ಮಧ್ಯಪ್ರದೇಶದ ರಾಜಧಾನಿ ಇಂದೋರ್ನ ಎಂಜಿಎಂ ವೈದ್ಯಕೀಯ ಕಾಲೇಜೊಂದರಲ್ಲಿ ಹಲವಾರು ಸೀನಿಯರ್ ವಿದ್ಯಾರ್ಥಿಗಳು ಜೂನಿಯರ್ಗಳನ್ನು ರ ್ಯಾಗಿಂಗ್ ಪ್ರಕರಣ ಮಾಸುವ ಮುನ್ನವೇ ರತ್ಲಾಮ್ ಜಿಲ್ಲೆಯ ಸರ್ಕಾರಿ ಮೆಡಿಕಲ್ ಕಾಲೇಜೊಂದರಲ್ಲಿ ಮತ್ತೊಂದು ಪ್ರಕರಣ ದಾಖಲಾಗಿದೆ.
ಕಾಲೇಜಿನ ಗೋಡೆಯೊಂದರ ಮುಂಭಾಗ ಜೂನಿಯರ್ ವಿದ್ಯಾರ್ಥಿಗಳನ್ನು ಕಪಾಳಮೋಕ್ಷ ಮಾಡಿ ಹಿರಿಯ ವಿದ್ಯಾರ್ಥಿಗಳು ನಿಂದಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇದನ್ನು ತಡೆಯಲು ಯತ್ನಿಸಿದ ಹಾಸ್ಟೆಲ್ ವಾರ್ಡನ್ ಜೊತೆ ವಿದ್ಯಾರ್ಥಿಗಳು ಅಸಭ್ಯವಾಗಿ ವರ್ತಿಸುತ್ತಿರುವುದು ಕಂಡು ಬರುತ್ತದೆ.
ಈ ಬಗ್ಗೆ ಕಾಲೇಜು ಆಡಳಿತ ಮಂಡಳಿ ದೂರು ದಾಖಲಿಸಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮಧ್ಯ ಸೇವಿಸಿದ ವಿದ್ಯಾರ್ಥಿಗಳು ಪ್ರಶ್ನಿಸಿದ ವಾರ್ಡನ್ ಮೇಲೆ ಮಧ್ಯದ ಬಾಟಲಿ ಎಸೆದಿದ್ದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.
ಈ ಬಗ್ಗೆ ಮಾತನಾಡಿರುವ ಕಾಲೇಜಿನ ವಿದ್ಯಾರ್ಥಿಯೊಬ್ಬರು ಇದು ಆಗಿಂದಾಗೆ ನಡೆಯುತ್ತಿರುತ್ತದೆ ನಾವು ದೂರನ್ನು ಸಲ್ಲಿಸಿದ್ದರು ಸಹ ಇಲ್ಲಿಯವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ವಿದ್ಯಾರ್ಥಿ ದೂರಿದ್ದಾರೆ.