• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಆದಿತ್ಯ-ಎಲ್‌1 ನೌಕೆಯ ಉಡ್ಡಯನಕ್ಕೆ ಭರದ ಸಿದ್ಧತೆ, ತಪಾಸಣೆ ಪೂರ್ಣ: ಇಸ್ರೊ

ಪ್ರತಿಧ್ವನಿ by ಪ್ರತಿಧ್ವನಿ
August 30, 2023
in ಇದೀಗ, ದೇಶ
0
ಆದಿತ್ಯ-ಎಲ್‌1

ಆದಿತ್ಯ-ಎಲ್‌1 ಬಾಹ್ಯಾಕಾಶ ನೌಕೆ

Share on WhatsAppShare on FacebookShare on Telegram

ಚಂದ್ರಯಾನ 3 ಯಶಸ್ಸಿನ ಬೆನ್ನಲ್ಲೇ ಸೂರ್ಯನ ಬಾಹ್ಯ ವಾತಾವರಣದ ಅಧ್ಯಯನಕ್ಕಾಗಿ ಇಸ್ರೋ ‘ಆದಿತ್ಯ-ಎಲ್1’ ಬಾಹ್ಯಾಕಾಶ ನೌಕೆಯನ್ನು ಉಡ್ಡಯನ ಮಾಡುವುದಕ್ಕೆ ಭರದಿಂದ ಸಿದ್ಧತೆ ನಡೆಸಿದೆ.

ADVERTISEMENT

ಆದಿತ್ಯ-ಎಲ್ 1 ಬಾಹ್ಯಾಕಾಶ ನೌಕೆಯ ಉಡ್ಡಯನಕ್ಕೆ ಸಿದ್ಧತೆಗಳು ಭರದಿಂದ ಸಾಗಿವೆ. ವಾಹಕದ ತಪಾಸಣೆ ಪೂರ್ಣಗೊಂಡಿದೆ ಎಂದು ಸಾಮಾಜಿಕ ಮಾಧ್ಯಮ ʼಎಕ್ಸ್ʼನಲ್ಲಿ ಇಸ್ರೊ ಮಾಹಿತಿ ನೀಡಿದ್ದು, ಫೊಟೊಗಳನ್ನು ಹಂಚಿಕೊಂಡಿದೆ.

ಸೂರ್ಯನ ಅಧ್ಯಯನಕ್ಕಾಗಿ ಭಾರತ ಕಳುಹಿಸಲಿರುವ ಚೊಚ್ಚಲ ಯೋಜನೆ ಆದಿತ್ಯ-ಎಲ್1 ಅನ್ನು ಸೆಪ್ಟೆಂಬರ್ 2ರಂದು ಬೆಳಿಗ್ಗೆ 11.50ಕ್ಕೆ ಶ್ರೀಹರಿಕೋಟಾದಿಂದ ಉಡ್ಡಯನವಾಗಲಿದೆ ಎಂದು ಇಸ್ರೋ ತಿಳಿಸಿದೆ.

ಸೂರ್ಯನ ಬಾಹ್ಯ ವಾತಾವರಣದ ಅಧ್ಯಯನ ನಡೆಸುವುದಕ್ಕೆ ಬೇಕಾದ ರೀತಿಯಲ್ಲಿ ಅದಿತ್ಯ ಎಲ್1 ಅನ್ನು ವಿನ್ಯಾಸಗೊಳಿಸಲಾಗಿದೆ. ಈ (ಎಲ್ 1) ಪ್ರದೇಶದಲ್ಲಿ ಉಪಗ್ರಹವನ್ನು ಇರಿಸಿ ಸೌರ ಮಾರುತದ ಅಧ್ಯಯನ ನಡೆಸಲಾಗುವುದು. ಎಲ್ ಎಂದರೆ, ಲಾಗೇಂಜ್ ಬಿಂದು. ಇದು ಸೂರ್ಯ ಮತ್ತು ಭೂಮಿಯ ಗುರುತ್ವಾಕರ್ಷಣ ಬಲ ಸಮಾನವಾಗಿರುವ ಪ್ರದೇಶ. ಇಲ್ಲಿ ವೀಕ್ಷಣಾ ಉಪಗ್ರಹವನ್ನು ನಿಯೋಜಿಸಿದರೆ ಅದು ಅತ್ಯಂತ ಕಡಿಮೆ ಇಂಧನದಲ್ಲಿ ನೆಲೆ ನಿಲ್ಲಲು ಸಾಧ್ಯ. ಈ ಪ್ರದೇಶವು ಭೂಮಿಯಿಂದ 15 ಲಕ್ಷ ಕಿಲೋ ಮೀಟರ್ ದೂರದಲ್ಲಿದೆ.

ತೇಜೋಮಂಡಲದ ಅಧ್ಯಯನಕ್ಕಾಗಿ ವಿಸಿಬಲ್ ಎಮಿಶನ್ ಲೈನ್ ಕೊರೊನಾಗ್ರಾಫ್ (ವಿಇಎಲ್ಸಿ) ಎಂಬ ಉಪಕರಣವನ್ನು ಬೆಂಗಳೂರಿನ ಭಾರತೀಯ ಖಭೌತವಿಜ್ಞಾನ ಸಂಸ್ಥೆಯು ಅಭಿವೃದ್ಧಿಪಡಿಸಿದೆ. ಸೂರ್ಯನ ಅತಿನೇರಳೆ ಕಿರಣಗಳ ಅಧ್ಯಯನ ನಡೆಸುವ ಉಪಕರಣವನ್ನು ಪುಣೆಯ ಇಂಟರ್ ಯುನಿವರ್ಸಿಟಿ ಸೆಂಟರ್ ಫಾರ್ ಅಸ್ಕೋನಮಿ ಆ್ಯಂಡ್ ಆಸ್ಟೋಫಿಸಿಕ್ಸ್ ಅಭಿವೃದ್ಧಿಪಡಿಸಿದೆ.

ಸೂರ್ಯನ ಮೇಲ್ಮಯ ತಾಪ ಮಾನವು 6,000 ಡಿಗ್ರಿ ಸೆಲ್ಸಿಯಸ್ ಇದ್ದರೂ ತೇಜೋಮಂಡಲದ ತಾಪಮಾನವು 10 ಲಕ್ಷ ಡಿಗ್ರಿ ಸೆಲ್ಸಿಯಸ್ ವರೆಗೆ ತಲುಪಲು ಹೇಗೆ ಸಾಧ್ಯ ಎಂಬ ಪ್ರಶ್ನೆಗೆ ವಿಇಎಲ್ಸಿ ಉತ್ತರ ಕಂಡುಕೊಳ್ಳಲಿದೆ ಎಂದು ಇಸ್ರೋ ಹೇಳಿದೆ.

ಎಲ್1 ಬಿಂದುವಿನ ಕಕ್ಷೆಯಲ್ಲಿ ಅದಿತ್ಯ ಉಪಗ್ರಹವನ್ನು ಇರಿಸಲಾಗುವುದು. ಕಕ್ಷೆಯಲ್ಲೇ ಸುತ್ತುತ್ತಲೇ ಸೂರ್ಯನ ವಿದ್ಯಮಾನಗಳ ಮೇಲೆ ನಿಗಾ ಇರಿಸಲಿದೆ. ಈ ಉಪಗ್ರಹವನ್ನು ಯು.ಆರ್. ರಾವ್ ಉಪಗ್ರಹ ಕೇಂದ್ರ ಅಭಿವೃದ್ಧಿಪಡಿಸಿದ್ದು ಶ್ರೀಹರಿಕೋಟಾದ ಇಸ್ರೋ ಬಾಹ್ಯಾಕಾಶ ಕೇಂದ್ರಕ್ಕೆ ಈ ತಿಂಗಳ ಆರಂಭದಲ್ಲಿ ತರಲಾಗಿದೆ.

Tags: Aditya-L1Chandrayaan 3ISROಆದಿತ್ಯ-ಎಲ್‌1ಇಸ್ರೊಚಂದ್ರಯಾನ 3
Previous Post

ಬಿಜೆಪಿ ದೇಶವನ್ನು ಹಾಳು ಮಾಡುತ್ತಿದೆ: ಮಲ್ಲಿಕಾರ್ಜುನ ಖರ್ಗೆ

Next Post

ಹರಿಯಾಣ | ನೂಹ್‌ ಗಲಭೆ ಆರೋಪಿ ಬಿಟ್ಟು ಬಜರಂಗಿಗೆ ಜಾಮೀನು

Related Posts

ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ
ದೇಶ

ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ

by ಪ್ರತಿಧ್ವನಿ
April 10, 2026
0

ಪಟ್ನಾ, ಏ.10: ಪ್ರಧಾನಮಂತ್ರಿ  ನರೇಂದ್ರ ಮೋದಿ ಅವರನ್ನು ಹತ್ಯೆ ಮಾಡುವ ಸಂಚು ರೂಪಿಸಿದ್ದ ಆರೋಪದಡಿ ಬಿಹಾರ ಪೊಲೀಸರು ಮೂವರು ಯುವಕರನ್ನು ಬಂಧಿಸಿದ್ದಾರೆ. ಈ ಘಟನೆ ದೇಶದಾದ್ಯಂತ ಆತಂಕ...

Read moreDetails
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

April 9, 2026
Next Post
ಬಿಟ್ಟು ಬಜರಂಗಿ

ಹರಿಯಾಣ | ನೂಹ್‌ ಗಲಭೆ ಆರೋಪಿ ಬಿಟ್ಟು ಬಜರಂಗಿಗೆ ಜಾಮೀನು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada