• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಕೇರಳ | ಚರ್ಚ್ ಆಫ್ ಸೌತ್ ಇಂಡಿಯಾದ ಬಿಷಪ್ ಧರ್ಮರಾಜ್ ರಸಾಲಂ ಬಂಧನ!

ಪ್ರತಿಧ್ವನಿ by ಪ್ರತಿಧ್ವನಿ
July 26, 2022
in ದೇಶ
0
ಕೇರಳ | ಚರ್ಚ್ ಆಫ್ ಸೌತ್ ಇಂಡಿಯಾದ ಬಿಷಪ್ ಧರ್ಮರಾಜ್ ರಸಾಲಂ ಬಂಧನ!
Share on WhatsAppShare on FacebookShare on Telegram

ADVERTISEMENT

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಿರುವನಂತಪುರಂನಲ್ಲಿರುವ ಚರ್ಚ್ ಆಫ್ ಸೌತ್ ಇಂಡಿಯಾದ (ಸಿಎಸ್‌ಐ) ಬಹು ಆವರಣಗಳ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಒಂದು ದಿನದ ನಂತರ, ಸಿಎಸ್‌ಐ ದಕ್ಷಿಣ ಕೇರಳ ಬಿಷಪ್ ಧರ್ಮರಾಜ್ ರಸಾಲಂ ಅವರನ್ನು ಮಂಗಳವಾರ ತಿರುವನಂತಪುರಂ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ.

ಚರ್ಚ್ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಯುಕೆಗೆ ತೆರಳಬೇಕಿದ್ದ ಬಿಷಪ್ ಅವರನ್ನು ಇಡಿ ಆದೇಶದ ಮೇರೆಗೆ ಎಮಿಗ್ರೇಷನ್ ಅಧಿಕಾರಿಗಳು ಬಂಧಿಸಿದ್ದಾರೆ. ತನಿಖೆಯ ಭಾಗವಾಗಿ ಇಡಿ ಅಧಿಕಾರಿಗಳ ಮುಂದೆ ಹಾಜರಾಗುವಂತೆ ಬಿಷಪ್ ರಸಾಲಂ ಅವರನ್ನು ಕೇಳಲಾಯಿತು.

ಕರಕೋಣಂನ ಚರ್ಚ್ ನಡೆಸುತ್ತಿರುವ ಡಾ ಸೋಮರ್‌ವೆಲ್ ಸ್ಮಾರಕ ಸಿಎಸ್‌ಐ ವೈದ್ಯಕೀಯ ಕಾಲೇಜು ಎಂಬಿಬಿಎಸ್ ಪ್ರವೇಶಕ್ಕಾಗಿ ಕ್ಯಾಪಿಟೇಶನ್ ಶುಲ್ಕವನ್ನು ಸ್ವೀಕರಿಸಿದೆ ಮತ್ತು ಇದರಲ್ಲಿ ಕಪ್ಪುಹಣ ಸೇರಿದೆ ಎಂದು ಇಡಿ ತನಿಖೆ ನಡೆಸುತ್ತಿದೆ.

2014 ರಲ್ಲಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ವೈದ್ಯಕೀಯ ಕಾಲೇಜು ನಿರ್ದೇಶಕ ಡಾ ಬೆನೆಟ್ ಅಬ್ರಹಾಂ ಮತ್ತು CSI ಚರ್ಚ್ ಕಾರ್ಯದರ್ಶಿ ಪ್ರವೀಣ್ ಅವರ ನಿವಾಸಗಳ ಮೇಲೆ ದಾಳಿ ನಡೆಸಲಾಗಿದೆ.

ಈ ಹಿಂದೆ, ವಿದ್ಯಾರ್ಥಿಗಳಿಂದ ಸಂಗ್ರಹಿಸಲಾದ ಕ್ಯಾಪಿಟೇಶನ್ ಶುಲ್ಕವನ್ನು ಯಾವುದೇ ರಸೀದಿ ಅಥವಾ ಬಿಲ್‌ಗಳಿಲ್ಲದೆ ಪ್ರತ್ಯೇಕ ಖಾತೆಯಲ್ಲಿ ಇರಿಸಲಾಗಿದೆ ಎಂಬ ಆರೋಪವನ್ನು ಚರ್ಚ್ ಎದುರಿಸಿತ್ತು. 2018 ರಲ್ಲಿ 11 ವಿದ್ಯಾರ್ಥಿಗಳು ನಕಲಿ ಸಮುದಾಯ ಪ್ರಮಾಣಪತ್ರಗಳನ್ನು ತಯಾರಿಸಿದ ನಂತರ ಕಾಲೇಜಿನ ಪ್ರವೇಶ ಪ್ರಕ್ರಿಯೆ ವಿವಾದದಲ್ಲಿ ಸಿಲುಕಿತ್ತು.

ಕಳೆದ ವರ್ಷ, ಕ್ಯಾಪಿಟೇಶನ್ ಶುಲ್ಕವನ್ನು ಸಂಗ್ರಹಿಸಿದ ವಿದ್ಯಾರ್ಥಿಗಳಿಗೆ ಕಾಲೇಜು ಪ್ರವೇಶ ನೀಡಲಿಲ್ಲ ಎಂಬ ಆರೋಪದ ಬಗ್ಗೆ ಕೇರಳ ಪೊಲೀಸ್ ಕ್ರೈಂ ಬ್ರಾಂಚ ತನಿಖೆ ನಡೆಸಿತ್ತು. ಆಪಾದಿತ ಅಪರಾಧಕ್ಕೆ ಸಾಕ್ಷ್ಯಾಧಾರಗಳು ಸಿಗಲಿಲ್ಲ ಎಂದು ಕ್ರೈಂ ಬ್ರಾಂಚ್ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದರೂ, ಈ ವರ್ಷದ ಆರಂಭದಲ್ಲಿ ನ್ಯಾಯಾಲಯವು ತನಿಖಾ ವರದಿಯನ್ನು ತಿರಸ್ಕರಿಸಿತ್ತು.

ನ್ಯಾಯಾಲಯವು ಬಿಷಪ್ ಅವರನ್ನು ದೋಷಮುಕ್ತಗೊಳಿಸಿದೆ ಮತ್ತು ಇಡಿ ದಾಳಿಯಿಂದ ಅವರ ವಿರುದ್ಧ ಯಾವುದೇ ದೋಷಾರೋಪಣೆ ಕಂಡುಬಂದಿಲ್ಲ ಎಂದು ಚರ್ಚ್ ವಕ್ತಾರ ಜಯರಾಜ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

Tags: BJPCongress Partyಕೋವಿಡ್-19ನರೇಂದ್ರ ಮೋದಿಬಿಜೆಪಿ
Previous Post

ರಾಹುಲ್, ಪ್ರಿಯಾಂಕ ಜೊತೆ ಇಡಿ ಕಚೇರಿಗೆ ಬಂದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ!

Next Post

ಮಗಳು, ಅಳಿಯನನ್ನು ಮಚ್ಚಿನಿಂದ ಕೊಚ್ಚಿ ಕೊಂದ ತಂದೆ!

Related Posts

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :
Top Story

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

by ಪ್ರತಿಧ್ವನಿ
May 27, 2026
0

ಬೆಂಗಳೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಇದಕ್ಕೆ ಸಂಬಂಧಿಸಿದ ಪೂರಕ ಬೆಳವಣಿಗೆಗಳು ಮುಂದುವರೆದಿವೆ. ಹೈಕಮಾಂಡ್‌ ನಾಯಕರೊಂದಿಗಿನ ಸಭೆಯ ಬಳಿಕ ಬೆಂಗಳೂರಿಗೆ ಆಗಮಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ...

Read moreDetails
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

May 27, 2026
BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

May 26, 2026
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

May 26, 2026
“ಸರ್ಕಾರದಲ್ಲಿ ‘ಕುರ್ಚಿ’ಗಾಗಿ ಕಚ್ಚಾಟ, ದೆಹಲಿ ‘ಹೈಕಮಾಂಡ್’ ಮುಂದೆ ಸಾಷ್ಟಾಂಗ ನಮಸ್ಕಾರ!”

“ಸರ್ಕಾರದಲ್ಲಿ ‘ಕುರ್ಚಿ’ಗಾಗಿ ಕಚ್ಚಾಟ, ದೆಹಲಿ ‘ಹೈಕಮಾಂಡ್’ ಮುಂದೆ ಸಾಷ್ಟಾಂಗ ನಮಸ್ಕಾರ!”

May 26, 2026
Next Post
ಆಂಧ್ರಪ್ರದೇಶ ಕೆಮಿಕಲ್‌ ಫ್ಯಾಕ್ಟರಿ ಸ್ಫೋಟ: 6 ಕಾರ್ಮಿಕರು ಬಲಿ

ಮಗಳು, ಅಳಿಯನನ್ನು ಮಚ್ಚಿನಿಂದ ಕೊಚ್ಚಿ ಕೊಂದ ತಂದೆ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada