ಡಾರ್ಲಿಂಗ್ ಪ್ರಭಾಸ್ ನಟನೆಯ ʻಆದಿಪುರುಷ್ʼ ಸಿನಿಮಾ ಜೂನ್ 16ರಂದು ವಿಶ್ವದಾದ್ಯಂತ ಅದ್ಧೂರಿಯಾಗಿ ಬಿಡುಗಡೆಯಾಗಲಿದೆ. ಆದ್ರೆ ಅದಕ್ಕೂ ಮುನ್ನ ವಿದೇಶದ ಫಿಲ್ಮ್ ಫೆಸ್ಟಿವಲ್‌ನಲ್ಲಿ ಸಿನಿಮಾ ಪ್ರದರ್ಶನವಗೊಳ್ಳಲಿದೆ. ನ್ಯೂಯಾರ್ಕ್ನಲ್ಲಿ ಜೂನ್ 7ರಿಂದ ಜೂನ್ 18ರವರೆಗೆ ‘ಟ್ರೈಬ್ಯಾಕಾ ಫಿಲ್ಮ್ ಫೆಸ್ಟಿವಲ್’ ನಡೆಯಲಿದೆ.

ಈ ಸಿನಿಮೋತ್ಸವದಲ್ಲಿ ಪ್ರದರ್ಶನ ಕಾಣಲು ‘ಆದಿಪುರುಷ್’ ಚಿತ್ರ ಆಯ್ಕೆ ಆಗಿದೆ. ಸಿನಿಮೋತ್ಸವದ ವೆಬ್ಸೈಟ್ನಲ್ಲಿ ಈ ಚಿತ್ರದ ಅವಧಿ ಬಗ್ಗೆ ಮಾಹಿತಿ ಹಂಚಿಕೊಳ್ಳಲಾಗಿದೆ. 400 ಕೋಟಿ ರೂಪಾಯಿಗೂ ಅಧಿಕ ಬಜೆಟ್‌ನಲ್ಲಿ ಆದಿಪುರುಷ್ ಸಿನಿಮಾ ಮೂಡಿಬಂದಿದೆ ಎನ್ನಲಾಗುತ್ತಿದೆ.

ಟಾಲಿವುಡ್ ನಟ ಪ್ರಭಾಸ್, ಕೃತಿ ಸನೂನ್ ಮತ್ತು ಸನ್ನಿ ಹೊರತುಪಡಿಸಿ, ಚಿತ್ರದಲ್ಲಿ ಸೈಫ್ ಅಲಿ ಖಾನ್ ಸೇರಿದಂತೆ ಇತರರು ನಟಿಸಿದ್ದಾರೆ. ಇದು ಹಿಂದು ಮಹಾಕಾವ್ಯ ರಾಮಾಯಣ ರೂಪಾಂತರವಾಗಿದೆ. ಆದಿಪುರುಷ್ ಸಿನಿಮಾವನ್ನ ಟಿ-ಸೀರೀಸ್‌ನ ಭೂಷಣ್ ಕುಮಾರ್ ಮತ್ತು ಕ್ರಿಶನ್ ಕುಮಾರ್, ಓಂ, ಪ್ರಸಾದ್ ಸುತಾರ್ ಮತ್ತು ರೆಟ್ರೋಫೈಲ್ಸ್‌ನ ರಾಜೇಶ್ ನಾಯರ್ ನಿರ್ಮಿಸಿದ್ದಾರೆ. ʻತಾನ್ಹಾಜಿ ದಿ ಅನ್‌ಸಂಗ್ ವಾರಿಯರ್ʼ ಖ್ಯಾತಿಯ ಓಂ ರಾವುತ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ.










