• Home
  • About Us
  • ಕರ್ನಾಟಕ
Monday, October 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಬಂಡವಾಳ ಹೂಡಿಕೆದಾರರ ಸಮಾವೇಶ ಬಳಿಕ 10 ಲಕ್ಷ ಉದ್ಯೋಗ ಸೃಷ್ಟಿ – ಸಚಿವ ಮುರುಗೇಶ್ ನಿರಾಣಿ

Any Mind by Any Mind
October 1, 2021
in ಕರ್ನಾಟಕ
0
ಬಂಡವಾಳ ಹೂಡಿಕೆದಾರರ ಸಮಾವೇಶ ಬಳಿಕ 10 ಲಕ್ಷ ಉದ್ಯೋಗ ಸೃಷ್ಟಿ – ಸಚಿವ ಮುರುಗೇಶ್ ನಿರಾಣಿ
Share on WhatsAppShare on FacebookShare on Telegram
ADVERTISEMENT

ಮುಂದಿನ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ 10 ಲಕ್ಷ ಉದ್ಯೋಗ ಸೃಷ್ಟಿಯಾಗಲಿದೆ ಎಂದು *ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿಯವರು  ಶುಕ್ರವಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಉದ್ಯೋಗ ಸೃಷ್ಟಿ ಹಾಗೂ ಬಂಡವಾಳ ಹೂಡಿಕೆ ಮತ್ತು ಕೈಗಾರಿಕೆಗಳ ಪುನಶ್ಚೇತನ ಗುರಿಯೊಂದಿಗೆ 2022ರ ನವೆಂಬರ್ 2 ರಿಂದ 4ರವರೆಗೆ ಒಟ್ಟು ಮೂರು ದಿನಗಳ ಕಾಲ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ನಡೆಯಲಿದೆ. ಅಂದಾಜು 10 ಲಕ್ಷ ಉದ್ಯೋಗ ಸೃಷ್ಟಿ  ಮತ್ತು ದೇಶವಿದೇಶಗಳಿಂದ ಬರುವ ಹೆಸರಾಂತ ಕಂಪನಿಗಳಿಂದ ಬಂಡವಾಳ ಹೂಡಿಕೆಯಾಗುವ ಸಂಭವವಿದೆ ಎಂದು ಹೇಳಿದ್ದಾರೆ.

ಬಿಡದಿಯ ರೆಸಾರ್ಟ್‍ನಲ್ಲಿ ನಡೆದ ದಕ್ಷಿಣ ಭಾರತದ ಕಬ್ಬು ಮತ್ತು ಸಕ್ಕರೆ ತಂತ್ರಜ್ಞಾನ 50ನೇ ಸುವರ್ಣ ಮಹೋತ್ಸವ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪ್ರತಿಯೊಂದು ವಿಭಾಗದಲ್ಲೂ ಕೈಗಾರಿಕಾ ಪ್ರದೇಶದಲ್ಲೇ ಕಾರ್ಮಿಕರ  ಅನುಕೂಲಕ್ಕಗಿ  ಇಎಸ್‍ಐ ಆಸ್ಪತ್ರೆಗಳನ್ನು ತೆರೆಯಬೇಕೆಂಬ ಯೋಜನೆಯನ್ನು ರೂಪಿಸುತ್ತಿದ್ದೇವೆ‌. ಈಗಾಗಲೇ ಕಲಬುರ್ಗಿಯಲ್ಲಿ ಒಂದು ಆಸ್ಪತ್ರೆಯನ್ನು ನಿರ್ಮಿಸಲಾಗಿದೆ.  ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಹಭಾಗಿತ್ವದಲ್ಲಿ ಇದನ್ನು ಅನುಷ್ಠಾನಗೊಳಿಸುವುದಾಗಿ ತಿಳಿಸಿದ್ದಾರೆ.

ರಾಜ್ಯದಲ್ಲಿ ಕೈಗಾರಿಕಾ ಉದ್ದೇಶಗಳಿಗೆ ಬಳಸುತ್ತಿರುವ ಕೃಷಿ ಜಮೀನಿನ ಪ್ರಮಾಣ ಕಳೆದ 70 ವರ್ಷಗಳಿಂದ ಶೇ.0.48ನಷ್ಟಿದೆ. ಶೇ.1ರಷ್ಟನ್ನು ತಲುಪಬೇಕಾದರೆ ಇನ್ನು 10 ವರ್ಷಗಳು ಬೇಕಾಗುತ್ತದೆ ಎಂದು ಹೇಳಿದ್ದಾರೆ.

ಕೊಪ್ಪಳ, ರಾಯಚೂರು, ಧಾರವಾಡದಲ್ಲಿ ಕೈಗಾರಿಕೆಗಳ ಉದ್ದೇಶ ಕ್ಕಾಗಿ ಜಮೀನನ್ನು ಮೀಸಲಿಟ್ಟಿದ್ದೇವೆ. ಏಕಾಏಕಿ ಕೈಗಾರಿಕೆಗಳನ್ನು ಸ್ಥಾಪನೆ ಮಾಡಲು ಬಂದರೆ ತಕ್ಷಣವೇ ಜಮೀನು ನೀಡಲು ಸಾಧ್ಯವಾಗುವುದಿಲ್ಲ. ಹೀಗಾಗಿಯೇ ಲ್ಯಾಂಡ್ ಬ್ಯಾಂಕ್ ಮೂಲಕ ಜಮೀನನ್ನು ಮೀಸಲಿಡುವ ಪ್ರಕ್ರಿಯೆ ನಡೆದಿದೆ ಎಂದು ಮಾಹಿತಿ ನೀಡಿದ್ದಾರೆ.

ಕಳೆದ ತ್ರೈಮಾಸಿಕ ಅವಧಿಯಲ್ಲಿ ವಿದೇಶಿ ನೇರ ಹೂಡಿಕೆದಾರರ ಪೈಕಿ ದೇಶದಲ್ಲಿ ಕರ್ನಾಟಕ ಮೊದಲ ಸ್ಥಾನದಲ್ಲಿದೆ.  ಮುಂದಿನ ದಿನಗಳಲ್ಲಿ ನಾವು ಕರ್ನಾಟಕವನ್ನು ಕೈಗಾರಿಕೆಯಲ್ಲಿ ಮೊದಲ ಸ್ಥಾನಕ್ಕೆ ಕೊಂಡೊಯ್ಯುವ ಗುರಿ  ಹಾಕಿಕೊಳ್ಳಲಾಗಿದೆ ಎಂದು ವಿವರಣೆ ನೀಡಿದ್ದಾರೆ.

 ಎಥಿನಾಲ್ ಬಳಸಲು ಸಚಿವರ ಕರೆ :

ಇದಕ್ಕೂ ಮುನ್ನ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ನಿರಾಣಿ, ಪ್ರಸಕ್ತ ಸಾಲಿನಲ್ಲಿ   ಎಥಿನಾಲ್ ಬಳಕೆ ಪ್ರಮಾಣದಲ್ಲಿ ಬಳಕೆಯಾಗುತ್ತಿರುವುದರಿಂದ ಸಕ್ಕರೆ ಪ್ರಮಾಣದ ಉತ್ಪಾದನೆಯು  ನಿರೀಕ್ಷೆಗೂ ಮೀರಿದ ಗುರಿಯನ್ನು ಸಾಧಿಸಲು ಸಾದ್ಯವಾಗಿದೆ ಎಂದು ಹೇಳಿದ್ದಾರೆ.

ಪ್ರಸಕ್ತ ಸಾಲಿನಲ್ಲಿ ಸಕ್ಕರೆ ಕಾರ್ಖಾನೆಗಳು ಸುಮಾರು 309 ಲಕ್ಷ ಟನ್ ಸಕ್ಕರೆಯನ್ನು ಉತ್ಪಾದಿಸಿದ್ದು ಇದು 35 ಲಕ್ಷ ಟನ್ ಅಧಿಕವಾಗಿದೆ. ಕಳೆದ ವರ್ಷ  274 ಲಕ್ಷ ಟನ್ ಸಕ್ಕರೆ ಉತ್ಪಾದಿಸಲಾಗಿತ್ತು. ರಫ್ತು ಪ್ರಮಾಣ ಮತ್ತು ಎಥೆನಾಲ್ ಮಿಶ್ರಣದಿಂದಾಗಿ 2020-21 ದೇಶೀಯ ಸಕ್ಕರೆ ಉದ್ಯಮ  ಶುಕ್ರದೆಸೆಗೆ ತಿರುಗಿದೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.

ಸಕ್ಕರೆ ಕಾರ್ಖಾನೆಗಳು ಇದುವರೆಗೆ 58 ಲಕ್ಷ ಟನ್‍ಗಳಿಗೆ ರಫ್ತು ಒಪ್ಪಂದಗಳಿಗೆ ಸಹಿ ಹಾಕಿದ್ದು, ಪ್ರಸ್ತುತ ಸಕ್ಕರೆ ಸಾಲಿನಲ್ಲಿ ಎಂಇಎಕ್ಯೂಯಡಿ ಸರ್ಕಾರ ನಿಗದಿಪಡಿಸಿದ 60 ಲಕ್ಷ ಟನ್‍ಗಳ ಗುರಿಯನ್ನು ಹೊಂದಿದೆ. ಬ್ರೆಜಿಲ್ ಮತ್ತು ಥೈಲ್ಯಾಂಡ್‍ನಲ್ಲಿ ಸಕ್ಕರೆ ಉತ್ಪಾದನೆಯಲ್ಲಿ ಕುಸಿತವಾಗಿರುವುದರಿಂದ ದೇಶವಿದೇಶದಲ್ಲಿ ಹೆಚ್ಚಿನ ಬೇಡಿಕೆ ಬಂದಿದೆ ಎಂದು ತಿಳಿಸಿದ್ದಾರೆ.

ಮಾಲಿನ್ಯ ಮತ್ತು ಕಚ್ಚಾ ತೈಲದ ಆಮದನ್ನು ಕಡಿಮೆ ಮಾಡಲು ಎಥೆನಾಲ್ ಮಿಶ್ರಿತ ಇಂಧನವನ್ನು ಬಳಸುವ ಸರ್ಕಾರದ ಕ್ರಮವನ್ನು ವಿವರಿಸಿದ ಸಚಿವರು, ಸಕ್ಕರೆ ಕಾರ್ಖಾನೆಗಳು ಮತ್ತು ರೈತರು ಎಥೆನಾಲ್ ಮಿಶ್ರಣದಿಂದ ಅಪಾರ ಲಾಭ ಪಡೆಯಬಹುದು ಎಂದು ಸಲಹೆ ನೀಡಿದ್ದಾರೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಎಥೆನಾಲ್ ಮಿಶ್ರಣ ಕಾರ್ಯಕ್ರಮವು ಎಥೆನಾಲ್ ಅನ್ನು ಸ್ವದೇಶಿ ಇಂಧನವಾಗಿ ಉತ್ತೇಜಿಸುವ ಮತ್ತು ದೇಶವನ್ನು ಆತ್ಮನಿರ್ಭರ ಭಾರತವನ್ನಾಗಿ ಮಾಡುವ ಗುರಿಯನ್ನು ಹೊಂದಿದೆ ಎಂದು ಈ ವೇಳೆ ಹೇಳಿದ್ದಾರೆ.

2019-20ರ ಎಥೆನಾಲ್ ಪೂರೈಕೆ ವರ್ಷದಲ್ಲಿ ದೇಶವು ಶೇ.5ರಷ್ಟು ಎಥೆನಾಲ್ ಮಿಶ್ರಣವನ್ನು ಸಾಧಿಸಿತು ಮತ್ತು ಎಥೆನಾಲ್ ಉತ್ಪಾದಿಸಲು 8 ಲಕ್ಷ ಟನ್ ಸಕ್ಕರೆಯನ್ನು ಬಳಸಲಾಯಿತು. ಇಎಸ್‍ವೈ 2020-21 ರಲ್ಲಿ ಎಥೆನಾಲ್ ಉತ್ಪಾದನೆಗೆ ಸಕ್ಕರೆ ಉದ್ಯಮವು 20 ಲಕ್ಷ ಟನ್‍ಗಳಿಗಿಂತ ಹೆಚ್ಚು ಬಳಸಲು ಬದ್ಧವಾಗಿದೆ. ಅಂತ್ಯದ ವೇಳೆಗೆ ಶೇ.8.5ನಷ್ಟು ಎಥೆನಾಲ್ ಮಿಶ್ರಣ ಗುರಿಯನ್ನು ಸಾಧಿಸುವ ವಿಶ್ವಾಸ ನಮಗಿದೆ. ಮತ್ತು 2022 ರ ವೇಳೆಗೆ ಶೇ.10 ಎಥೆನಾಲ್ ಮತ್ತು 2025 ರ ವೇಳೆಗೆ 20ರಷ್ಟಾಗುತ್ತದೆ ಎಂದು ಅಂಕಿಅಂಶಗಳ ವಿವರ ಈ ವೇಳೆ ನೀಡಿದ್ದಾರೆ.

ಎಥೆನಾಲ್ ಉತ್ಪಾದನೆಯು ರೈತರಿಗೆ ಮತ್ತು ಸಕ್ಕರೆ ಕಾರ್ಖಾನೆಗಳಿಗೆ ಹೇಗೆ ಪ್ರಯೋಜನವನ್ನು ನೀಡುತ್ತದೆ ಎಂಬುದನ್ನು ಸ್ಪಷ್ಟಪಡಿಸುತ್ತಾ ನಿರಾಣಿ ಇದನ್ನು ಲಾಭದಾಯಕ ಪರಿಸ್ಥಿತಿ ಎಂದು ಕರೆದರು. ಹೆಚ್ಚು ಎಥೆನಾಲ್ ಉತ್ಪಾದನೆಗಾಗಿ ಸಕ್ಕರೆಯನ್ನು ಬೇರೆಡೆಗೆ ತಿರುಗಿಸುವುದು ಸಕ್ಕರೆ ದಾಸ್ತಾನುಗಳನ್ನು ಕಡಿಮೆ ಮಾಡಲು ಮತ್ತು ನಗದು ಹರಿವನ್ನು ಉತ್ಪಾದಿಸಲು ಸಹಾಯ ಮಾಡುತ್ತದೆ ಮತ್ತು ಇದು ಕಬ್ಬು ಬೆಳೆಗಾರರಿಗೆ ಸಮಯಕ್ಕೆ ಸರಿಯಾಗಿ ಬಾಕಿ ಪಾವತಿಸಲು ಮತ್ತು ಇರುವ ಬಾಕಿಗಳನ್ನು ತೆರವುಗೊಳಿಸಲು ಮತ್ತು ಬ್ಯಾಂಕುಗಳಿಗೆ ಸಾಲ ಮರುಪಾವತಿಯಂತಹ ಇತರ ವೆಚ್ಚಗಳನ್ನು ಪೂರೈಸಲು ಅಗತ್ಯವಾಗುತ್ತದೆ ಎಂದು ಸಚಿವ ನಿರಾಣಿ ಹೇಳಿದ್ದಾರೆ.

ಸಕ್ಕರೆ ಕಾರ್ಖಾನೆಗಳು ಮತ್ತು ರೈತರು ಎಥೆನಾಲ್ ಮಿಶ್ರಣದಿಂದ ಅಪಾರ ಲಾಭ ಪಡೆಯಬಹುದು - ಸಚಿವ Murugesh Nirani
Tags: Basavaraj BommaiBJPForeign InvestorsinvestmentsinvestorsKarnatakaKarnataka Governmentmurugesh niraniಬಿಜೆಪಿ
Previous Post

Supriya Shrinate Media Conference, AICC National Spokesperson, KPCC Office

Next Post

ಸಕ್ಕರೆ ಕಾರ್ಖಾನೆಗಳು ಮತ್ತು ರೈತರು ಎಥೆನಾಲ್ ಮಿಶ್ರಣದಿಂದ ಅಪಾರ ಲಾಭ ಪಡೆಯಬಹುದು – ಸಚಿವ ಮುರುಗೇಶ್‌ ನಿರಾಣಿ

Related Posts

Top Story

HD Devegowda: ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಯಲ್ಲಿ ಬುಕ್ ಓದುತ್ತ ಕುಳಿತ ದೇವೇಗೌಡ್ರು..!!

by ಪ್ರತಿಧ್ವನಿ
October 13, 2025
0

ಜ್ವರ ಹಾಗೂ ಯೂರಿನ್ ಸೋಂಕಿನಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಪ್ರಧಾನಿ ಹೆಚ್​ ಡಿ ದೇವೇಗೌಡ್ರು ಚೇತರಿಸಿಕೊಂಡಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಮುಂದಿನ ಕೆಲವು ದಿನಗಳ...

Read moreDetails

Priyank Kharge: ಉತ್ತಮ ಗುಣಮಟ್ಟದ ನೀರು ಬಳಕೆ ಹಾಗೂ ಸಂಶೋಧನಗೆ ಉತ್ಕೃಷ್ಟತಾ ಕೇಂದ್ರ ಸ್ಥಾಪನೆ..!!

October 13, 2025

Sunil Kumar: ಇಂದಿರಾ ಗಾಂಧಿಗೂ ಹೆದರಿಲ್ಲ, ನೆಹರೂ ಮುಂದೆನೂ ಮಂಡಿಯೂರಿಲ್ಲ, ಪ್ರಿಯಾಂಕ್ ಖರ್ಗೆ ಯಾರು?

October 13, 2025

Siddaramaiah: ತಮಿಳುನಾಡಿನಲ್ಲಿ ಕೈಗೊಂಡಂತೆ ಆರ್‌ಎಸ್‌ಎಸ್‌ ವಿರುದ್ಧ ರಾಜ್ಯದಲ್ಲಿ ಕ್ರಮ..!!

October 13, 2025

ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾದ ಮಾಜಿ ಐಎಎಸ್‌ ಅಧಿಕಾರಿ ಕಣ್ಣನ್‌ ಗೋಪಿನಾಥನ್..

October 13, 2025
Next Post
ಸಕ್ಕರೆ ಕಾರ್ಖಾನೆಗಳು ಮತ್ತು ರೈತರು ಎಥೆನಾಲ್ ಮಿಶ್ರಣದಿಂದ ಅಪಾರ ಲಾಭ ಪಡೆಯಬಹುದು – ಸಚಿವ ಮುರುಗೇಶ್‌ ನಿರಾಣಿ

ಸಕ್ಕರೆ ಕಾರ್ಖಾನೆಗಳು ಮತ್ತು ರೈತರು ಎಥೆನಾಲ್ ಮಿಶ್ರಣದಿಂದ ಅಪಾರ ಲಾಭ ಪಡೆಯಬಹುದು - ಸಚಿವ ಮುರುಗೇಶ್‌ ನಿರಾಣಿ

Please login to join discussion

Recent News

Top Story

HD Devegowda: ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಯಲ್ಲಿ ಬುಕ್ ಓದುತ್ತ ಕುಳಿತ ದೇವೇಗೌಡ್ರು..!!

by ಪ್ರತಿಧ್ವನಿ
October 13, 2025
Top Story

Priyank Kharge: ಉತ್ತಮ ಗುಣಮಟ್ಟದ ನೀರು ಬಳಕೆ ಹಾಗೂ ಸಂಶೋಧನಗೆ ಉತ್ಕೃಷ್ಟತಾ ಕೇಂದ್ರ ಸ್ಥಾಪನೆ..!!

by ಪ್ರತಿಧ್ವನಿ
October 13, 2025
Top Story

Sunil Kumar: ಇಂದಿರಾ ಗಾಂಧಿಗೂ ಹೆದರಿಲ್ಲ, ನೆಹರೂ ಮುಂದೆನೂ ಮಂಡಿಯೂರಿಲ್ಲ, ಪ್ರಿಯಾಂಕ್ ಖರ್ಗೆ ಯಾರು?

by ಪ್ರತಿಧ್ವನಿ
October 13, 2025
Top Story

Siddaramaiah: ತಮಿಳುನಾಡಿನಲ್ಲಿ ಕೈಗೊಂಡಂತೆ ಆರ್‌ಎಸ್‌ಎಸ್‌ ವಿರುದ್ಧ ರಾಜ್ಯದಲ್ಲಿ ಕ್ರಮ..!!

by ಪ್ರತಿಧ್ವನಿ
October 13, 2025
Top Story

ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾದ ಮಾಜಿ ಐಎಎಸ್‌ ಅಧಿಕಾರಿ ಕಣ್ಣನ್‌ ಗೋಪಿನಾಥನ್..

by ಪ್ರತಿಧ್ವನಿ
October 13, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

HD Devegowda: ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಯಲ್ಲಿ ಬುಕ್ ಓದುತ್ತ ಕುಳಿತ ದೇವೇಗೌಡ್ರು..!!

October 13, 2025

Priyank Kharge: ಉತ್ತಮ ಗುಣಮಟ್ಟದ ನೀರು ಬಳಕೆ ಹಾಗೂ ಸಂಶೋಧನಗೆ ಉತ್ಕೃಷ್ಟತಾ ಕೇಂದ್ರ ಸ್ಥಾಪನೆ..!!

October 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada