ಸ್ಯಾಂಡಲ್‌ವುಡ್ ನಟಿ ಮಾನ್ವಿತಾ ಕಾಮತ್ ಅವರ ತಾಯಿ ಸುಜಾತಾ ಕಾಮತ್ ಇಹಲೋಕ ತ್ಯಜಿಸಿದ್ದಾರೆ. ಹಲವು ದಿನಗಳಿಂದ ಮಾನ್ವಿತಾ ತಾಯಿ ಸುಜಾತಾ ಕಾಮತ್‌ಗೆ ಚಿಕಿತ್ಸೆ ನೀಡಲಾಗ್ತಿತ್ತು. ಆದರೆ ದುರಾದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದೇ ಇಂದು ಅವರು ನಿಧನರಾಗಿದ್ದಾರೆ.

ಸುಜಾತಾ ಕಾಮತ್ ಅವರ ಆತ್ಮಕ್ಕೆ ಶಾಂತಿ ಸಿಗಲಿ ಅಂತ, ಮಾನ್ವಿತಾ ಅಭಿಮಾನಿಗಳು ಕೇಳಿಕೊಳ್ಳುತ್ತಿದ್ದಾರೆ. ಮಾನ್ವಿತಾಗೆ ಧೈರ್ಯ ತುಂಬುವ ಕೆಲಸವನ್ನೂ ಸಹ ಅವರ ಫ್ಯಾನ್ಸ್ ಮಾಡ್ತಿದ್ದಾರೆ. ಮಾನ್ವಿತಾ ಕಾಮತ್ ತಾಯಿ ಸುಜಾತಾ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದರು. ಅವರಿಗೆ ಕಿಡ್ನಿ ಕಸಿ ಮಾಡಿಸಲಾಗಿತ್ತು ಎನ್ನಲಾಗ್ತಿದೆ. ಅಲ್ಲದೆ ಅವರಿಗೆ ಎರಡು ಬಾರಿ ಹೃದಯಾಘಾತವೂ ಆಗಿತ್ತು.

ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಸುಜಾತಾಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಒಂದು ತಿಂಗಳಿಂದ ಅವರು ಆಸ್ಪತ್ರೆಯಲ್ಲೇ ಇದ್ದರು. ತಾಯಿಯನ್ನು ಉಳಿಸಿಕೊಳ್ಳಲು ಮಾನ್ವಿತಾ ಸಾಕಷ್ಟು ಪ್ರಯತ್ನ ಪಟ್ಟರು. ಆದರೆ, ಆ ಪ್ರಯತ್ನ ಇಂದು ವಿಫಲ ಆಗಿದೆ.

2015ರಲ್ಲಿ ‘ಕೆಂಡಸಂಪಿಗೆ’ ಚಿತ್ರದ ಮೂಲಕ ಚಿತ್ರರಂಗಕ್ಕೆ ಎಂಟ್ರಿಕೊಟ್ಟ ನಟಿ ಮಾನ್ವಿತಾ ಕಾಮತ್ಗೆ, ಈ ಚಿತ್ರದಿಂದ ಅವರಿಗೆ ದೊಡ್ಡ ಮಟ್ಟದ ಯಶಸ್ಸು ಸಿಕ್ಕಿತು. ನಂತರ ಹಲವು ಚಿತ್ರಗಳಲ್ಲಿ ಅವರು ನಟಿಸಿದರು. ‘ಟಗರು’ ಚಿತ್ರದಲ್ಲಿ ಮಾನ್ವಿತಾ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು.