ದಸರಾ ಹಬ್ಬದ ಸಂದರ್ಭದಲ್ಲಿ ದೇಶದ ಗ್ರಾಹಕರಿಗೆ ಶಾಕ್ ನೀಡಿರುವ ತೈಲ ಕಂಪನಿಗಳು, ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಮಾಡಿವೆ. ಈಗಾಗಲೇ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ಜನರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಸರ್ಕಾರಿ ತೈಲ ಕಂಪನಿಗಳು ಗುರುವಾರ ಮತ್ತೆ ಹೆಚ್ಚಿಸಿದ್ದು, ಇಂದು ಡೀಸೆಲ್ ಬೆಲೆ 34 ರಿಂದ 37 ಪೈಸೆ ಹೆಚ್ಚಿದ್ದರೆ ಪೆಟ್ರೋಲ್ ಬೆಲೆ 31 ರಿಂದ 35 ಪೈಸೆ ಹೆಚ್ಚಾಗಿದೆ.
ದೇಶದ ಹಲವು ನಗರಗಳಲ್ಲಿ ಪೆಟ್ರೋಲ್ ಬೆಲೆ (Petrol Price) 100 ರೂ.ಗಿಂತ ಹೆಚ್ಚಾಗಿದೆ. ದೇಶದಲ್ಲಿ ಹೆಚ್ಚುತ್ತಿರುವ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಸಾಮಾನ್ಯ ಜನರ ಆದಾಯದ ಮೇಲೆ ಪರಿಣಾಮ ಬೀರುತ್ತಿದೆ.
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 108.40ಕ್ಕೆ ಏರಿಕೆಯಾಗಿದ್ದು, ಪ್ರತೀ ಲೀಟರ್ ಡೀಸೆಲ್ ದರ 99.22 ರೂ ಗೆ ಏರಿಕೆಯಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 104.79 ಕ್ಕೆ ಏರಿಕೆಯಾಗಿದ್ದು, ಪ್ರತೀ ಲೀಟರ್ ಡೀಸೆಲ್ ದರ 93.52 ರೂ ಗೆ ಏರಿಕೆಯಾಗಿದೆ.
ಮುಂಬೈ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ 101.40 ರೂ. ಡೀಸೆಲ್ ಬೆಲೆ(Diesel Price) ಪ್ರತಿ ಲೀಟರ್‌ಗೆ 110.75 ರೂ. ಮಹಾರಾಷ್ಟ್ರ ರಾಜಧಾನಿಯಲ್ಲಿ ಪ್ರತಿ ಲೀಟರ್‌ಗೆ ಡೀಸೆಲ್ ಬೆಲೆ 101.40 ರಂತೆ ಮಾರಾಟ ಮಾಡಲಾಗುತ್ತಿದೆ.
ಕೋಲ್ಕತಾ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ 96.63 ರೂ. ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 105.43 ರೂ. ಗೆ ಏರಿಕೆಯಾಗಿದೆ .
ಚೆನ್ನೈ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ 97.93 ರೂ. ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 102.10 ರೂ.ಗೆ ಏರಿಕೆಯಾಗಿದೆ .
ಮಧ್ಯಪ್ರದೇಶ, ರಾಜಸ್ಥಾನ, ಮಹಾರಾಷ್ಟ್ರ, ಆಂಧ್ರಪ್ರದೇಶ, ತೆಲಂಗಾಣ, ಕರ್ನಾಟಕ(Karnataka), ಒಡಿಶಾ, ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್‌ನಲ್ಲಿ ಪೆಟ್ರೋಲ್ ಬೆಲೆ 100 ರೂ. ದಾಟಿದೆ. ದೇಶದಲ್ಲೇ ಮುಂಬೈನಲ್ಲಿ ಪೆಟ್ರೋಲ್ ಬೆಲೆ ಅತ್ಯಧಿಕವಾಗಿದೆ.
ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಇಂಧನ ದರ ಪರಿಷ್ಕರಣೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.
ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಳದ ವಿರುದ್ಧದ ಸಂಕೇತ ಪ್ರತಿಭಟನೆಗಳು ದಾಖಲಾಗುತ್ತಿದ್ದರು ಬೆಲೆ ಏತಿಕೆ ಇನ್ನು ನಿಂತಿಲ್ಲದಿರುವುದು ಆಘಾತಕಾರಿ ವಿಷಯ