• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

“ಹಂಸಗೀತೆ”ಗೆ ಹೆಜ್ಜೆ ಹಾಕಲಿದ್ದಾರೆ ಭಾವನಾ ರಾಮಣ್ಣ

Any Mind by Any Mind
January 22, 2024
in ಸಿನಿಮಾ
0
“ಹಂಸಗೀತೆ”ಗೆ ಹೆಜ್ಜೆ ಹಾಕಲಿದ್ದಾರೆ ಭಾವನಾ ರಾಮಣ್ಣ
Share on WhatsAppShare on FacebookShare on Telegram

“ಚಂದ್ರಮುಖಿ ಪ್ರಾಣಸಖಿ” (chandramukhi pranasakhi) ಸೇರಿದಂತೆ ಅನೇಕ ಚಿತ್ರಗಳ ಮೂಲಕ ಕನ್ನಡಿಗರ ಮನಗೆದ್ದಿರುವ ನಟಿ ಭಾವನಾ ರಾಮಣ್ಣ (Bhavana ramanna) ಅತ್ಯುತ್ತಮ ನೃತ್ಯಗಾರ್ತಿಯೂ ಹೌದು. ಕನ್ನಡದ ಜನಪ್ರಿಯ ಕಾದಂಬರಿಕಾರ ತ.ರಾ.ಸುಬ್ಬರಾಯರ ‘ಹಂಸಗೀತೆ’ (Hamsageethe) ಕಾದಂಬರಿಯನ್ನು ಜಿ.ವಿ.ಅಯ್ಯರ್ ಅವರು ಚಲನಚಿತ್ರವಾಗಿಸಿದ್ದರು. ಈಗ ನಟಿ ಭಾವನ “ಹಂಸಗೀತೆ” ಯನ್ನು ನೃತ್ಯ ರೂಪಕವಾಗಿ ತರುತ್ತಿದ್ದಾರೆ. ಈ ಕುರಿತು ಹೆಚ್ಚಿನ ಮಾಹಿತಿ ನೀಡಲು ಭಾವನ ರಾಮಣ್ಣ ತಮ್ಮ ಮನೆಯಲ್ಲೇ ಪತ್ರಿಕಾಗೋಷ್ಟಿ ಆಯೋಜಿಸಿದ್ದರು.ನಟಿ ಭಾವನಾ, ಅವರ ಸಹೋದರ ಅರವಿಂದ್ ರಾಮಣ್ಣ, ಸಹೋದರಿ ಶ್ಯಾಲಿನಿ ರಾಮಣ್ಣ ಹಾಗೂ ಬರಹಗಾರ ವಿಕ್ರಂ ಹತ್ವಾರ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ADVERTISEMENT

ತಾವು ಚಿತ್ರರಂಗಕ್ಕೆ ಬರಲು ಕಾರಣರಾದವರನ್ನು ನೆನೆದು ಭಾವುಕರಾಗಿ ಮಾತು ಆರಂಭಿಸಿದ ಭಾವನ, ಹಿಂದೆ ತಮ್ಮ “ಹೋಮ್ ಟೌನ್ ” ಬ್ಯಾನರ್ ನಲ್ಲಿ “ನಿರುತ್ತರ” ಚಿತ್ರವನ್ನು ನಿರ್ಮಿಸಿದ್ದನ್ನು ನೆನಪಿಸಿಕೊಂಡರು. ಮುಂದೆ ಕೂಡ ಚಿತ್ರ ನಿರ್ಮಿಸುವ ಆಸೆ ಇದೆ ಎಂದರು. “ಹೂವು ಫೌಂಡೇಶನ್” ಮೂಲಕ ಅನೇಕ ಕಾರ್ಯಕ್ರಮಗಳನ್ನು ನಡೆಸುತ್ತಾ ಬಂದಿರುವದಾಗಿಯೂ ಭಾವನ ಹೇಳಿದರು. ನಂತರ “ಹಂಸಗೀತೆ” ನೃತ್ಯ ಕಾವ್ಯದ ಬಗ್ಗೆ ಭಾವನ ಮಾಹಿತಿ ನೀಡಿದರು. ತ.ರಾ.ಸು ಅವರ “ಹಂಸಗೀತೆ” ಯ ಬಗ್ಗೆ ಇವತ್ತಿನ ಪೀಳಿಗೆಗೆ ತಿಳಿಸಿಕೊಡಬೇಕು. ಹಾಗಾಗಿ ಈ ಪ್ರಯತ್ನ ಮಾಡುತ್ತಿದ್ದೇನೆ. ಜನವರಿ 30ರ ಸಂಜೆ 6.30ಕ್ಕೆ ಚೌಡಯ್ಯ ಮೆಮೋರಿಯಲ್ ಹಾಲ್ ನಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ವೀಣಾ ಮೂರ್ತಿ ಅವರ ನೃತ್ಯ ನಿರ್ದೇಶನದಲ್ಲಿ ಈ ನೃತ್ಯಕಾವ್ಯ ಮೂಡಿಬರಲಿದೆ.

ಭಾವನ ಅವರೆ ಒಂದುವರೆ ಗಂಟೆಗಳ ಕಾಲ ನಡೆಸಿಕೊಡುವ ಏಕ ವ್ಯಕ್ತಿ ಪ್ರದರ್ಶನದ ಈ ನೃತ್ಯ ಕಾವ್ಯದಲ್ಲಿ ಹಾಡು, ನೃತ್ಯ ಹಾಗೂ ಸಂಭಾಷಣೆಗಳು ಇರುತ್ತವೆ.

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮಂತ್ರಿಗಳಾದ ಡಾ.ಜಿ.ಪರಮೇಶ್ವರ್, ಎಚ್.ಸಿ.ಮಹದೇವಪ್ಪ ಅವರು ಇದರಲ್ಲಿ ಪಾಲ್ಗೊಳ್ಳುತ್ತಿರುವುದು ವಿಶೇಷ.

ಚಿತ್ರರಂಗದಿಂದ ಗುರುಗಳಾದ ಡಾ.ಬರಗೂರು ರಾಮಚಂದ್ರಪ್ಪ, ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ತಾರಾ ಅನುರಾಧ ಅವರನ್ನೂ ಆಹ್ವಾನಿಸಿರುವುದಾಗಿ ಭಾವನಾ ರಾಮಣ್ಣ ತಿಳಿಸಿದ್ದಾರೆ.

ಇದು ಮೊದಲ ಪ್ರಯತ್ನ. ಮುಂದೆ ಬೇರೆಬೇರೆ ಕಡೆಗಳಲ್ಲೂ ಈ ನೃತ್ಯಕಾವ್ಯವನ್ನು ಮಾಡುವ ಯೋಜನೆಯಿದೆ ಎನ್ನುತ್ತಾರೆ ಭಾವನಾ ರಾಮಣ್ಣ.

Previous Post

ಜಂಗಮ ಕಾಯಕ ಯೋಗಿಗೆ ನಾಯಕತ್ವದ ಸ್ಥಾವರಅಧಿಕಾರ ರಾಜಕಾರಣದಲ್ಲಿ ಎಲ್ಲವೂ ಬಳಕೆಯ ಮಾದರಿಗಳಾಗಿ ಪರ್ಯವಸಾನ ಹೊಂದುತ್ತವೆ

Next Post

ಇಂಗ್ಲೆಂಡ್‌ ವಿರುದ್ಧದ ಆರಂಭಿಕ ಎರಡು ಟೆಸ್ಟ್‌ನಿಂದ ಹೊರಗುಳಿದ ಕಿಂಗ್‌ ಕೊಹ್ಲಿ

Related Posts

ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?
Top Story

ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

by ಪ್ರತಿಧ್ವನಿ
April 19, 2026
0

ಬೆಂಗಳೂರು : ಬಾಲಿವುಡ್‌ ನಟಿ ದೀಪಿಕಾ ಪಡುಕೋಣೆ ಮತ್ತು ರಣವೀರ್‌ ಸಿಂಗ್‌ ದಂಪತಿ ತಮ್ಮ ಎರಡನೇ ಮಗುವನ್ನು ಸ್ವಾಗತಿಸಲು ಸಜ್ಜಾಗುತ್ತಿದ್ದಾರೆ. ಈ ಮೂಲಕ ಅಭಿಮಾನಿಗಳಿಗೆ ಸಿಹಿ ಸುದ್ದಿ...

Read moreDetails
ರಾಮಾಯಣ ಹೇಳಿಕೆಗೆ ನಟ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ: ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ

ರಾಮಾಯಣ ಹೇಳಿಕೆಗೆ ನಟ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ: ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ

April 16, 2026
‘ಕೆಡಿ’ ಚಿತ್ರಕ್ಕೆ ಸೆನ್ಸಾರ್ ಅಡೆತಡೆ: ಕೇಂದ್ರ ಮಂಡಳಿ ವಿರುದ್ಧ ಅನ್ಯಾಯ ಆರೋಪ

‘ಕೆಡಿ’ ಚಿತ್ರಕ್ಕೆ ಸೆನ್ಸಾರ್ ಅಡೆತಡೆ: ಕೇಂದ್ರ ಮಂಡಳಿ ವಿರುದ್ಧ ಅನ್ಯಾಯ ಆರೋಪ

April 14, 2026
ಬಿಗ್‌ಬಾಸ್ ರಕ್ಷಿತಾ ಶೆಟ್ಟಿ ಹೊಸ ಹೆಜ್ಜೆ: ‘ಪಟಾಕಿ ಕಿಚನ್’ ಆರಂಭ

ಬಿಗ್‌ಬಾಸ್ ರಕ್ಷಿತಾ ಶೆಟ್ಟಿ ಹೊಸ ಹೆಜ್ಜೆ: ‘ಪಟಾಕಿ ಕಿಚನ್’ ಆರಂಭ

April 14, 2026
‘ಕೋಟಿಗೊಬ್ಬ’ ರಿ-ರಿಲೀಸ್: ಮೊದಲ ದಿನದ ಕಲೆಕ್ಷನ್ ಎಷ್ಟು?

‘ಕೋಟಿಗೊಬ್ಬ’ ರಿ-ರಿಲೀಸ್: ಮೊದಲ ದಿನದ ಕಲೆಕ್ಷನ್ ಎಷ್ಟು?

April 12, 2026
Next Post
ಇಂಗ್ಲೆಂಡ್‌ ವಿರುದ್ಧದ ಆರಂಭಿಕ ಎರಡು ಟೆಸ್ಟ್‌ನಿಂದ ಹೊರಗುಳಿದ ಕಿಂಗ್‌ ಕೊಹ್ಲಿ

ಇಂಗ್ಲೆಂಡ್‌ ವಿರುದ್ಧದ ಆರಂಭಿಕ ಎರಡು ಟೆಸ್ಟ್‌ನಿಂದ ಹೊರಗುಳಿದ ಕಿಂಗ್‌ ಕೊಹ್ಲಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada