ಸ್ಯಾಂಡಲ್ವುಡ್ ನಟಿ ರಮ್ಯಾ ಚಿತ್ರರಂಗಕ್ಕೆ ರೀ ಎಂಟ್ರಿಯಾಗ್ತಿರೋ ಬೆನ್ನಲ್ಲೇ ರಾಜಕೀಯಕ್ಕೂ ಮತ್ತೆ ಎಂಟ್ರಿ ಕೊಡ್ತಿದ್ದಾರೆ. ಈ ಹಿಂದೆ ಸಂಸದೆಯಾಗಿ, ಬಳಿಕ ರಾಷ್ಟ್ರೀಯ ಕಾಂಗ್ರೆಸ್ ಸೋಶಿಯಲ್ ಮೀಡಿಯಾ ವಿಭಾಗದ ಮುಖ್ಯಸ್ಥೆಯಾಗಿ ಕೆಲಸ ಮಾಡಿದ್ದ ರಮ್ಯಾ, 2019ರ ಎಲೆಕ್ಷನ್ ಬಳಿಕ ರಾಜಕೀಯದಿಂದ ದೂರ ಉಳಿದಿದ್ದರು. ಆದ್ರೀಗ ಮತ್ತೆ ರಮ್ಯಾ ಕಾಂಗ್ರೆಸ್ ಜೊತೆ ಕೈಜೋಡಿಸಿದ್ದು, 2023ರ ವಿಧಾನಸಭಾ ಚುನಾವಣೆಯಲ್ಲಿ ಸ್ಟಾರ್ ಪ್ರಚಾರಕಿಯಾಗಿ ಕಾಂಗ್ರೆಸ್ ಪರ ಮಾಡಲಿದ್ದಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಸೇರಿದಂತೆ 40 ಮಂದಿ ಸ್ಟಾರ್ ಪ್ರಚಾರಕರ ಹೆಸರನ್ನು ಕಾಂಗ್ರೆಸ್ ಘೋಷಣೆ ಮಾಡಿದೆ. ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್, ನಟಿ ಹಾಗೂ ಮಾಜಿ ಸಂಸದೆ ರಮ್ಯಾ , ಕನ್ನಯ್ಯ ಕುಮಾರ್, ನಟಿ ಮತ್ತು ಮಾಜಿ ಸಚಿವೆ ಉಮಾಶ್ರೀ ಹಾಗೂ ಹಾಸ್ಯನಟ ಸಾಧು ಕೋಕಿಲ ಅವರಿಗೂ ಸ್ಥಾನ ನೀಡಲಾಗಿದೆ