ಬೆಂಗಳೂರು : ಐದು ವರ್ಷ ಸಿದ್ದರಾಮಯ್ಯ ಎಂಬ ಹೇಳಿಕೆ ನೀಡಿದ್ದ ಸಚಿವ ಎಂಬಿ ಪಾಟೀಲ್ ಇದೀಗ ಉಲ್ಟಾ ಹೊಡೆದಿದ್ದಾರೆ. ಬೆಂಗಳೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು, ಪಕ್ಷದ ವರಿಷ್ಠರು ನನಗೆ ಹೇಳಿದ್ದನ್ನು ನಾನು ಹೇಳಿದ್ದೇನೆ ಎಂದು ಹೇಳುವ ಮೂಲಕ ಯು ಟರ್ನ್ ಹೊಡೆದಿದ್ದಾರೆ.

ಡಿ.ಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರಿಯುತ್ತಾರೆ ಎಂದು ಹೇಳಿದ್ದರು. ಅದನ್ನೇ ನಾನು ಹೇಳಿದ್ದೇನೆ .ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಹೇಳಿದ್ದನ್ನು ನಾನು ಹೇಳಿದ್ದೇನೆ ಎಂದಿದ್ದಾರೆ.
ಅಧಿಕಾರ ಹಂಚಿಕೆ ವಿಚಾರವಾಗಿ ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ನಡುವೆ ಸಂಧಾನವಾಗಿದ್ಯಾ ಎಂಬ ವಿಚಾರವಾಗಿ ನನಗೆ ಮಾಹಿತಿ ಇಲ್ಲ ಎಂದಿದ್ದಾರೆ.

