ಹೈಕೋರ್ಟ್‌ನಲ್ಲಿ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಡೆದಿದೆ. ಹೈಕೋರ್ಟ್‌ನಲ್ಲಿ ರೆಗ್ಯೂಲರ್ ಬೇಲ್ ಅರ್ಜಿ ವಿಚಾರಣೆ ನಡೆದಿದ್ದು ನವೆಂಬರ್ 26ಕ್ಕೆ ಜಾಮೀನು ಅರ್ಜಿ ಮುಂದೂಡಿಕೆ ಆಗಿದೆ. ಹೈಕೋರ್ಟ್‌ನಲ್ಲಿ ಸರ್ಕಾರದ ಪರವಾಗಿ ಎಸ್‌ಪಿಪಿ ಪ್ರಸನ್ನಕುಮಾರ್ ವಾದ ಮಂಡಿಸಿದ್ದು, ಹೆಚ್ಚುವರಿ ಚಾರ್ಜ್‌ಶೀಟ್ ವಿಚಾರಣಾ ಕೋರ್ಟ್‌ಗೆ ಸಲ್ಲಿಸಿದ್ದೇವೆ. ಅರ್ಹತೆ ಮೇಲೆ ಮುಂದಿನ ದಿನಾಂಕದಂದು ವಿಚಾರಣೆ ನಡೆಸ್ಬೇಕು. ವೈದ್ಯಕೀಯ ವರದಿ ತಮಗೆ ನೀಡಿಲ್ಲವೆಂದು ಎಸ್‌ಪಿಪಿ ವಾದಿಸಿದ್ದಾರೆ.
ಇದೇ ವೇಳೆ ಕೋರ್ಟ್‌ಗೆ ಮತ್ತೊಂದು ವೈದ್ಯಕೀಯ ವರದಿ ಸಲ್ಲಿಸಿದ್ದಾರೆ ದರ್ಶನ್ ಪರ ವಕೀಲ ಸಿವಿ ನಾಗೇಶ್. ವೈದ್ಯಕೀಯ ವರದಿ ಪರಿಶೀಲಿಸಿ ಎಂದು ಎಸ್‌ಪಿಸಿಗೆ ಜಡ್ಜ್ ಸೂಚನೆ ನೀಡಿದ್ದಾರೆ. ದರ್ಶನ್ ಗೆ ಇನ್ನೂ ಶಸ್ತ್ರಚಿಕಿತ್ಸೆ ದಿನಾಂಕ ನಿಗದಿ ಮಾಡಿಲ್ಲ.. ಶಸ್ತ್ರಚಿಕಿತ್ಸೆಗೆ ನಾವು ತಯಾರಿಯನ್ನು ನಡೆಸುತ್ತಿದ್ದೇವೆ. He is being prepared for surgery ಎಂದು ಉಲ್ಲೇಖ..
ರೇಣುಕಾಸ್ವಾಮಿ ಕೊಲೆ ನಡೆದ ಸ್ಥಳದಲ್ಲಿ ನಟ ದರ್ಶನ್ ಇರೋ ಮತ್ತೆರಡು ಫೋಟೋಗಳನ್ನು ರಿಟ್ರೀವ್ ಮಾಡಲಾಗಿದೆ ಎನ್ನಲಾಗಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಅಡಿಷನ್ ಚಾರ್ಜ್ ಶೀಟ್ ಸಿದ್ದವಾಗಿದ್ದು, ಸಾವಿರಕ್ಕೂ ಹೆಚ್ಚು ಪುಟಗಳ ಹೆಚ್ಚುವರಿ ಚಾರ್ಜ್ ಶೀಟ್‌ನಲ್ಲಿ ಎರಡು ಫೋಟೋಗಳು ಇವೆ ಎನ್ನಲಾಗಿದೆ.
ಮೈಸೂರಿನಲ್ಲಿ ನಟ ದರ್ಶನ್ ಜಾಮೀನು ಅರ್ಜಿ ವಿಚಾರವಾಗಿ ಮಾತನಾಡಿರುವ ಗೃಹಸಚಿವ ಜಿ.ಪರಮೇಶ್ವರ್, ನಟ ದರ್ಶನ್ ಸದ್ಯ ಆಸ್ಪತ್ರೆಯಲ್ಲಿ ಟ್ರೀಟ್‌ಮೆಂಟ್ ಪಡೆಯುತ್ತಿದ್ದಾರೆ. ಚಿಕಿತ್ಸೆ ಮುಗಿದ ಬಳಿಕ ವಾಪಸ್ ಜೈಲಿಗೆ ಹೋಗಬೇಕಾಗುತ್ತದೆ. ಅವರು ಮುಂದುವರಿದು ಬೇಲ್ ಕೇಳಬಹುದು. ನಾವು ಕೊಡಬಾರದು ಅಂತ ಸುಪ್ರಿಂಕೋರ್ಟಿಗೆ ಅರ್ಜಿ ಹಾಕ್ತೀವಿ. ಪ್ರಕರಣ ಕುರಿತು ಮತ್ತಷ್ಟು ತನಿಖೆ ನಡೆಯುತ್ತಿದೆ. ತನಿಖೆ ಪೂರ್ಣವಾದ ಬಳಿಕ ಸಂಪೂರ್ಣ ಚಾರ್ಜ್ ಶೀಟ್ ಸಲ್ಲಿಕೆ ಆಗಲಿದೆ ಎಂದಿದ್ದಾರೆ.