ಬೆಂಗಳೂರು : ಮೇ.31: ಸ್ಯಾಂಡಲ್ ವುಡ್ ನಟಿ, ಗುಳಿಕೆನ್ನೆ ಚೆಲುವೆ ರಚಿತಾ ರಾಮ್ ಅವರು ಇಂದು ಮಂಗಳೂರು ಸಮೀಪದ ಕುತ್ತಾರು ದೆಕ್ಕಾಡಿನ ಕೊರಗಜ್ಜ ದೈವದ ಆದಿ ಸ್ಥಳಕ್ಕೆ ಭೇಟಿ ನೀಡಿ, ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದರು.



ನಟಿ ರಚಿತಾ ರಾಮ್ ತಮ್ಮ ನಟನೆಯ ಹೊಸ ಚಿತ್ರಗಳಾದ ಮ್ಯಾಟ್ನಿ, ಬ್ಯಾಡ್ ಮ್ಯಾನರ್ಸ್ ಯಶಸ್ಸಿಗಾಗಿ ಕೊರಗಜ್ಜ ದೇವೃಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿ ಮಾತನಾಡಿದ, ನಟಿ “ನನ್ನ ಸ್ನೇಹಿತರ ಪೈಕಿ ಅನೇಕ ಮಂದಿ ಕೊರಗಜ್ಜ ದೈವದ ಕಾರಣೀಕದ ಬಗ್ಗೆ ತಿಳಿಸಿದ್ದರು. ಹೀಗಾಗಿ ನನಗೂ ಇಲ್ಲಿಗೆ ಬರಬೇಕು ಅನ್ನಿಸಿತು. ಕೊರಗಜ್ಜನ ಕ್ಷೇತ್ರವು ಪ್ರಾಕೃತಿಕ ಸೌಂದರ್ಯದಿಂದ ಕೂಡಿದ್ದು, ತುಂಬಾ ಚೆನ್ನಾಗಿದೆ. ಮುಂದಿನ ಜೂನ್ ತಿಂಗಳಲ್ಲಿ ತೆರೆ ಕಾಣಲಿರುವ ಮ್ಯಾಟ್ನಿ ಮತ್ತು ಬ್ಯಾಡ್ ಮ್ಯಾನರ್ಸ್ ಚಿತ್ರಗಳು ಯಶಸ್ಸು ಕಾಣಲಿ ಎಂದು ಕೊರಗಜ್ಜ ದೇವರಲ್ಲಿ ಪ್ರಾರ್ಥಿಸಿದೆ’ ಎಂದು ನಟಿ ರಚಿತಾರಾಮ್ ಹೇಳಿದರು.