ಹಿರಿಯ ಐಪಿಎಲ್ ಅಧಿಕಾರಿ ರವೀಂದ್ರನಾಥ್ ದಿಢೀರನೆ ಐಪಿಎಸ್ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.
ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಡಿಜಿಪಿ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ರವೀಂದ್ರನಾಥ್ ಅವರನ್ನು ರಾಜ್ಯ ಸರಕಾರ ದಿಢೀರನೆ ರಾಜ್ಯ ಪೊಲೀಸ್ ತರಬೇತಿ ಡಿಜಿಪಿಯಾಗಿ ವರ್ಗಾವಣೆ ಮಾಡಿದ್ದಾರೆ.
ಅವಧಿಗೂ ಮುನ್ನ ವರ್ಗಾವಣೆ ಮಾಡಲಾಗಿದ್ದು, ಸಾರ್ವಜನಿಕ ಹಿತಾಸಕ್ತಿ ಇಲ್ಲದೇ ಏಕಾಏಕಿ ವರ್ಗಾವಣೆ ಮಾಡಿರುವ ಸರಕಾರದ ಆದೇಶಕ್ಕೆ ರವೀಂದ್ರನಾಥ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.