ಹಿರಿಯ ನಟಿ, ರಂಗಭೂಮಿ ಕಲಾವಿದೆ ಭಾರ್ಗವಿ ನಾರಾಯಣ ಅವರು ಇಂದು ನಿಧನರಾಗಿದ್ದಾರೆ. 84 ವರ್ಷದ ಭಾರ್ಗವಿ ಅವರು ವಯೋಸಹಜ ಅನಾರೋಗ್ಯ ಸಮಸ್ಯೆಯಿಂದ ಅವರು ಬಳಲುತ್ತಿದ್ದರು.
20ಕ್ಕೂ ಅಧಿಕ ಚಿತ್ರದಲ್ಲಿ ನಟಿಸಿದ್ದ ಭಾರ್ಗವಿ ಅವರು, ಮಂಥನಾ ಮತ್ತು ಮುಕ್ತಾ ಧಾರಾವಾಹಿಯ ಮೂಲಕ ಮನೆ ಮಾತಾಗಿದ್ದರು.
ಕಲೆಗಳಲ್ಲಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸುವ ಮುನ್ನ, ಭಾರ್ಗವಿ ಅವರು ಬೆಂಗಳೂರಿನ ಇಎಸ್‌ಐ ಕಾರ್ಪೊರೇಶನ್ ಅಲ್ಲಿ ವ್ಯವಸ್ಥಾಪಕರಾಗಿ ಕಾರ್ಯನಿರ್ವಹಿಸಿದರು. ಅವರು ಬೆಂಗಳೂರಿನ ಅಂಕಿತಾ ಪುಸ್ತಕ ಪ್ರಕಟಿಸಿದ ‘ನಾ ಕ0ಡ ನಮ್ಮವರ’ ಎಂಬ ಕನ್ನಡದಲ್ಲಿ ಪುಸ್ತಕವನ್ನು ಬರೆದಿದ್ದಾರೆ.

ಭಾರ್ಗವಿ ಅವರ ಆತ್ಮಚರಿತ್ರೆ ‘ನಾನು, ಭಾರ್ಗವಿ’ 2012ರಲ್ಲಿ ಬಿಡುಗಡೆಯಾಗಿದೆ. ಇವರಿಗೆ ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿಗಳು – ಅತ್ಯುತ್ತಮ ಪೋಷಕ ನಟಿ, ಕರ್ನಾಟಕ ರಾಜ್ಯನಾಟಕ ಅಕಾಡೆಮಿ ಪ್ರಶಸ್ತಿಗಳು, ಮಂಗಳೂರು ಪ್ರತಿಷ್ಠಿತ ಸಂದೇಶ ಪ್ರಶಸ್ತಿ, ಆಳ್ವಾಸ್ ನಡಿಸಿರಿ ಪ್ರಶಸ್ತಿ, ಕರ್ನಾಟಕ ರಾಜ್ಯ ನಾಟಕ ಸ್ಪರ್ಧೆ – ಅತ್ಯುತ್ತಮ ನಟಿ, ಕರ್ನಾಟಕ ರಾಜ್ಯ ಮಕ್ಕಳ ನಾಟಕ ಸ್ಪರ್ಧೆ ಸೇರಿದಂತೆ ಹಲವಾರು ಪ್ರಶಸ್ತಿಗಳು ಸಿಕ್ಕಿವೆ.