ತಡರಾತ್ರಿ ಸುರಿದ ಭಾರೀ ಮಳೆಗೆ ರಾಜ್ಯ ರಾಜಧಾನಿಯ ಹಲವು ಪ್ರದೇಶಗಳು ನೀರಿನಲ್ಲಿ ಮುಳುಗಡೆಯಾಗಿದೆ. ರಾಜಕಾಲುವೆಗಳ ಒತ್ತುವರಿ ಹಾಗೂ ಅವೈಜ್ಞಾನಿಕ ಕಾಮಗಾರಿಗಳಿಂದ ಕೃತಕ ನೆರೆಯುಂಟಾಗಿದೆ ಎಂದು ಬಿಬಿಎಂಪಿ ಹಾಗೂ ಸರ್ಕಾರದ ವಿರುದ್ಧ ಆಕ್ರೋಶಗಳು ವ್ಯಕ್ತವಾಗುತ್ತಿದೆ.
ರಸ್ತೆಗಳಲ್ಲಿ ನೀರು ನಿಂತಿರುವ ಪರಿಣಾಮ ಸಾರಿಗೆ ಸಂಚಾರಕ್ಕೂ ತಡೆಯಾಗಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿದೆ. ಈ ಕುರಿತು ನಟಿ, ಮಾಜಿ ಸಂಸದೆ ರಮ್ಯಾ ಟ್ವೀಟ್ ಮಾಡಿದ್ದು, ʼವೆರಿ ಸ್ಮಾರ್ಟ್ ಸಿಟಿʼ ಎಂದು ವ್ಯಂಗ್ಯವಾಡಿದ್ದಾರೆ.
ಅಲ್ಲದೆ, ‘ಅಕ್ರಮ ಕಟ್ಟಡಗಳನ್ನು ತೆರವುಗೊಳಿಸುವವರಿಗೆ ನನ್ನ ಮತ’ ಎಂದು ಅವರು ಹೇಳಿದ್ದಾರೆ.











