ಬಿಜೆಪಿ ಉಚ್ಛಾಟಿತ ನಾಯಕಿ ನೂಪುರ್ ಶರ್ಮ ಪ್ರವಾದಿಗಳ ವಿರುದ್ಧ ನೀಡಿದ ಅವಹೇಳನಕಾರಿ ಖಂಡಿಸಿ ಮಹಾರಾಷ್ಟ್ರದಲ್ಲಿ ವ್ಯಕ್ತಿಯೊಬ್ಬರ ಹತ್ಯೆ ಆಗಿದೆ.
ಇತ್ತೀಚೆಗೆ ರಾಜಸ್ಥಾನ ಉದಯಪುರದಲ್ಲಿ ಟೇಲರ್ ಅವರನ್ನು ಹತ್ಯೆ ಮಾಡಿದ ಘಟನೆ ಮಾಸುವ ಮುನ್ನವೇ ಮಹಾರಾಷ್ಟ್ರದಲ್ಲಿ ಈ ಘಟನೆ ನಡೆದಿದ್ದು, ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ ಐಎ) ತನಿಖೆ ಕೈಗೆತ್ತಿಕೊಂಡಿದೆ.
ಮಹಾರಾಷ್ಟ್ರದ ಅಮರಾವತಿಯಲ್ಲಿ 54 ವರ್ಷದ ಮೆಡಿಕಲ್ ಸ್ಟೋರ್ ಉದ್ಯೋಗಿ ಉಮೇಶ್ ಪ್ರಹ್ಲಾದ್ ರಾವ್ ಅವರನ್ನು ಇರಿದು ಹತ್ಯೆ ಮಾಡಲಾಗಿದೆ. ಉಮೇಶ್ ನೂಪುರ್ ಹೇಳಿಕೆ ಬೆಂಬಲಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದರು ಎನ್ನಲಾಗಿದೆ.

ಹತ್ಯೆ ಘಟನೆ ಬೆನ್ನಲ್ಲೇ ಸ್ಥಳೀಯ ಬಿಜೆಪಿ ಮುಖಂಡರು ಪೊಲೀಸರಿಗೆ ದೂರು ನೀಡಿದ್ದಾರೆ. ಆದರೆ ನೂಪುರ್ ಖಂಡಿಸಿ ಈ ಹತ್ಯೆ ನಡೆದಿಲ್ಲ ಎಂದು ಹೇಳಿದ್ದಾರೆ. ಪೊಲೀಸರು 6 ಮಂದಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, ೫ ಮಂದಿಯನ್ನು ಬಂಧಿಸಲಾಗಿದೆ.
ಉಮೇಶ್ ಪ್ರಹ್ಲಾದರಾವ್ ಅವರ ಹತ್ಯೆಯ ಬಗ್ಗೆ ಸ್ಥಳೀಯ ಬಿಜೆಪಿ ಮುಖಂಡರು ಪೊಲೀಸರಿಗೆ ಪತ್ರವನ್ನು ಬರೆದಿದ್ದು, “ಸೇಡು ತೀರಿಸಿಕೊಳ್ಳಲು ಮತ್ತು ಉದಾಹರಣೆ ನೀಡಲು” ಅವರನ್ನು ಕೊಲ್ಲಲಾಗಿದೆ ಎಂದು ಆರೋಪಿಸಿದ್ದಾರೆ.
ಈ ಕುರಿತು ದೃಢಪಡಿಸಿದ ಪೊಲೀಸರು, ಬಿಜೆಪಿ ನಾಯಕರಿಂದ ಪತ್ರವನ್ನು ಸ್ವೀಕರಿಸಿದ್ದೇವೆ ಮತ್ತು ಈ ಬಗ್ಗೆ ತನಿಖೆ ನಡೆಸುತ್ತಿದ್ದೇವೆ ಎಂದು ಹೇಳಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಾಗಿದ್ದು, ಆರು ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
” ಉಮೇಶ್ ಅವರು ಅಮರಾವತಿ ನಗರದಲ್ಲಿ ಮೆಡಿಕಲ್ ಸ್ಟೋರ್ ನಡೆಸುತ್ತಿದ್ದರು. ಅವರು ನೂಪುರ್ ಶರ್ಮಾ ಅವರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವು ವಾಟ್ಸಾಪ್ ಗುಂಪುಗಳಲ್ಲಿ ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ. ಅವರು ತಮ್ಮ ಗ್ರಾಹಕರು ಸೇರಿದಂತೆ ಕೆಲವು ಮುಸ್ಲಿಮರು ಸಹ ಸದಸ್ಯರಾಗಿರುವ ವಾಟ್ಸಾಪ್ ಗುಂಪಿನಲ್ಲಿ ಪೋಸ್ಟ್ ಅನ್ನು ತಪ್ಪಾಗಿ ಹಂಚಿಕೊಂಡಿದ್ದಾರೆ. ,” ಎಂದು ಸಿಟಿ ಕೊತ್ವಾಲಿ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದರು.
ಏತನ್ಮಧ್ಯೆ, ಮಹಾರಾಷ್ಟ್ರ ಎಟಿಎಸ್ ತಂಡವು ಈ ಬಗ್ಗೆ ತನಿಖೆ ನಡೆಸಲು ಅಮರಾವತಿಯಲ್ಲಿದೆ. ಪ್ರಕರಣದಲ್ಲಿ ಯಾವುದೇ ಭಯೋತ್ಪಾದನೆ ಚಟುವಟಿಕೆಗಳಿವೆಯೇ ಎಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಎಟಿಎಸ್ ಮೂಲಗಳು ತಿಳಿಸಿವೆ.