ಯಂಗ್ ರೆಬೆಲ್ ಸ್ಟಾರ್ ಪ್ರಭಾಸ್ ನಟನೆಯ ಬಹುನಿರೀಕ್ಷಿತ ಆದಿಪುರುಷ್ ಚಿತ್ರದ ಫರ್ಸ್ಟ್ ಲುಕ್ ಬಿಡುಗಡೆಯಾಗಿದ್ದು ಶ್ರೀರಾಮನಾಗಿ ಪ್ರಭಾಸ್ ಕಾಣಿಸಿಕೊಂಡಿದ್ದಾರೆ.
ಚಿತ್ರದ ಫರ್ಸ್ಟ್ ಲುಕ್ ಅನ್ು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ನಟ ಪ್ರಭಾಸ್ ಅಯೋಧ್ಯೆಯ ಸರಯು ನದಿ ದಡದಲಿ ನಮ್ಮನ್ನು ಕೂಡಿಕೊಳ್ಳಿ ಎಂಬ ಅಡಿಬರಹವನ್ನ ನೀಡಿದ್ದಾರೆ.
ಅಕ್ಟೋಬರ್ 2ರಂದು ಚಿತ್ರದ ಟೀಸರ್ ರಿಲೀಸ್ ಮಾಡಲು ಚಿತ್ರ ತಂಡ ಪ್ಲಾನ್ ಹಾಕಿಕೊಂಡಿದೆ. ಚಿತ್ರದಲ್ಲಿ ಪ್ರಭಾಸ್ ರಾಮನಾಗಿ ನಟಿಸಿದರೆ ರಾವಣನಾಗಿ ಬಾಲಿವುಡ್ ನಟ ಸೈಫ್ ಅಲಿ ಖಾನ್ ನಟಿಸುತ್ತಿದ್ದಾರೆ.
ಸೀತೆಯಾಗಿ ಕೃತಿ ಸನೋನ್ ಕಾಣಿಸಿಕೊಂಡಿದ್ದು ಚಿತ್ರವನ್ನು 2023 ಜನವರಿ 12ರಂದು ವಿಶ್ವದಾದ್ಯಂತ ತೆರೆ ಕಾಣಲಿದೆ.
ಪೌರಾಣಿಕ ಕಥಾಗಹಂದರವುಳ್ಳ ಆದಿಪುರುಷ್ ಸಿನಿಮಾ 500 ಕೋಟಿ ಬಜೆಟ್ನಲ್ಲಿ ತಯಾರಾಗುತ್ತಿರುವ ಪ್ಯಾನ್ ಇಂಡಿಯಾ ಚಿತ್ರವಾಗಿದ್ದು ಪ್ರತಿಷ್ಠಿತ ಟಿ-ಸೀರೀಸ್ ಸಂಸ್ಥೆ ಚಿತ್ರಕ್ಕೆ ಬಂಡವಾಳ ಹೂಡುತ್ತಿದೆ.
ಅಜಯ್ ದೇವಗನ್ ನಟನಯ ತಾನಾಜಿ ಚಿತ್ರವನ್ನ ನಿರ್ದೇಶಿಸಿದ್ದ ಓಂ ರಾವುತ್ ಆದಿಪುರುಷ್ ಚಿತ್ರವನ್ನ ನಿರ್ದೇಶಿಸುತ್ತಿದ್ದಾರೆ.