ಹುಬ್ಬಳ್ಳಿ : ಬಿಜೆಪಿಯಿಂದ ಟಿಕೆಟ್ ಸಿಗದೇ ಆಕ್ರೋಶಕ್ಕೆ ಒಳಗಾಗಿದ್ದ ಮಾಜಿ ಸಿಎಂ ಜಗದೀಶ ಶೆಟ್ಟರ್ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಟಿಕೆಟ್ ಸಿಗದಿದ್ದರೆ ರಾಜಕೀಯ ನಿವೃತ್ತಿ ಘೋಷಿಸಬಹುದು ಎಂದು ಊಹಿಸಿದ್ದ ಬಿಜೆಪಿ ಶೆಟ್ಟರ್ ನಡೆಯಿಂ ಶಾಕ್ ಆಗಿದೆ. ಜಗದೀಶ್ ಶೆಟ್ಟರ್ ಟಿಕೆಟ್ ವಂಚಿತರಾದ ಬಳಿಕ ಲಿಂಗಾಯತ ಸಮುದಾಯ ಬಿಜೆಪಿ ಮೇಲೆ ಮುನಿಸಿಕೊಂಡಿದೆ.

ಈ ಡ್ಯಾಮೇಜ್ ಕಂಟ್ರೋಲ್ ಮಾಡೋಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಹುಬ್ಬಳ್ಳಿಗೆ ಎಂಟ್ರಿ ನೀಡ್ತಿದ್ದಾರೆ. ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರ್ಪಡೆ ಬಳಿಕ ಉತ್ತರ ಕರ್ನಾಟಕದಲ್ಲಿ ಬಿಜೆಪಿಗೆ ಬಹುದೊಡ್ಡ ಹೊಡೆತ ಬೀಳುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ನಡ್ಡಾ ರಾಜ್ಯಕ್ಕೆ ನಾಳೆ ಸಂಜೆ ಎಂಟ್ರಿ ನೀಡ್ತಿದ್ದಾರೆ.
ಎರಡು ದಿನಗಳ ಕಾಲ ಹುಬ್ಬಳ್ಳಿಯಲ್ಲಿಯೇ ನಡ್ಡಾ ವಾಸ್ತವ್ಯ ಹೂಡಲಿದ್ದು ಹುಬ್ಬಳ್ಳಿ – ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ನಡೆಯುದ 2 ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಶೆಟ್ಟರ್ ಸ್ವಕ್ಷೇತ್ರದಲ್ಲಿಯೇ ಜೆಪಿ ನಡ್ಡಾ ಬಿಜೆಪಿಯ ಶಕ್ತಿ ಪ್ರದರ್ಶನ ಮಾಡೋಕೆ ಮುಂದಾಗಿದ್ದಾರೆ. ಅಲ್ಲದೇ ಪಕ್ಷ ತೊರೆದಿರುವ ಶೆಟ್ಟರ್ಗೆ ಚುನಾವಣೆಯಲ್ಲಿ ಯಾರೂ ಕೈ ಜೋಡಿಸಬಾರದೆಂಬ ಎಚ್ಚರಿಕೆ ನೀಡೋಕೆ ನಡ್ಡಾ ಪಕ್ಷದ ಪದಾಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ ಎನ್ನಲಾಗಿದೆ.






