಜಾತಿ, ಮತ ಎಂಬ ಭೇದಭಾವ ಇರಲಿಲ್ಲ. ಇದ್ದದ್ದು ಎರಡೇ. ಒಂದು ಬಡವ. ಮತ್ತೊಂದು ಶ್ರೀಮಂತ. ಈ ಚಿತ್ರದಲ್ಲಿ ನಾನು ಬಡವರ ಪ್ರತಿನಿಧಿಯಾಗಿ ಅಭಿನಯಿಸುತ್ತಿದ್ದೇನೆ. ಸತ್ಯಪ್ರಕಾಶ್ ಹಾಗೂ ಸೂರಜ್ ಗೌಡ ಯಾವುದೇ ಕೊರತೆ ಬಾರದ ಹಾಗೆ ನಿರ್ಮಾಣ ಮಾಡುತ್ತಿದ್ದಾರೆ. ಉತ್ತಮ ಚಿತ್ರತಂಡದ ಜೊತೆಗೆ ಕೆಲಸ ಮಾಡುತ್ತಿರುವ ಖುಷಿ ಇದೆ ಎಂದರು.

“ಸಾರಥಿ” ಚಿತ್ರ ನನಗೆ ತುಂಬಾ ಕೀರ್ತಿ ತಂದುಕೊಟ್ಟ ಚಿತ್ರ. ಆನಂತರ ಕೆಲವು ಚಿತ್ರಗಳ ಕಥೆ ಕೇಳಿದ್ದೆ. ಕಾರಣಾಂತರದಿಂದ ನಿರ್ಮಿಸಲು ಆಗಿರಲಿಲ್ಲ. ಜಡೇಶ್ ಅವರ ಕಥೆ ಇಷ್ಟವಾಯಿತು. ಕೆಲವೇ ದಿನಗಳಲ್ಲಿ ಈ ಚಿತ್ರ ಆರಂಭವಾಯಿತು. ನಿರ್ಮಾಣದಲ್ಲಿ ನನ್ನ ಜೊತೆಗೆ ಮಗ ಸೂರಜ್ ಗೌಡ ಇದ್ದಾರೆ. ನಾಯಕ ದುನಿಯಾ ವಿಜಯ್ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ನಮ್ಮ ಚಿತ್ರಕ್ಕೆ ನಿಮ್ಮೆಲ್ಲರ ಬೆಂಬಲವಿರಲಿ ಎಂದು ನಿರ್ಮಾಪಕ ಸತ್ಯಪ್ರಕಾಶ್ ತಿಳಿಸಿದರು.

ವಿಜಯ್ ಅವರಿಗೆ ಶುಭಾಶಯ ತಿಳಿಸಿ ಮಾತನಾಡಿದ ಸಹ ನಿರ್ಮಾಪಕ ಸೂರಜ್ ಗೌಡ, ಈಗಾಗಲೇ ಚಿತ್ರಕ್ಕೆ ಎರಡು ಹಂತಗಳ ಚಿತ್ರೀಕರಣ ಮುಕ್ತಾಯವಾಗಿ, ಈಗ ಮೂರನೇ ಹಂತದ ಚಿತ್ರೀಕರಣ ನಡೆಯುತ್ತಿದೆ‌. ಮಾರ್ಚ್ ವೇಳೆಗೆ ಚಿತ್ರೀಕರಣ ಪೂರ್ಣಗೊಳಿಸಿ, ಆದಷ್ಟು ಬೇಗ ಚಿತ್ರವನ್ನು ತೆರೆಗೆ ತರುತ್ತೇವೆ ಎಂದರು.

ಇದು ಈ ನೆಲದ ಕಥೆ.‌ ಕೋಲಾರ ಭಾಗದಲ್ಲಿ ನಡೆಯುವ ಕಥೆ. ಜಡೇಶ್ ಈ ನೆಲದ ಕಥೆಗಾರ. ಕಥೆ ತುಂಬಾ ಚೆನ್ನಾಗಿದೆ. ಶ್ರೀಕಾಂತ್ ಅವರು ನನ್ನ ಜೊತೆಗೆ ಈ ಚಿತ್ರಕ್ಕೆ‌ ಸಂಭಾಷಣೆ ಬರೆಯುತ್ತಿದ್ದಾರೆ ಎಂದು ಸಂಭಾಷಣೆಕಾರ ಮಾಸ್ತಿ ತಿಳಿಸಿದರು.

ನಾನು ಹಾಗೂ ಅಪ್ಪ‌, ಈ ಚಿತ್ರದಲ್ಲೂ ಅಪ್ಪ, ಮಗಳಾಗಿಯೇ ಅಭಿನಯಿಸುತ್ತಿದ್ದೇವೆ‌. ಮೊದಲ ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ದುನಿಯಾ ವಿಜಯ್ ಪುತ್ರಿ ರಿತನ್ಯ. ಸಂಭಾಷಣೆಕಾರ ಶ್ರೀಕಾಂತ್, ನಿರ್ಮಾಣ ನಿರ್ವಾಹಕ ನರಸಿಂಹ ಜಾಲಹಳ್ಳಿ ಮುಂತಾದವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Tags: ದುನಿಯಾ ವಿಜಯ್)ಹುಟ್ಟುಹಬ್ಬ .
Previous Post

ಬೆಳಗಾವಿಯಲ್ಲಿ ಗಾಂಧಿ ಭಾರತ ಸಮಾವೇಶ ನೇರಪ್ರಸಾರ..!

Next Post

ಗಾಂಧೀಜಿ ಹಾಗೂ ಕಾಂಗ್ರೆಸ್ ಕೊಟ್ಟ ಅಹಿಂಸೆಯ ಆದರ್ಶವನ್ನು ವಿಶ್ವ ಒಪ್ಪಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

Related Posts

“ಕರ್ನಾಟಕದ ಜನತೆ ಎಂದಿಗೂ ಕ್ಷಮಿಸುವುದಿಲ್ಲ, ಇತಿಹಾಸವೂ ನಿಮ್ಮ ಕೊಳಕು ಮನಸ್ಥಿತಿಯನ್ನು ದಾಖಲಿಸದೆ ಬಿಡುವುದಿಲ್ಲ”
Top Story

“ಕರ್ನಾಟಕದ ಜನತೆ ಎಂದಿಗೂ ಕ್ಷಮಿಸುವುದಿಲ್ಲ, ಇತಿಹಾಸವೂ ನಿಮ್ಮ ಕೊಳಕು ಮನಸ್ಥಿತಿಯನ್ನು ದಾಖಲಿಸದೆ ಬಿಡುವುದಿಲ್ಲ”

by ಪ್ರತಿಧ್ವನಿ
May 23, 2026
0

ಬೆಂಗಳೂರು : ಲಾಡ್ಲೆ ಮಶಾಕ್‌ ದರ್ಗಾದಲ್ಲಿರುವ ಶಿವಲಿಂಗದ ಮೇಲೆ ಮಲ ಮೂತ್ರ ವಿಸರ್ಜನೆ ಮಾಡಿರುವ ಪ್ರಕರಣವನ್ನು ರಾಜ್ಯ ಸರ್ಕಾರ ವಾಪಸ್‌ ಪಡೆದಿರುವುದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ...

Read moreDetails
ಗ್ರಾಹಕರ ಜೇಬು ಸುಡುತ್ತಿದೆ ಇಂಧನ ದರ ಏರಿಕೆ : ಪೆಟ್ರೋಲ್‌, ಡೀಸೆಲ್‌ ಬೆಲೆಗಳಲ್ಲಿ ಎಷ್ಟು ಹೆಚ್ಚಳ ಗೊತ್ತಾ..?

ಗ್ರಾಹಕರ ಜೇಬು ಸುಡುತ್ತಿದೆ ಇಂಧನ ದರ ಏರಿಕೆ : ಪೆಟ್ರೋಲ್‌, ಡೀಸೆಲ್‌ ಬೆಲೆಗಳಲ್ಲಿ ಎಷ್ಟು ಹೆಚ್ಚಳ ಗೊತ್ತಾ..?

May 23, 2026
ರೈಲು ಮಿಸ್ ಆದರೆ ಅದೇ ಟಿಕೆಟ್‌ನಲ್ಲಿ ಬೇರೆ ರೈಲು ಹತ್ತಬಹುದಾ? ಇಲ್ಲಿದೆ ರೈಲ್ವೆಯ ಸ್ಪಷ್ಟ ನಿಯಮ

ರೈಲು ಮಿಸ್ ಆದರೆ ಅದೇ ಟಿಕೆಟ್‌ನಲ್ಲಿ ಬೇರೆ ರೈಲು ಹತ್ತಬಹುದಾ? ಇಲ್ಲಿದೆ ರೈಲ್ವೆಯ ಸ್ಪಷ್ಟ ನಿಯಮ

May 23, 2026
‘ಕಾಕ್ರೋಚ್ ಜನತಾ ಪಾರ್ಟಿ’ ಹಿಂದೆ ವಿದೇಶಿ ಸಂಪರ್ಕ? ನೆಟ್ಟಿಗರ ಪ್ರಶ್ನೆಗೆ ಸಂಸ್ಥಾಪಕ‌ ಹೇಳಿದ್ದೇನು‌?

ಬೌರಿಂಗ್ ಆಸ್ಪತ್ರೆ ಗೋಡೆ ದುರಂತ: ನಿಜ ಕಾರಣ ಬಹಿರಂಗಪಡಿಸಿದ ಲೋಕಾಯುಕ್ತ ವರದಿ!

May 22, 2026
‘ಕಾಕ್ರೋಚ್ ಜನತಾ ಪಾರ್ಟಿ’ ಹಿಂದೆ ವಿದೇಶಿ ಸಂಪರ್ಕ? ನೆಟ್ಟಿಗರ ಪ್ರಶ್ನೆಗೆ ಸಂಸ್ಥಾಪಕ‌ ಹೇಳಿದ್ದೇನು‌?

ಸಾಮಾನ್ಯ ಭಕ್ತರಿಗೆ ಟಿಟಿಡಿಯಿಂದ ಬಂಪರ್ ಸಿಹಿಸುದ್ದಿ: ಶ್ರೀವಾರಿ ದರ್ಶನ ಇನ್ನಷ್ಟು ಸುಲಭ

May 22, 2026
Next Post
ಗಾಂಧೀಜಿ ಹಾಗೂ ಕಾಂಗ್ರೆಸ್ ಕೊಟ್ಟ ಅಹಿಂಸೆಯ ಆದರ್ಶವನ್ನು ವಿಶ್ವ ಒಪ್ಪಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ಗಾಂಧೀಜಿ ಹಾಗೂ ಕಾಂಗ್ರೆಸ್ ಕೊಟ್ಟ ಅಹಿಂಸೆಯ ಆದರ್ಶವನ್ನು ವಿಶ್ವ ಒಪ್ಪಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada