• Home
  • About Us
  • ಕರ್ನಾಟಕ
Friday, October 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಪಂಜಾಬ್ ಗೆದ್ದ ಬಳಿಕ ಕರ್ನಾಟಕ, ಗುಜರಾತ್ ಮಾತ್ರವಲ್ಲ, ಪ.ಬಂಗಾಳದತ್ತಲೂ ಗುರಿ‌ ನೆಟ್ಟ AAP

ಯದುನಂದನ by ಯದುನಂದನ
March 13, 2022
in ದೇಶ
0
ಪಂಜಾಬ್ ಗೆದ್ದ ಬಳಿಕ ಕರ್ನಾಟಕ, ಗುಜರಾತ್ ಮಾತ್ರವಲ್ಲ, ಪ.ಬಂಗಾಳದತ್ತಲೂ ಗುರಿ‌ ನೆಟ್ಟ AAP
Share on WhatsAppShare on FacebookShare on Telegram
ADVERTISEMENT

ಭಾರತೀಯ ರಾಜಕೀಯಕ್ಕೆ ಇತ್ತೀಚೆಗೆ ಪಾದಾರ್ಪಣೆ ಮಾಡಿರುವ ಆಮ್ ಆದ್ಮಿ ಪಕ್ಷದ ಮಹತ್ವಾಕಾಂಕ್ಷೆ ಬಹಳ ದೊಡ್ಡದು. ಅದರ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲರ ಮಹತ್ವಾಕಾಂಕ್ಷೆ ಕೂಡ ದೊಡ್ಡದೇ. ಹಾಗಾಗಿಯೇ ಕೇಂದ್ರಾಡಳಿತ ಪ್ರದೇಶವಾಗಿರುವ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಗದ್ದುಗೆ ಏರಿದ ಕೆಲವೇ ದಿನಗಳಲ್ಲಿ ಆಮ್ ಆದ್ಮಿ ಪಕ್ಷವು ಪೂರ್ಣ ಪ್ರಮಾಣದ ಸ್ವಾಯತ್ತತೆ ಹೊಂದಿರುವ ರಾಜ್ಯವೊಂದರ ಅಧಿಕಾರ ಹಿಡಿಯುವ ಪ್ರಯತ್ನ ಆರಂಭಿಸಿತು. 2017ರಲ್ಲಿ ಈ ಕನಸು ನನಸಾಗಲಿಲ್ಲ. 2022ರಲ್ಲಿ ಬಳಿಕ ಗಡಿ‌ ರಾಜ್ಯ ಪಂಜಾಬಿನ ಅಧಿಕಾರದ ಚುಕ್ಕಾಣಿ ಹಿಡಿಯುವಲ್ಲಿ ಯಶಸ್ವಿಯಾಗಿದೆ‌. ಇದರಿಂದ ಸಹಜವಾಗಿಯೇ ಆ ಪಕ್ಷದ ಕನಸುಗಳಿಗೆ ಇನ್ನಷ್ಟು ಗರಿ ಮೂಡಿದೆ. ನಮ್ಮ ಮುಂದಿನ ಗುರಿ ಕರ್ನಾಟಕ ಮತ್ತು ಗುಜರಾತ್ ಎಂದು ಹೊಸ ಹುಮ್ಮಸ್ಸಿನ ಹೇಳಿಕೆಗಳು ಬಂದು ಅಪ್ಪಳಿಸುತ್ತಿವೆ. ಇಷ್ಟರ ನಡುವೆ ಈಗ ಆಮ್ ಆದ್ಮಿ ಪಕ್ಷ ಪಶ್ಚಿಮ ಬಂಗಾಳದತ್ತವೂ ಗಮನಹರಿಸಿದೆ ಎಂದು ತಿಳಿದುಬಂದಿದೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಬಿಜೆಪಿ ವಿರುದ್ಧ ಪ್ರತಿಪಕ್ಷಗಳು ಒಂದಾಗಬೇಕು ಎಂಬ ಚರ್ಚೆ ನಡೆಯುತ್ತಿದೆ. ಈ ವಿಷಯದಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮಹತ್ವದ ಪಾತ್ರ ನಿರ್ವಹಿಸಬೇಕು ಎಂಬ ಮಾತುಗಳು ಕೇಳಿಬರುತ್ತಿವೆ. ಕುತೂಹಲಕಾರಿ ಸಂಗತಿ ಎಂದರೆ ಕಳೆದ ದೆಹಲಿ ವಿಧಾನಸಭಾ ಚುನಾವಣೆ ವೇಳೆ ಅರವಿಂದ ಕೇಜ್ರಿವಾಲ್ ಅವರ ಆಮ್ ಆದ್ಮಿ ಪಕ್ಷದ ಪರವಾಗಿ ಹಾಗೂ ಪಂಜಾಬಿನ ವಿಧಾನಸಭಾ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿಯವರ ತೃಣಮೂಲ ಕಾಂಗ್ರೆಸ್ ಪರವಾಗಿ ಕಾರ್ಯತಂತ್ರ ರೂಪಿಸಿದ್ದು ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಒಬ್ಬರೇ. ಇದೇ ಪ್ರಶಾಂತ್ ಕಿಶೋರ್ ಪ್ರತಿಪಕ್ಷಗಳ ಪಾಳೆಯದಲ್ಲಿ ಮಮತಾ ಬ್ಯಾನರ್ಜಿ ಮತ್ತು ಅರವಿಂದ ಕೇಜ್ರಿವಾಲ್ ಇಬ್ಬರನ್ನೂ ಮುನ್ನೆಲೆಗೆ ತರುವುದಕ್ಕೂ ಪ್ರಯತ್ನಿಸುತ್ತಿದ್ದಾರೆ. ಈ ನಡುವೆ ಆಮ್ ಆದ್ಮಿ ಪಕ್ಷ ಪಶ್ಚಿಮ ಬಂಗಾಳದ ಕಡೆಗೆ ದೃಷ್ಟಿ ಹಾಯಿಸಿರುವುದು ಕುತೂಹಲವನ್ನು ಹೆಚ್ಚಿಸಿದೆ.

ತೃಣಮೂಲ ಕಾಂಗ್ರೆಸ್ ನಾಯಕಿ ಮಮತಾ ಬ್ಯಾನರ್ಜಿ ಮತ್ತು ಎಎಪಿ ಸಂಚಾಲಕ ಅರವಿಂದ್ ಕೇಜ್ರಿವಾಲ್ ಉತ್ತಮ ಸಂಬಂಧವನ್ನು ಹೊಂದಿದ್ದಾರೆ ಆದರೂ ಅವರು ಗೋವಾ ವಿಧಾನಸಭಾ ಚುನಾವಣೆಯಲ್ಲಿ ಎದುರಾಳಿಗಳಾಗಿದ್ದರು. ಅಲ್ಲಿ ಇವರಿಬ್ಬರ ಸ್ಪರ್ಧೆ ಅಷ್ಟೇನೂ ಚರ್ಚೆಗೆ ಕಾರಣವಾಗಿರಲಿಲ್ಲ. ಆದರೆ ಈಗ ಅರವಿಂದ ಕೇಜ್ರಿವಾಲ್ ಅವರ ಆಮ್ ಆದ್ಮಿ ಪಕ್ಷವು ಮಮತಾ ಬ್ಯಾನರ್ಜಿಯವರ ತವರನ್ನೇ ಗುರಿಯಾಗಿರಿಸಿಕೊಂಡಿರುವುದು ಹೊಸ ಚರ್ಚೆಗೆ ಮುನ್ನುಡಿ ಬರೆದಂತಾಗಿದೆ.

Also Read : ಬಿಜೆಪಿಗೆ ರಾಷ್ಟ್ರವ್ಯಾಪಿ ರಾಜಕೀಯ ಪರ್ಯಾಯ : ಪಂಜಾಬ್ ಫಲಿತಾಂಶ ಹೇಳುವುದೇನು?

2021ರ ಪಶ್ಚಿಮ ‌ ಬಂಗಾಳ ಚುನಾವಣೆಯಲ್ಲಿ ಪ್ರಬಲ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ದಿಗ್ವಿಜಯ ದಾಖಲಿಸಿದ ಬಳಿಕ ಅವರು ರಾಷ್ಟ್ರ ರಾಜಕಾರಣದಲ್ಲೂ ಹೆಚ್ಚು ಪ್ರಾಮುಖ್ಯತೆ ಪಡೆದುಕೊಳ್ಳುತ್ತಿದ್ದಾರೆ. 2024ರ ಲೋಕಸಭಾ ಚುನಾವಣೆ ವೇಳೆಗೆ ಕಾಂಗ್ರೇಸೇತರ ಪರ್ಯಾಯ ರಂಗವನ್ನು ರಚಿಸುವಲ್ಲಿ ಅವರು ನಿರ್ಣಾಯಕ ಪಾತ್ರ ವಹಿಸುತ್ತಿದ್ದಾರೆ. ಈ ಪರ್ಯಾಯ ರಂಗಕ್ಕೆ ಆಮ್ ಆದ್ಮಿ ಪಕ್ಷದ ಬೆಂಬಲವೂ ಇರುತ್ತದೆ ಎಂದು ಹೇಳಲಾಗುತ್ತಿತ್ತು. ಆದರೀಗ ಆಮ್ ಆದ್ಮಿ ಪಕ್ಷ ಪಶ್ಚಿಮ ಬಂಗಾಳದಲ್ಲೂ ಬೇರೂರಲು ಪ್ರಯತ್ನಿಸುತ್ತಿರುವ ಬೆಳವಣಿಗೆಯು ಮಮತಾ ಬ್ಯಾನರ್ಜಿ ಮತ್ತು ಅರವಿಂದ ಕೇಜ್ರಿವಾಲ್ ನಡುವೆ ರಾಷ್ಟ್ರ ರಾಜಕಾರಣದಲ್ಲಿ ಸಮನ್ವಯ ಮೂಡುವ ಸಾಧ್ಯತೆಯನ್ನು ಅಲ್ಲಗೆಳೆಯುತ್ತಿದೆ.

ಆಮ್ ಆದ್ಮಿ ಪಕ್ಷ ಪಶ್ಚಿಮ ಬಂಗಾಳದಲ್ಲೂ ನೆಲೆ ಕಂಡುಕೊಳ್ಳಲು ಪ್ರಯತ್ನಿಸುತ್ತಿದೆ ಎಂಬುದರ ಬಗ್ಗೆ ಪ್ರತಿಕ್ರಿಯಿಸಿರುವ ಮಮತಾ ಬ್ಯಾನರ್ಜಿಯವರ ಕಡುವಿರೋಧಿ ಹಾಗೂ ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ಚೌಧರಿ ಅವರು ‘ಪಂಜಾಬ್ ಗೆಲುವಿನ ನಂತರ ಅರವಿಂದ ಕೇಜ್ರಿವಾಲ್ ಅವರು ರಾಷ್ಟ್ರ ರಾಜಕಾರಣದಲ್ಲಿ ಮಮತಾ ಬ್ಯಾನರ್ಜಿ ಅವಕಾಶವನ್ನು ಕಸಿದುಕೊಂಡಿದ್ದಾರೆ. ಕೇಜ್ರಿವಾಲ್ ಈಗ ಎಲ್ಲೆಡೆ ತಮ್ಮದೇಯಾದ ನೆಲೆಯನ್ನು ಹೆಚ್ಚಿಸಲು ಪ್ರಯತ್ನಿಸುತ್ತಾರೆ. ಅವರು ಸಾಧಿಸಿಯೂ ತೋರುತ್ತಾರೆ’ ಎಂದು ಹೇಳಿದ್ದಾರೆ. ಇದು ಉರಿಯುವ ಬೆಂಕಿಗೆ ತುಪ್ಪ ಸುರಿದಂತಾಗಿದೆ.

ಆಮ್ ಆದ್ಮಿ ಪಕ್ಷವು ದೇಶದ ಇತರೆಡೆಗಳಂತೆ ಪಶ್ಚಿಮ ಬಂಗಾಳದಲ್ಲೂ, ಅದರ ರಾಜಧಾನಿ ಕೋಲ್ಕತ್ತಾದಲ್ಲೂ ಬಹಳ ಹಿಂದೆಯೇ ಅನೇಕ ಘಟಕಗಳನ್ನು ಸ್ಥಾಪಿಸಿತ್ತು. ಆದರೆ ಅವುಗಳಲ್ಲಿ 2015ರ ನಂತರ ಟಿಎಂಸಿಯೊಂದಿಗೆ ವಿಲೀನಗೊಂಡುಬಿಟ್ಟಿದ್ದವು. ಈಗ ಮತ್ತೆ ತನ್ನ ಕಾಲೂರಲು ಆಮ್ ಆದ್ಮಿ ಪಕ್ಷ ತಯಾರಿ ನಡೆಸಿದೆ. ಇದೇ ಹಿನ್ನಲೆಯಲ್ಲಿ ಇಂದು ಸಂಜೆ 4 ಗಂಟೆಗೆ ಕೋಲ್ಕತ್ತಾದಲ್ಲಿ ಪಕ್ಷವು ‘ಪಾದರ್ಪಣ್ ಯಾತ್ರೆ’ ನಡೆಸುವ ಸಾಧ್ಯತೆಯಿದೆ.

Also Read : ಪಂಜಾಬ್ : ಅಧಿಕಾರವೆಂಬ ಕಲ್ಲು ಮುಳ್ಳಿನ ಹಾದಿಗೆ ರತ್ನಗಂಬಳಿ ಹಾಸುವರೇ ಕೇಜ್ರಿವಾಲ್?

ಆಮ್ ಆದ್ಮಿ ಪಕ್ಷದ ಸ್ಥಳೀಯ ನಾಯಕರೊಬ್ಬರು, ‘ತಮ್ಮ ಪಕ್ಷವು ಪಂಜಾಬ್‌ನಲ್ಲಿ ಅದ್ಭುತವಾದ ಸಾಧನೆ ಮಾಡಿದೆ‌. ನಾವು ಪಶ್ಚಿಮ ಬಂಗಾಳದಲ್ಲಿ ಪಂಜಾಬ್ ಚುನಾವಣಾ ಫಲಿತಾಂಶದ ಬಗ್ಗೆ ಸಂಭ್ರಮಾಚರಣೆ ಮಾಡಲು ಬಯಸಿದ್ದೇವೆ. ಧರ್ಮತಾಳದಿಂದ ಕೋಲ್ಕತ್ತಾದ ಗಿರೀಶ್ ಪಾರ್ಕ್‌ವರೆಗೆ ಮೆರವಣಿಗೆ ಮಾಡಲಿದ್ದೇವೆ’ ಎಂದಿದ್ದಾರೆ. ಆದರಿದು ಮಮತಾ ಬ್ಯಾನರ್ಜಿ ನೇತೃತ್ವದ ರಾಜ್ಯದಲ್ಲಿ ಆಮ್ ಆದ್ಮಿ ಪಕ್ಷ ನಡೆಸುತ್ತಿರುವ ಮೊದಲ ಮೆರವಣಿಗೆಯಾಗಿದೆ. ಆದುದರಿಂದ ಇದನ್ನು ಮುಂದಿನ ಚುನಾವಣೆಗಳನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ನಡೆಸುತ್ತಿರುವ ‘ಪಾದರ್ಪಣ್ ಯಾತ್ರೆ’ ಎಂದು ಕರೆಯಲಾಗುತ್ತಿದೆ‌.

ಕೋಲ್ಕತ್ತಾದಲ್ಲಿ ‘ಪಾದರ್ಪಣ್ ಯಾತ್ರೆ’ ನಡೆಸುವುದು ಮಾತ್ರವಲ್ಲ, ಆಮ್ ಆದ್ಮಿ ಪಕ್ಷ ರಾಜ್ಯಾದ್ಯಂತ ಸದಸ್ಯತ್ವ ಅಭಿಯಾನವನ್ನು ಆರಂಭಿಸಿದೆ. ಮಾಲ್ದಾ ಜಿಲ್ಲೆಯಲ್ಲಿ ಆಮ್ ಆದ್ಮಿ ಪಕ್ಷದ ಹಲವಾರು ಹೋರ್ಡಿಂಗ್‌ಗಳು ಮತ್ತು ಪೋಸ್ಟರ್‌ಗಳನ್ನು ಹಾಕಲಾಗಿದೆ. ಇದೇ ರೀತಿ ಎಎಪಿ ರಾಜ್ಯದ ಪ್ರತಿಯೊಂದು ಜಿಲ್ಲೆಗಳಲ್ಲಿ ನೆಲೆಗಳನ್ನು ವಿಸ್ತರಿಸಲು ಮುಂದಾಗಿದೆ ಎಂದು ಪಕ್ಷದ ನಾಯಕರು ಹೇಳುತ್ತಾರೆ.

ಇನ್ನೊಂದೆಡೆ ಆಮ್ ಆದ್ಮಿ ಪಕ್ಷದ ಚಟುವಟಿಕೆಗಳ ಬಗ್ಗೆ ಮಾತನಾಡಿರುವ ತೃಣಮೂಲ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಕುನಾಲ್ ಘೋಷ್ ಅವರು, ‘ಆಮ್ ಆದ್ಮಿ ಕೂಡ ಒಂದು ರಾಜಕೀಯ ಪಕ್ಷ. ಆದ್ದರಿಂದ ಅವರು ಕೆಲವು ಕಾರ್ಯಕ್ರಮಗಳನ್ನು ಮಾಡುತ್ತಿದ್ದಾರೆ. ಆದರೆ ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಅವರು ಮೂರು ಬಾರಿ ಮುಖ್ಯಮಂತ್ರಿಯಾಗಿ, ರೈಲ್ವೆ ಸಚಿವರಾಗಿ ಕೆಲಸ ಮಾಡಿದ್ದಾರೆ. ಸಂಸದೀಯ ರಾಜಕೀಯದಲ್ಲಿ ಹಲವು ವರ್ಷಗಳ ಅನುಭವ ಹೊಂದಿದ್ದಾರೆ. ಏನಾಗುತ್ತದೆ ಕಾದುನೋಡೋಣ’ ಎಂದು ಹೇಳಿದ್ದಾರೆ.

Also Read : ಪಂಜಾಬ್ ಗೆಲುವಿನ ಬೆನ್ನಲ್ಲೇ ಕರ್ನಾಟಕ ವಿಧಾನಸಭೆ ಚುನಾವಣೆಗೆ AAP ಮಾಸ್ಟರ್‌ ಪ್ಲಾನ್: Prithvi Reddyಯವರು ಹೇಳೊದೇನು?

ಪಂಜಾಬ್‌ನ 117 ಸ್ಥಾನಗಳ ಪೈಕಿ 92 ಸ್ಥಾನಗಳನ್ನು ಗಳಿಸುವ ಮೂಲಕ ಆಮ್ ಆದ್ಮಿ ಪಕ್ಷದ ಬಗ್ಗೆ ಇಡೀ ದೇಶಾದ್ಯಂತ ಚರ್ಚೆಯಾಗುತ್ತಿದೆ. ಆಮ್ ಆದ್ಮಿ ಪಕ್ಷದಲ್ಲಿ ಭಾರೀ ಉತ್ಸಾಹ ಕಂಡುಬಂದಿದ್ದು ಶೀಘ್ರವೇ ಇನ್ನೂ ಒಂದು ರಾಜ್ಯದ ಕಡೆ ನೋಡಿದರೂ ಆಶ್ಚರ್ಯ ಪಡುವಂತಿಲ್ಲ.

Punjab ಗೆಲುವಿನ ಬೆನ್ನಲ್ಲೇ ಕರ್ನಾಟಕ ವಿಧಾನಸಭೆ ಚುನಾವಣೆಗೆ AAP ಮಾಸ್ಟರ್‌ ಪ್ಲಾನ್: Prithvi Reddyಯವರು ಹೇಳೊದೇನು?
Tags: AAPAAP GovtBJPCongress PartyCovid 19ಆಪ್ ಸರ್ಕಾರಎಚ್ ಡಿ ಕುಮಾರಸ್ವಾಮಿಕರೋನಾಕರ್ನಾಟಕಕರ್ನಾಟಕ ಬಿಜೆಪಿಕರ್ನಾಟಕ ರಾಜಕೀಯಕರ್ನಾಟಕ ರಾಜ್ಯಕರ್ನಾಟಕ ಸರಕಾರಕರ್ನಾಟಕ ಸರ್ಕಾರಕೋವಿಡ್-19ಗುಜರಾತ್ಗುಜರಾತ್ ಗಲಭೆ 2002ಗುಜರಾತ್‌ ಮಾಡೆಲ್‌ಗುಜರಾತ್ ಮಾದರಿನರೇಂದ್ರ ಮೋದಿಪಂಜಾಬ್‌ಪಂಜಾಬ್ಪಂಜಾಬ್ ಚುನಾವಣೆಪಂಜಾಬ್ ರಾಜ್ಯಪಂಜಾಬ್‌ ಸರ್ಕಾರಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಸಂವಿಧಾನ, ಧಾರ್ಮಿಕ ಸ್ವಾತಂತ್ರ್ಯದ ಹೆಸರಲ್ಲಿ ಮತಾಂಧತೆ ಬೆಳೆಯುತ್ತಿದೆ : RSS

Next Post

ಶಾಲೆಗೂ ಬಂತು ಬೌನ್ಸರ್‌ ಸಂಸ್ಕೃತಿ : ಶುಲ್ಕ ವಿಚಾರವಾಗಿ ಪೋಷಕರ ಮೇಲೆ ಹಲ್ಲೆ ನಡೆಸಿದ ಮಹಿಳಾ ಬೌನ್ಸರ್‌!

Related Posts

ಸೈದ್ಧಾಂತಿಕ ಸಂಘರ್ಷವೂ ಪರ್ಯಾಯದ ಶೋಧವೂ
Top Story

ಸೈದ್ಧಾಂತಿಕ ಸಂಘರ್ಷವೂ ಪರ್ಯಾಯದ ಶೋಧವೂ

by ಪ್ರತಿಧ್ವನಿ
October 23, 2025
0

ಮಿಲೆನಿಯಂ ಸಮೂಹದ ಮುಂದೆ ಪರ್ಯಾಯವೊಂದನ್ನು  ಇಡದಿದ್ದರೆ  ನಮ್ಮ ಶ್ರಮ ನಿರರ್ಥಕವಾಗುತ್ತದೆ ನಾ ದಿವಾಕರ  ಕರ್ನಾಟಕದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರೆಸ್ಸೆಸ್)‌ ರಾಜಕೀಯ ಚಟುವಟಿಕೆಗಳನ್ನು ನಿಯಂತ್ರಿಸುವ ಭರದಲ್ಲಿ...

Read moreDetails
ಪ್ರಭಾಸ್‌ಗೆ ಜನ್ಮದಿನದ ಶುಭಾಶಯಗಳು!

ಪ್ರಭಾಸ್‌ಗೆ ಜನ್ಮದಿನದ ಶುಭಾಶಯಗಳು!

October 22, 2025

ನವೆಂಬರ್‌ ಕ್ರಾಂತಿ ನಡುವೆ ಡಿಕೆಶಿ ಟೆಂಪಲ್‌ ರನ್..!‌ ಗುರು ರಾಘವೇಂದ್ರ ಸ್ವಾಮಿಗಳ ಬೃಂದಾವನಕ್ಕೆ ಪೂಜೆ ಸಲ್ಲಿಸಿದ ಡಿಕೆ ಶಿವಕುಮಾರ್ ಮತ್ತು ಪತ್ನಿ ಉಷಾ

October 22, 2025

ದರ್ಶನ್‌ನ ಟಾರ್ಗೆಟ್‌ ಮಾಡಿದ್ದೇ ಸರ್ಕಾರ..?

October 22, 2025

ದರ್ಶನ್ ಅವರ ತಮ್ಮ ನೋಡಿ ನನ್ನ ಬಾಲಿವುಡ್ ಹೀರೋ ಅನ್ಕೊಂಡ್ರೂ

October 22, 2025
Next Post
ಶಾಲೆಗೂ ಬಂತು ಬೌನ್ಸರ್‌ ಸಂಸ್ಕೃತಿ : ಶುಲ್ಕ ವಿಚಾರವಾಗಿ ಪೋಷಕರ ಮೇಲೆ ಹಲ್ಲೆ ನಡೆಸಿದ ಮಹಿಳಾ ಬೌನ್ಸರ್‌!

ಶಾಲೆಗೂ ಬಂತು ಬೌನ್ಸರ್‌ ಸಂಸ್ಕೃತಿ : ಶುಲ್ಕ ವಿಚಾರವಾಗಿ ಪೋಷಕರ ಮೇಲೆ ಹಲ್ಲೆ ನಡೆಸಿದ ಮಹಿಳಾ ಬೌನ್ಸರ್‌!

Please login to join discussion

Recent News

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ
Top Story

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ

by ಪ್ರತಿಧ್ವನಿ
October 24, 2025
ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು
Top Story

ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

by ಪ್ರತಿಧ್ವನಿ
October 24, 2025
ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ
Top Story

ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ

by ಪ್ರತಿಧ್ವನಿ
October 24, 2025
ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ
Top Story

ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ

by ಪ್ರತಿಧ್ವನಿ
October 24, 2025
HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ
Top Story

HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ

by ಪ್ರತಿಧ್ವನಿ
October 24, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ

October 24, 2025
ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

October 24, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada