ಬೆಂಗಳೂರು:ಮುಡಾ ಪ್ರಕರಣ ಸಂಬಂಧ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಹೈಕೋರ್ಟ್ ಅನುಮತಿ ನೀಡಿದ ಬೆನ್ನಲ್ಲೇ ಇದೀಗ ಸಿಎಂಗೆ ಮತ್ತೊಂದು ಸಂಕಷ್ಟ ಎದುರಾಗಿದೆ.ಅರ್ಕಾವತಿ ರೀಡೋ ಹಗರಣದ ಕುರಿತು ರಾಜ್ಯಪಾಲರು ಸರ್ಕಾರದಿಂದ ಮಾಹಿತಿ ಕೇಳಿದ್ದರು.ಈ ನಡುವೆ ಇಂದು ರಾಜಭವನದಲ್ಲಿ ಬಿಜೆಪಿ ಎಂಎಲ್ಸಿ ಸಿಟಿ ರವಿಯವರು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾಗಿದ್ದಾರೆ.
ಇದೇ ವೇಳೆ MLC ಸಿ.ಟಿ ರವಿ ಬಳಿ ಹೆಚ್ಚಿನ ಮಾಹಿತಿಯನ್ನು ಪಡೆದಿದ್ದಾರೆ.ಒಟ್ಟಿನಲ್ಲಿ ಮುಖ್ಯಮಂತ್ರಿಗಳಿಗೆ ಸಂಕಷ್ಟ ತಪ್ಪಿದಂತಿಲ್ಲ.ಈ ನಡುವೆ ಸಿಎಂ ಅವರು, ನಾನು ಯಾವುದೇ ತಪ್ಪು ಮಾಡಿಲ್ಲ. ಹೀಗಾಗಿ ನಾನ್ಯಾಕೆ ರಾಜೀನಾಮೆ ಕೊಡಬೇಕು ಎಂದು ಪ್ರಶ್ನಿಸುವ ಮೂಲಕ ಪ್ರತಿಪಕ್ಷಗಳಿಗೆ ತಿರುಗೇಟು ನೀಡಿದ್ದಾರೆ.