• Home
  • About Us
  • ಕರ್ನಾಟಕ
Saturday, December 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಮಂಡ್ಯ ಕಬ್ಬು ಬೆಳೆಗಾರರಿಗೆ ಹೆಚ್ಚುವರಿ 2 ಗಂಟೆ ವಿದ್ಯುತ್: ಪ್ರಸ್ತಾವನೆ ಸಲ್ಲಿಸಲು ಸಚಿವ ಕೆ.ಜೆ. ಜಾರ್ಜ್ ಸೂಚನೆ

ಪ್ರತಿಧ್ವನಿ by ಪ್ರತಿಧ್ವನಿ
January 7, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿದೇಶ, ವಿಶೇಷ, ಸಿನಿಮಾ
0
Share on WhatsAppShare on FacebookShare on Telegram
  • ಇಂಧನ ಇಲಾಖೆಗೆ ಸಂಬಂಧಿಸಿದಂತೆ ಅಧಿಕಾರಿಗಳು, ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಭೆ
  • ಕುಸುಮ್-ಸಿ ಯೋಜನೆಗೆ ಅಗತ್ಯ ಭೂಮಿ ಒದಗಿಸಲು ಜಿಲ್ಲಾಧಿಕಾರಿಗಳಿಗೆ ಸಚಿವರ ಸೂಚನೆ

ಮಂಡ್ಯ, ಜ. 7, 2025: ಮುಂಬರುವ ಬೇಸಿಗೆಯಲ್ಲಿ ಜಿಲ್ಲೆಯ ಕೃಷಿ ಪಂಪ್ ಸೆಟ್ ಗಳಿಗೆ ಈಗ ಲಭ್ಯವಿರುವ ಏಳು ತಾಸು ತ್ರಿ ಫೇಸ್ ವಿದ್ಯುತ್ ಜತೆ ಹೆಚ್ಚುವರಿಯಾಗಿ ಎರಡು ಗಂಟೆ ವಿದ್ಯುತ್ ಪೂರೈಸಲು ಸರ್ಕಾರ ಬದ್ಧವಾಗಿದೆ ಎಂದು ಹೇಳಿರುವ ಇಂಧನ ಸಚಿವ ಕೆ.ಜೆ.ಜಾರ್ಜ್, ಈ ಬಗ್ಗೆ ಪ್ರಸ್ತಾವನೆ ಕಳುಹಿಸುವಂತೆ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ಕಂಪನಿ (ಸೆಸ್ಕ್)ಗೆ ಸೂಚಿಸಿದ್ದಾರೆ.

ADVERTISEMENT

ಇಲ್ಲಿನ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಮಂಗಳವಾರ ಇಂಧನ ಇಲಾಖೆಗೆ ಸಂಬಂಧಿಸಿದ ವಿಷಯಗಳ ಕುರಿತು ಜಿಲ್ಲೆಯ ಎಲ್ಲಾ ಚುನಾಯಿತ ಪ್ರತಿನಿಧಿಗಳು ಹಾಗೂ ಇಧನ ಇಲಾಖೆಯ ಅಧಿಕಾಗಳೊಂದಿಗೆ ನಡೆದ ಸಭೆಯಲ್ಲಿ ಅವರು ಮಾತನಾಡಿದರು.

ಕಳೆದ ಬಾರಿ ಉತ್ತಮ ಮಳೆಯಾಗಿರುವುದರಿಂದ ಕಬ್ಬು ಸೇರಿದಂತೆ ಅಲ್ಪಾವಧಿ ಬೆಳೆಗಳನ್ನು ಹೆಚ್ಚಾಗಿ ಬೆಳೆಯಲಾಗುತ್ತಿದೆ. ಅದರಲ್ಲೂ ಮಾರ್ಚ್ ಅಂತ್ಯದವರೆಗೆ ಕಬ್ಬು ಬೆಳೆಗೆ ನಿರಂತರ ನೀರಿನ ಅಗತ್ಯವಿರುವುದರಿಂದ ಕೃಷಿ ಪಂಪ್ ಸೆಟ್ ಗಳಿಗೆ ಈಗಿರುವ ಏಳು ಗಂಟೆ ವಿದ್ಯುತ್ ಜತೆಗೆ ಹೆಚ್ಚುವರಿಯಾಗಿ ಎರಡು ಗಂಟೆ ವಿದ್ಯುತ್ ಅಗತ್ಯವಿದೆ ಎಂದು ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಸಚಿವರ ಗಮನಕ್ಕೆ ತಂದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಈ ಬಗ್ಗೆ ಕೂಡಲೇ ಪ್ರಸ್ತಾವನೆ ಸಲ್ಲಿಸುವಂತೆ ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚಿಸಿದರಲ್ಲದೆ, ಪ್ರಸ್ತಾವನೆ ಆಧರಿಸಿ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದರು.

ಕಳೆದ ಬಾರಿ ಹೆಚ್ಚು ಮಳೆಯಾಗಿದ್ದರಿಂದ ಈ ಬಾರಿ ಹಿಂಗಾರಿನಲ್ಲಿ ಕೃಷಿ ಪ್ರದೇಶ ವಿಸ್ತರಣೆಯಾಗಲಿದ್ದು, ಹೆಚ್ಚುವರಿ ವಿದ್ಯುತ್ ಬೇಕಾಗುತ್ತದೆ ಎಂಬ ಬಗ್ಗೆ ಕೃತಕ ಬುದ್ಧಿಮತ್ತೆ ಆಧರಿಸಿ ಲೋಡ್ ಡಿಸ್ಪ್ಯಾಚ್ ಸೆಂಟರ್ ಮತ್ತು ಪಿಸಿಕೆಎಲ್ ನವರು ಲೆಕ್ಕ ಹಾಕಿದ್ದಾರೆ. ಅದರಂತೆ ಮಂಡ್ಯ ಜಿಲ್ಲೆಯಲ್ಲಿ ಕೃಷಿ ಪ್ರದೇಶ ಕಳೆದ ಬಾರಿಗಿಂತ ಶೇ. 30ರಷ್ಟು ಏರಿಕೆಯಾಗಲಿದೆ. ಹೀಗಾಗಿ ಕೃಷಿ ಚಟುವಟಿಕೆಗಳಿಗೆ ಯಾವುದೇ ಸಮಸ್ಯೆಯಾಗದಂತೆ ವಿದ್ಯುತ್ ಪೂರೈಸಲು ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಕುಸುಮ್- ಸಿ ಗೆ ಭೂಮಿ ನೀಡಲು ಸೂಚನೆ:
ಕುಸುಮ್-ಸಿ ಯೋಜನೆಯಡಿ ಮಂಡ್ಯ ಜಿಲ್ಲೆಯಲ್ಲಿ 59 ಸಬ್ ಸ್ಟೇಷನ್ ಗಳಿದ್ದು, ಈ ಪೈಕಿ 37 ಕಡೆ ಫೀಡರ್ ಸೋಲರೈಸೇಷನ್ ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಈ ಪೈಕಿ ನಾಲ್ಕು ಯೋಜನೆಗಳ ಕೆಲಸ ಆರಂಭವಾಗಿದೆ. ಉಳಿದವುಗಳಿಗೆ ಭೂಮಿ ಗುರುತಿಸುವ ಕಾರ್ಯ ನಡೆಯುತ್ತಿದೆ. ಮುಂದಿನ ಒಂದು ವರ್ಷದಲ್ಲಿ ಈ ಯೋಜನೆ ಪೂರ್ಣಗೊಳಿಸಿ ರೈತರಿಗೆ ಹಗಲು ವೇಳೆ ನಿರಂತರ 7 ಗಂಟೆ ವಿದ್ಯುತ್ ಪೂರೈಸುವ ಕಾರ್ಯ ಮಾಡಬೇಕಾಗಿರುವುದರಿಂದ ಲಭ್ಯವಿರುವ ಸರ್ಕಾರಿ ಭೂಮಿಯನ್ನು ತ್ವರಿತವಾಗಿ ಒದಗಿಸುವಂತೆ ಸಭೆಯಲ್ಲಿದ್ದ ಜಿಲ್ಲಾಧಿಕಾರಿಗೆ ಸೂಚಿಸಿದರು.

ಅಕ್ರಮ ಪಂಪ್ ಸೆಟ್ ಗಳ ಸಕ್ರಮ ಯೋಜನೆಯಡಿ 2023ರ ಸೆಪ್ಟೆಂಬರ್ ವರೆಗೆ 1,21,164 ಅರ್ಜಿಗಳು ಬಂದಿದ್ದು, 1,15,794 ಪಂಪ್ ಸೆಟ್ ಗಳನ್ನು ಸಕ್ರಮಗೊಳಿಸಲಾಗಿದೆ. ಉಳಿದ 5,571 ಅರ್ಜಿಗಳನ್ನು ಮೂರು ತಿಂಗಳಲ್ಲಿ ಇತ್ಯರ್ಥಗೊಳಿಸಲಾಗುವುದು. ಆ ಬಳಿಕ ಅಕ್ರಮ-ಸಕ್ರಮಕ್ಕೆ 1,600 ಮಂದಿ ಅರ್ಜಿ ಸಲ್ಲಿಸಿದ್ದು, ಹಳೆಯ ಅರ್ಜಿಗಳನ್ನು ಇತ್ಯರ್ಥಗೊಳಿಸಿದ ಬಳಿಕ ಹೊಸ ಅರ್ಜಿಗಳ ಕುರಿತಂತೆ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಬೇಸಿಗೆಯಲ್ಲಿ ವಿದ್ಯುತ್ ಖರೀದಿ:

ಈ ಬಾರಿ ಕೃಷಿ ಪ್ರದೇಶ ವಿಸ್ತರಣೆಯಾಗಿರುವ ಕಾರಣ ಜನವರಿಯಿಂದ ಮೇ ತಿಂಗಳವರೆಗೆ ಹೆಚ್ಚುವರಿ ವಿದ್ಯುತ್ ಅಗತ್ಯವಿದೆ. ಈ ಕೊರತೆ ನೀಗಿಸಲು ದೀರ್ಘಾವಧಿ ವಿದ್ಯುತ್ ಖರೀದಿಗೆ ನಿರ್ಧರಿಸಲಾಗಿದೆ. ಜನವರಿ ಮತ್ತು ಫೆಬ್ರವರಿಯಲ್ಲಿ ತಲಾ 400 ಮೆಗಾವ್ಯಾಟ್ ಹಾಗೂ ಮಾರ್ಚ್, ಎಪ್ರಿಲ್ ಮತ್ತು ಮೇ ತಿಂಗಳಲ್ಲಿ ತಲಾ 1000 ಮೆಗಾವ್ಯಾಟ್ ವಿದ್ಯುತ್ ಖರೀದಿಸಲು ಯೋಜನೆ ರೂಪಿಸಲಾಗಿದೆ. ದೀರ್ಘಾವದಿ ವಿದ್ಯುತ್ ಖರೀದಿ ಮಾಡಿದರೆ ಕಡಿಮೆ ದರಕ್ಕೆ ವಿದ್ಯುತ್ ಲಭ್ಯವಾಗುತ್ತದೆ. ಹೀಗಾಗಿ ಹೆಚ್ಚುವರಿ ವಿದ್ಯುತ್ತನ್ನು ಪೀಕ್ ಅವರ್ ನಲ್ಲಿ ಹೆಚ್ಚಿನ ದರಕ್ಕೆ ಮಾರಾಟ ಮಾಡಿದರೆ ಇಲಾಖೆಗೂ ಲಾಭವಾಗುತ್ತದೆ ಎಂದು ತಿಳಿಸಿದರು.

ವಿದ್ಯುತ್ ಬೇಡಿಕೆಯ ಕುರಿತು ಪ್ರತಿಕ್ರಿಯಿಸಿದ ಸಚಿವರು, “ರಾಜ್ಯದಲ್ಲಿ ಪ್ರಸ್ತುತ ಬೇಡಿಕೆಗಿಂತ ಹೆಚ್ಚಿನ ವಿದ್ಯುತ್ ಲಭ್ಯವಿದೆ”. “ಹೆಚ್ಚುವರಿ ಉಪಕೇಂದ್ರಗಳ ಸ್ಥಾಪನೆ, ಟ್ರಾನ್ಸ್‌ಫಾರ್ಮರ್‌ಗಳ ನವೀಕರಣ ಸೇರಿದಂತೆ ಅಗತ್ಯ ಮೂಲ ಸೌಕರ್ಯ ಕಲ್ಪಿಸಿ ಪೂರೈಕೆ ಖರಿತಪಡಿಸಿಕೊಳ್ಳಲಾಗುವುದು” ಎಂದು ತಿಳಿಸಿದರು.

ಜನಪ್ರತಿನಿಧಿಗಳೊಂದಿಗೆ ಸಂಪರ್ಕದಲ್ಲಿರಬೇಕು:

ಸಭೆಯಲ್ಲಿ ಹಜರಿದ್ದ ಜಿಲ್ಲೆಯ ಶಾಸಕರು ತಮ್ಮ ಕ್ಷೇತ್ರಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಪ್ರಸ್ತಾಪಿಸಿದಾಗ ಪ್ರತಿಕ್ರಿಯಿಸಿದ ಸಚಿವ ಕೆ.ಜೆ.ಜಾರ್ಜ್, “ಜನರು ಸಾಮಾನ್ಯವಾಗಿ ತಮ್ಮ ಸಮಸ್ಯೆಗಳನ್ನು ನೇರವಾಗಿ ಶಾಸಕರು, ಸಂಸದರು ಸೇರಿದಂತೆ ಜನಪ್ರತಿನಿಧಿಗಳೊಂದಿಗೆ ಹೇಳಿಕೊಳ್ಳುತ್ತಾರೆ. ಆದ್ದರಿಂದ ಜನಪ್ರತಿನಿಧಿಗಳಿಗೆ ಜನರ ಸಮಸ್ಯೆಗಳ ಬಗ್ಗೆ ಸ್ಪಷ್ ಅರಿವಿರುತ್ತದೆ. ಹೀಗಾಗಿ ಅಧಿಕಾರಿಗಳು ಸ್ಥಳೀಯ ಜನಪ್ರತಿನಿಧಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಅವರ ಸಲಹೆಗಳನ್ನು ಆಧರಿಸಿ ಸ್ಪಂದಿಸಬೇಕು ಎಂದು ಸೂಚನೆ ನೀಡಿದರು.

ಸೆಸ್ಕ್ ಅಧ್ಯಕ್ಷ ಎ.ಬಿ.ರಮೇಶ್ ಬಂಡಿಸಿದ್ದೇಗೌಡ, ವಿಧಾನ ಪರಿಷತ್ ಸದಸ್ಯರಾದ ದಿನೇಶ್ ಗೂಳಿಗೌಡ, ವಿವೇಕಾನಂದ, ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿ ಅಧ್ಯಕ್ಷ ಚಿಕ್ಕಲಿಂಗಯ್ಯ‌, ಇಂಧನ ಇಲಾಖೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ, ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಪಂಕಜ್ ಕುಮಾರ್ ಪಾಂಡೆ, ಜಿಲ್ಲಾಧಿಕಾರಿ ಡಾ.ಕುಮಾರ್, ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶೇಕ್ ತನ್ವೀರ್ ಆಸಿಫ್, ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕರಾದ ಶೀಲಾ ಸಿ. ಮತ್ತಿತರರು ಹಾಜರಿದ್ದರು.

Tags: BescomBJPCongress PartyKEBKJ GeorgeKusum CMandyaMescomಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಗರ್ಭಿಣಿಯರು ಎಡ ಭಾಗದಲ್ಲಿ ಮಲಗುವುದು ಉತ್ತಮ ಯಾಕೆ ಗೊತ್ತಾ?

Next Post

ಬಿಡದಿ ವಿದ್ಯುತ್ ಘಟಕದಲ್ಲಿ ಅವಘಡ ಕುರಿತು ತಾಂತ್ರಿಕ ತನಿಖೆ:ಸಚಿವ ಕೆ.ಜೆ.ಜಾರ್ಜ್

Related Posts

ಒಟಿಟಿಗೆ ಎಂಟ್ರಿ ಕೊಟ್ಟ ಸೈಕಲಾಜಿಕಲ್ ಥ್ರಿಲ್ಲರ್ ‘ಗ್ರೀನ್’
Top Story

ಒಟಿಟಿಗೆ ಎಂಟ್ರಿ ಕೊಟ್ಟ ಸೈಕಲಾಜಿಕಲ್ ಥ್ರಿಲ್ಲರ್ ‘ಗ್ರೀನ್’

by ಪ್ರತಿಧ್ವನಿ
December 13, 2025
0

ಕನ್ನಡ‌ ಸೈಕಲಾಜಿಕಲ್ ಥ್ರಿಲ್ಲರ್ ಗ್ರೀನ್(Green) ಸಿನಿಮಾ ಒಟಿಟಿ ಎಂಟ್ರಿಗೆ ಸಜ್ಜಾಗಿದೆ. ನಾಳೆಯಿಂದ zee5 ಒಟಿಟಿಯಲ್ಲಿ ಈ ಚಿತ್ರ ಸ್ಟ್ರೀಮಿಂಗ್ ಆಗಲಿದೆ. https://youtu.be/v2kOW8m5SWg?si=_pISA5B40rv2ey9a ರಾಜ್ ವಿಜಯ್ ನಿರ್ದೇಶನದಲ್ಲಿ ಮೂಡಿಬಂದ...

Read moreDetails
ಲೆಜೆಂಡ್‌ ಮೆಸ್ಸಿ ನೋಡಲು ಬಂದ ಫ್ಯಾನ್ಸ್‌ಗೆ ನಿರಾಸೆ: ಕ್ರೀಡಾಂಗಣಕ್ಕೆ ನುಗ್ಗಿ ಆಕ್ರೋಶ

ಲೆಜೆಂಡ್‌ ಮೆಸ್ಸಿ ನೋಡಲು ಬಂದ ಫ್ಯಾನ್ಸ್‌ಗೆ ನಿರಾಸೆ: ಕ್ರೀಡಾಂಗಣಕ್ಕೆ ನುಗ್ಗಿ ಆಕ್ರೋಶ

December 13, 2025
BBK 12: ಕ್ಯಾಪ್ಟನ್ಸಿ ಟಾಸ್ಕ್‌ ಗೆದ್ದ ರಾಶಿಕಾ ಜೊತೆ ಸೂರಜ್ ಕಿತ್ತಾಟ

BBK 12: ಕ್ಯಾಪ್ಟನ್ಸಿ ಟಾಸ್ಕ್‌ ಗೆದ್ದ ರಾಶಿಕಾ ಜೊತೆ ಸೂರಜ್ ಕಿತ್ತಾಟ

December 13, 2025
Winter Session 2025: ಕಾರ್ಮಿಕ ಕಿಟ್ ವಿತರಣೆ ನಿಯಮಕ್ಕೆ ಮಾರ್ಪಾಡು- ಸಚಿವ ಸಂತೋಷ್ ಲಾಡ್ ಸ್ಪಷ್ಟನೆ

Winter Session 2025: ಕಾರ್ಮಿಕ ಕಿಟ್ ವಿತರಣೆ ನಿಯಮಕ್ಕೆ ಮಾರ್ಪಾಡು- ಸಚಿವ ಸಂತೋಷ್ ಲಾಡ್ ಸ್ಪಷ್ಟನೆ

December 13, 2025
ಬೆಂಗಳೂರಿನಲ್ಲಿ ತೀವ್ರ ಹದಗೆಟ್ಟ ಗಾಳಿಯ ಗುಣಮಟ್ಟ: ಇದು ಎಚ್ಚರಿಕೆ ಗಂಟೆ

ಬೆಂಗಳೂರಿನಲ್ಲಿ ತೀವ್ರ ಹದಗೆಟ್ಟ ಗಾಳಿಯ ಗುಣಮಟ್ಟ: ಇದು ಎಚ್ಚರಿಕೆ ಗಂಟೆ

December 13, 2025
Next Post

ಬಿಡದಿ ವಿದ್ಯುತ್ ಘಟಕದಲ್ಲಿ ಅವಘಡ ಕುರಿತು ತಾಂತ್ರಿಕ ತನಿಖೆ:ಸಚಿವ ಕೆ.ಜೆ.ಜಾರ್ಜ್

Recent News

https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಒಟಿಟಿಗೆ ಎಂಟ್ರಿ ಕೊಟ್ಟ ಸೈಕಲಾಜಿಕಲ್ ಥ್ರಿಲ್ಲರ್ ‘ಗ್ರೀನ್’

ಒಟಿಟಿಗೆ ಎಂಟ್ರಿ ಕೊಟ್ಟ ಸೈಕಲಾಜಿಕಲ್ ಥ್ರಿಲ್ಲರ್ ‘ಗ್ರೀನ್’

December 13, 2025
ಲೆಜೆಂಡ್‌ ಮೆಸ್ಸಿ ನೋಡಲು ಬಂದ ಫ್ಯಾನ್ಸ್‌ಗೆ ನಿರಾಸೆ: ಕ್ರೀಡಾಂಗಣಕ್ಕೆ ನುಗ್ಗಿ ಆಕ್ರೋಶ

ಲೆಜೆಂಡ್‌ ಮೆಸ್ಸಿ ನೋಡಲು ಬಂದ ಫ್ಯಾನ್ಸ್‌ಗೆ ನಿರಾಸೆ: ಕ್ರೀಡಾಂಗಣಕ್ಕೆ ನುಗ್ಗಿ ಆಕ್ರೋಶ

December 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!