• Home
  • About Us
  • ಕರ್ನಾಟಕ
Sunday, October 12, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಮಂಗಳೂರಿನ ಅದಾನಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಉದ್ಯೋಗದಲ್ಲಿ ತುಳುವರ ಕಡಗಣೆನೆ!

ಕರ್ಣ by ಕರ್ಣ
October 12, 2021
in ಕರ್ನಾಟಕ
0
ಮಂಗಳೂರಿನ ಅದಾನಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಉದ್ಯೋಗದಲ್ಲಿ ತುಳುವರ ಕಡಗಣೆನೆ!
Share on WhatsAppShare on FacebookShare on Telegram

ಮಂಗಳೂರು ವಿಮಾನ ನಿಲ್ದಾಣ ಅದಾನಿ ಕಂಪೆನಿಗೆ ಮಾರಾಟಗೊಂಡಿರುವ ವಿಚಾರ ಈಗ ಗೌಪ್ಯವಾಗಿಯೇನು ಉಳಿದಿಲ್ಲ. ಈಗಾಗಲೇ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಹೆಸರೇ ಅದಾನಿ ಇಂಟರ್‌ ನ್ಯಾಷನಲ್‌ ಏರ್ಪೋರ್ಟ್‌ ಮಂಗಳೂರು ಎಂದಾಗಿದೆ. ಈ ಬಗ್ಗೆ ಸಾಮಾಜಿಕವಾಗಿ ಹಲವು ಪ್ರತಿರೋಧಗಳು ದಾಖಲಾಗಿದ್ದವು. ಇದೀಗ ಖಾಸಗೀಕರಣದ ಹೊಡೆತಕ್ಕೆ ತುಳುವರ ನಾಡು ಮಂಗಳೂರಿಗರ ಬದುಕು ತತ್ತರಿಸುತ್ತಿವೆ. ಬಹುತೇಕ ಮಂದಿ ಈ ಏರ್‌ಪೋರ್ಟ್‌ ನ ದುಡಿಮೆ ನಂಬಿಕೊಂಡೇ ಬದುಕುತ್ತಿದ್ದಾರೆ. ಬಜ್ಪೆ, ಮೂಡಬಿದರೆ, ಕಟೀಲ್‌, ಮುಲ್ಕಿ, ಕಿನ್ನಿಗೋಳಿ ಭಾಗದ ಹಲವಾರು ಮಂದಿ ಇಲ್ಲಿ ದುಡಿಯುತ್ತಿದ್ದಾರೆ. ಇದೀಗ ಅಂತವರ ದುಡಿಮೆಯ ಜೊತೆಗೆ ಬದುಕಿಗೂ ಕುತ್ತು ಬಂದಿದೆ. ಈ ಬಗ್ಗೆ ಈಗ ಸಾಮಾಜಿಕ ಹೋರಾಟಗಾರರು ಅಕ್ರೋಶ ಹೊರಹಾಕುತ್ತಿದ್ದಾರೆ.

ADVERTISEMENT

ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಅದಾನಿ ಕಂಪೆನಿಗೆ ಮಾರಾಟವಾಗುವ ಎತ್ತಲಾಗಿದ್ದ ಪ್ರಶ್ನೆಗಳು ಈಗ ನಿಜವಾಗತೊಡಗಿದೆ. ವಿಮಾನ ನಿಲ್ದಾಣದ ಗುತ್ತಿಗೆ ಕಂಪೆನಿಗಳ ಅಡಿ ದುಡಿಯುತ್ತಿದ್ದ ಸ್ಥಳೀಯ ಕಾರ್ಮಿಕರನ್ನು ಹಲವು ನೆಪಗಳನ್ನು ಮುಂದಿಟ್ಟು ಕೈ ಬಿಡಲಾಗುತ್ತಿದೆ ಎಂಬ ಆರೋಪಗಳು ಕೇಳಿ ಬರುತ್ತಿವೆ. ಹೊರ ರಾಜ್ಯದ ಗುತ್ತಿಗೆ ಕಾರ್ಮಿಕರ ಸೇರ್ಪಡೆಗೆ ಆದ್ಯತೆ ನೀಡಲಾಗುತ್ತಿದೆ.

ಸದ್ಯ ಮಂಗಳೂರು ವಿಮಾನ ನಿಲ್ದಾಣದ ಅಗ್ನಿಶಾಮಕ ದಳಕ್ಕೆ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ. ಅಗ್ನಿಶಾಮಕ ದಳ ಸಿಬ್ಬಂದಿಯನ್ನು ಗುತ್ತಿಗೆ ನೀಡಲು ಅವಕಾಶ ಇಲ್ಲದಿರುವುದರಿಂದ ಅದಾನಿ ಕಂಪೆನಿ ನೇರ ನೇಮಕಾತಿ ಮಾಡಬೇಕಿದೆ. ಮಂಗಳೂರು ವಿಮಾನ ನಿಲ್ದಾಣದ ಅಗ್ನಿಶಾಮಕ ದಳದ ಸಿಬ್ಬಂದಿ ನೇಮಕಾತಿಯ ಕುರಿತು ಕೆಲವು ಮಾಹಿತಿಗಳು ಹೊರ ಬಂದಿದ್ದು ಸ್ಥಳೀಯರ ಮಟ್ಟಿಗೆ ಆಘಾತಕಾರಿಯಾಗಿದೆ. 80 ಸಿಬ್ಬಂದಿಗಳ ನೇಮಕಾತಿಯ ಅಗತ್ಯ ಇದ್ದರೂ ಸದ್ಯ 20 ಸಿಬ್ಬಂದಿಗಳ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ. ಇಲ್ಲಿ ಆಘಾತಕಾರಿ ಸಂಗತಿಯೆಂದರೆ SSLC ವಿದ್ಯಾಭ್ಯಾಸ ಸಾಕಾಗುವ ಅಗ್ನಿ ಶಾಮಕ ದಳದ ಸಿಬ್ಬಂದಿಯಂತಹ ಸಾಮಾನ್ಯ ಹುದ್ದೆಗೂ ಆದಾನಿ ಕಂಪೆನಿ ಸ್ಥಳೀಯರಿಗೆ ಆದ್ಯತೆ, ಅವಕಾಶ ನೀಡುತ್ತಿಲ್ಲ.

ಸಾಮಾಜಿಕ ಕಾರ್ಯಕರ್ತ ಮುನೀರ್‌ ಕಾಟಿಪಳ್ಳ ಆರೋಪಿಸುವ ಪ್ರಕಾರ, ʻʻಅದಾನಿ ಕಂಪೆನಿಯು ಸ್ಥಳೀಯರಿಗೆ ಆದ್ಯತೆ ನೀಡಿ ಪಾರದರ್ಶಕವಾಗಿ ನೇಮಕಾತಿ ಪ್ರಕ್ರಿಯೆ ನಡೆಸುತ್ತಿಲ್ಲ. ಬದಲಿಗೆ ತನಗೆ ʻಅನುಭವಸ್ಥರುʼ ಬೇಕು ಎಂದು ಹೊರ ರಾಜ್ಯಗಳಲ್ಲಿ‌ ಸಿಬ್ಬಂದಿಗಳ ಹುಡುಕಾಟ ನಡೆಸುತ್ತಿದೆ. ವಿಮಾನ ನಿಲ್ದಾಣಕ್ಕೆ ಜಮೀನು ನೀಡಿದವರು ತುಳುನಾಡಿನವರು . ಅಂಥಾ ತುಳುವರನ್ನೇ ಬದಿಗೊತ್ತಿ ಅನುಭವಸ್ಥರ ಹುಡುಕಾಟಕ್ಕೆ ಇಳಿದಿದೆ. ತುಳುವರು ಬಿಡಿ, ಕನ್ನಡಿಗರೂ ಅದಾನಿ ಕಂಪೆನಿಯವರು “ಹುಡುಕಾಟ” ನಡೆಸುತ್ತಿರುವ ಅನುಭವಸ್ಥರ ಪಟ್ಟಿಯಲ್ಲಿ ಇಲ್ಲ ಎಂಬುದು ಆತಂಕಕಾರಿ ಸಂಗತಿʼʼ ಎಂದು ಅಸಾಮಾಧಾನ ವ್ಯಕ್ತ ಪಡಿಸಿದರು.

ಅಗ್ನಿಶಾಮಕ ದಳಕ್ಕೆ ಸಾಮಾನ್ಯವಾಗಿ ನೇಮಕಾತಿ ನಡೆಯುವುದು SSLC ಸರ್ಟಿಫಿಕೇಟ್ ಹಾಗೂ ದೈಹಿಕ ಫಿಟ್ನೆಸ್ ಆಧಾರದಲ್ಲಿ. ನೇಮಕಾತಿಯ ನಂತರ ತರಬೇತಿ ನೀಡಿ ಅವರನ್ನು ವೃತ್ತಿಗೆ ಸಿದ್ಧಗೊಳಿಸಲಾಗುತ್ತದೆ‌. ಆದರೆ ಅದಾನಿ ಕಂಪೆನಿ ಮಾತ್ರ ತುಳುನಾಡಿನವರನ್ನು ಮಾತ್ರ ಅಲ್ಲ ಇಡೀ ಕರ್ನಾಟಕದವರನ್ನೇ ಹೊರಗಿಡಲು ʻಅನುಭವೀ ಸಿಬ್ಬಂದಿʼ ಎಂಬ ಸೂತ್ರವನ್ನು ಮುಂದಿಟ್ಟು ತುಳುವರನ್ನು ವಂಚಿಸಲು ಹೊರಟಂತಿದೆ. ಇದು ಅಪಾಯಕಾರಿ ಬೆಳವಣಿಗೆ. ದೇಶದ ಬೇರೆ ಬೇರೆ ಮಹಾ ನಗರಗಳಲ್ಲಿ ಉದ್ಯೋಗ ಕಳೆದು ಕೊಂಡು ತುಳುವರು ತಮ್ಮ ತವರು ಜಿಲ್ಲೆಗೆ ವಾಪಾಸಾಗುತ್ತಿರುವ, ನಿರುದ್ಯೋಗ ಭೀಕರ ಸ್ವರೂಪ ತಾಳುತ್ತಿರುವ ಸಂದರ್ಭ ಹೊಸ ಉದ್ಯೋಗವಾಕಾಶಗಳು ತುಳುನಾಡಿನಲ್ಲಿ ಸೃಷ್ಟಿಯಾಗಬೇಕಿತ್ತು. ದುರಂತ ಏನೆಂದರೆ, ಹೊಸ ಉದ್ಯೋಗಗಳ ಸೃಷ್ಟಿಗೆ ಸರಕಾರ ಇಲ್ಲಿ ಯಾವ ಯೋಜನೆಯನ್ನೂ ಹೊಂದಿರುವಂತೆ ಕಾಣುತ್ತಿಲ್ಲ. ಬದಲಿಗೆ ಇರುವ ಉದ್ಯೋಗಗಳನ್ನೂ ಸ್ಥಳೀಯರಿಂದ ವಂಚಿಸಿ ಹೊರ ರಾಜ್ಯದವರ ಪಾಲಾಗುವಂತೆ ಮಾಡಲಾಗುತ್ತಿದೆ. ಅದಾನಿ ಕಂಪೆನಿ ವಿಮಾನ ನಿಲ್ದಾಣದಲ್ಲಿ ಮಾಡುತ್ತಿರುವುದು ಅದನ್ನೆ. ಆದರೆ ಈ ಬಗ್ಗೆ ಕಾಳಜಿವಹಿಸಬೇಕಿದ್ದ ದಕ್ಷಿಣ ಕನ್ನಡ ಜಿಲ್ಲಾಡಳಿತ ಕೂಡ ಕಣ್ಣು ಮುಚ್ಚಿದೆ. ವಿಮಾನ‌ ನಿಲ್ದಾಣವನ್ನು ಮಾರಾಟ ಮಾಡಿಲ್ಲ. ಕೇವಲ ಮೈಂಟನೆನ್ಸ್ ಮಾತ್ರ ಅದಾನಿ ಕಂಪೆನಿಗೆ ನೀಡಲಾಗಿದೆ ಎಂದು ಜನರನ್ನು ದಿಕ್ಕು ತಪ್ಪಿಸಲು ನೋಡಿದ ಬಿಜೆಪಿಯ ಅಸಲಿ ಅಜೆಂಡಾ ಹೀಗೆ ಬಟಾಬಯಲಾಗುತ್ತಿದೆ.

ʻʻಆದರೆ ತುಳುನಾಡಿನ ಜನ ಈಗ ಸುಮ್ಮನಿರಬಾರದು. ಇದರ ವಿರುದ್ಧ ಧ್ವನಿ ಎತ್ತಬೇಕು.‌ ಮಂಗಳೂರು ವಿಮಾನ ನಿಲ್ದಾಣದಲ್ಲಿ ಸೃಷ್ಟಿಯಾಗುವ ಪ್ರತಿಯೊಂದು ಉದ್ಯೋಗಗಳೂ ತುಳುವ ಮಣ್ಣಿನ ಮಕ್ಕಳಿಗೇ ಮೀಸಲಾಗಬೇಕು. ಎಮ್ ಆರ್ ಪಿ ಎಲ್ ನ 233 ಉದ್ಯೋಗದಲ್ಲಿ ಆದ ಮೋಸ ಇಲ್ಲಿ ಮರುಕಳಿಸಲು ಬಿಡಬಾರದು‌. ಈಗ ನಾವು ಕೈ ಚೆಲ್ಲಿದರೆ ಮುಂದಕ್ಕೆ ವಿಮಾನ ನಿಲ್ದಾಣ ಮಾತ್ರ ಅಲ್ಲ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಕೈಗಾರಿಕೆ, ಉದ್ಯಮಗಳ ಉದ್ಯೋಗಗಳೂ ನಮ್ಮ ಕೈತಪ್ಪಲಿದೆ. ಅದಾನಿ ಕಂಪೆನಿ ವಿಮಾನ ನಿಲ್ದಾಣ ಅಗ್ನಿಶಾಮಕ ದಳದ ನೇಮಕಾತಿ ಪ್ರಕ್ರಿಯೆಯನ್ನು ಕೈ ಬಿಡಬೇಕು. ಪೂರ್ತಿ ನೇಮಕಾತಿ ಸ್ಥಳೀಯರಿಗೇ ಮೀಸಲಿಡಬೇಕು‌. ಹಾಗಂತ ಇಡೀ ಕರಾವಳಿ ಒಕ್ಕೊರಲಿನಿಂದ ಮಾತಾಡಬೇಕು. ಶಾಸಕ, ಸಂಸದರನ್ನು ತಡೆದು ಪ್ರಶ್ನಿಸಬೇಕುʼʼ ಎಂದು ಹೋರಾಟಗಾರ ಮುನೀರ್‌ ಕಾಟಿಪಳ್ಳ ಒತ್ತಾಯಿಸುತ್ತಿದ್ದಾರೆ.

ಇನ್ನು ಮೂರು ವರ್ಷ ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಅದಾನಿ ಕಂಪೆನಿ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ದಲ್ಲಿ ಜೊತೆಯಾಗಿ ಕಾರ್ಯ ನಿರ್ವಹಿಸಲಿದೆ. ಅಷ್ಟರಲ್ಲಿ ಅದಾನಿ ಕಂಪೆನಿಗೆ ವಿಮಾನ ನಿಲ್ದಾಣ ನಿರ್ವಹಣೆ ತರಬೇತಿಯನ್ನು ಪೂರ್ತಿಗೊಳಿಸಿ ವಿಮಾನ ನಿಲ್ದಾಣ ಪ್ರಾಧಿಕಾರದ ಸಿಬ್ಬಂದಿಗಳು ಅಲ್ಲಿಂದ ಹೊರ ನಡೆಯಲಿದ್ದಾರೆ‌. ಅದರ ಭಾಗವಾಗಿ ಅದಾನಿ ಕಂಪೆನಿ ಸುಮಾರು ನೂರರಕ್ಕೂ ಹೆಚ್ಚು ಸಿಬ್ಬಂದಿಗಳನ್ನು ಮಂಗಳೂರು ವಿಮಾನ ನಿಲ್ದಾಣಕ್ಕೆ ಕರೆ ತಂದಿದೆ‌. ಈಗ ಇರುವ ಮಾಹಿತಿ ಪ್ರಕಾರ ಇದರಲ್ಲಿ ಒಬ್ಬರೂ ತುಳುನಾಡಿನವರಿಲ್ಲ. ಕರುನಾಡಿನವರೂ ಇರುವುದು ಅನುಮಾನ. ಎಲ್ಲ ಉತ್ತರ ಭಾರತದವರೇ ಅದಾನಿ ಕಂಪೆನಿಯ ಆಧ್ಯತೆ. ಈ ಮೂಲಕ ಖಾಸಗೀಕರಣದ ಅಡ್ಡ ಪರಿಣಾಮವನ್ನು ತುಳುವರು ಅನಭವಸಿಲು ಸಿದ್ಧಗೊಳ್ಳುತ್ತಿದ್ದಾರೆ.

Tags: ಅಂತರರಾಷ್ಟ್ರೀಯ ವಿಮಾನ ನಿಲ್ದಾಣಅದಾನಿ ಕಂಪೆನಿಉದ್ಯೋಗತುಳುವರ ಕಡಗಣೆನೆಮಂಗಳೂರು
Previous Post

ಅತ್ತ ಪಿಎಂ ಕೇರ್ಸ್ ನಿಧಿ ಸಾವಿರಾರು ಕೋಟಿ, ಇತ್ತ ಆಸ್ಪತ್ರೆಯಲ್ಲಿ ಹತ್ತಿಗೂ ಹಣವಿಲ್ಲ!

Next Post

ಕೋವಿಡ್ ಸಾಂಕ್ರಾಮಿಕದ ನಡುವೆ ಸರಕಾರಿ ಶಾಲೆಗಳಲ್ಲಿ ದೇಶಾದ್ಯಂತ ದಾಖಲಾತಿ ಹೆಚ್ಚಳ

Related Posts

Top Story

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

by ಪ್ರತಿಧ್ವನಿ
October 12, 2025
0

ಸರ್ಕಾರಿ ಶಾಲಾ ಕಾಲೇಜು ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು ಎಂದು ಒತ್ತಾಯಿಸಿ ಕರ್ನಾಟಕದ ಸಚಿವ ಪ್ರಿಯಾಂಕ್ ಖರ್ಗೆ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ...

Read moreDetails

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

October 12, 2025

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

October 12, 2025

Basavaraj Bommai: ಸಂಭ್ರಮದಿಂದ ಬಂಕಾಪುರ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ

October 12, 2025

DK Shivakumar: ಇಂತ ಶಾಸಕರನ್ನು ಆಯ್ಕೆ ಮಾಡಿಕೊಂಡ ನಿಮ್ಮ ಪರಿಸ್ಥಿತಿ ಏನೆಂದು ನನಗೆ ಅರ್ಥವಾಗುತ್ತದೆ..!!

October 12, 2025
Next Post
ಕೋವಿಡ್ ಸಾಂಕ್ರಾಮಿಕದ ನಡುವೆ ಸರಕಾರಿ ಶಾಲೆಗಳಲ್ಲಿ ದೇಶಾದ್ಯಂತ ದಾಖಲಾತಿ ಹೆಚ್ಚಳ

ಕೋವಿಡ್ ಸಾಂಕ್ರಾಮಿಕದ ನಡುವೆ ಸರಕಾರಿ ಶಾಲೆಗಳಲ್ಲಿ ದೇಶಾದ್ಯಂತ ದಾಖಲಾತಿ ಹೆಚ್ಚಳ

Please login to join discussion

Recent News

Top Story

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

by ಪ್ರತಿಧ್ವನಿ
October 12, 2025
Top Story

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

by ಪ್ರತಿಧ್ವನಿ
October 12, 2025
Top Story

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

by ಪ್ರತಿಧ್ವನಿ
October 12, 2025
Top Story

Basavaraj Bommai: ಸಂಭ್ರಮದಿಂದ ಬಂಕಾಪುರ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ

by ಪ್ರತಿಧ್ವನಿ
October 12, 2025
Top Story

DK Shivakumar: ಇಂತ ಶಾಸಕರನ್ನು ಆಯ್ಕೆ ಮಾಡಿಕೊಂಡ ನಿಮ್ಮ ಪರಿಸ್ಥಿತಿ ಏನೆಂದು ನನಗೆ ಅರ್ಥವಾಗುತ್ತದೆ..!!

by ಪ್ರತಿಧ್ವನಿ
October 12, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

October 12, 2025

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

October 12, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada