ಬಹುಭಾಷಾ ನಟಿ ಹಾಗೂ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಸುಂದರ್ ಇಂದು ಹೈದರಾಬಾದ್ನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ. ಜ್ವರ ಹಾಗೂ ಸುಸ್ತಿನಿಂದ ನಟಿ ಖುಷ್ಬೂ ಬಳಲುತ್ತಿದ್ದಾರೆ ಎಂದು ತಿಳಿದು ಬಂದಿದೆ. ಆಸ್ಪತ್ರೆಗೆ ದಾಖಲಾದ ಬಗ್ಗೆ ನಟಿ ಖುಷ್ಬೂ ಮಾಹಿತಿ ಹಂಚಿಕೊಳ್ತಿದ್ದಂತೆಯೇ ಅಭಿಮಾನಿಗಳಲ್ಲಿ ಆತಂಕ ಹೆಚ್ಚಾಗಿದೆ.
ಟ್ವಿಟರ್ ಹಾಗೂ ಇನ್ಸ್ಟಾಗ್ರಾಂನಲ್ಲಿ ನಟಿ ಖುಷ್ಬೂ ಈ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಜ್ವರ , ತೀವ್ರವಾದ ಮೈ ಕೈ ನೋವು ಹಾಗೂ ನಿತ್ರಾಣದಿಂದ ಆಸ್ಪತ್ರೆಗೆ ದಾಖಲಾಗಿದ್ದೇನೆ. ಯಾರೂ ಕೂಡ ಇಂತಹ ಆರೋಗ್ಯ ಲಕ್ಷಣಗಳನ್ನು ಸುಲಭವೆಂದು ಪರಿಗಣಿಸಬೇಡಿ. ಎಲ್ಲರೂ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ಎಂದು ನಟಿ ಬರೆದುಕೊಂಡಿದ್ದಾರೆ.











