ಹೊಸ ರಕ್ಷಣಾ ನೇಮಕಾತಿ ಯೋಜನೆಯ ವಿರುದ್ಧ ದೇಶಾದ್ಯಂತ ಪ್ರತಿಭಟನೆ ಮುಂದುವರಿದಿದೆ. ಇಂದು ಬಿಹಾರದಲ್ಲಿ ಹೋರಾಟ ತೀವ್ರ ಸ್ವರೂಪ ಪಡೆದಿದ್ದು, ಈ ಹಿನ್ನೆಲೆಯಲ್ಲಿ ಶುಕ್ರವಾರ ಬೆಟ್ಟಿಯಾ ಜಿಲ್ಲೆಯಲ್ಲಿರುವ ಬಿಹಾರದ ಉಪ ಮುಖ್ಯಮಂತ್ರಿ ರೇಣು ದೇವಿ ಅವರ ಮನೆ ಮೇಲೆ ದಾಳಿ ನಡೆದಿದೆ.
“ಬೆಟ್ಟಿಯಾದಲ್ಲಿನ ನಮ್ಮ ನಿವಾಸದ ಮೇಲೆ ದಾಳಿ ನಡೆದಿದೆ. ನಮಗೆ ಸಾಕಷ್ಟು ಹಾನಿಯಾಗಿದೆ ಎಂದು ರೇಣುದೇವಿ ತಿಳಿಸಿದ್ದಾರೆ. ಆದರೆ ಅವರು ಪಾಟ್ನಾದಲ್ಲಿದ್ದಾರೆ ಎಂದು ಸುದ್ದಿ ಸಂಸ್ಥೆ ANI ವರದಿ ಮಾಡಿದೆ.

ಬಿಹಾರ, ಮಧ್ಯಪ್ರದೇಶ, ಹರಿಯಾಣ ಮತ್ತು ಉತ್ತರ ಪ್ರದೇಶ ಸೇರಿದಂತೆ ದೇಶದ ಅನೇಕ ರಾಜ್ಯಗಳಲ್ಲಿ ಮೋದಿ ಸರ್ಕಾರದ ‘ಅಗ್ನಿಪಥ’ ಯೋಜನೆಗೆ ವಿರೋಧ ವ್ಯಕ್ರವಾಗುತ್ತಿದೆ. ಪ್ರತಿಭಟನೆ ಸ್ವರೂಪ ತೀರ್ವಗೊಂಡಿದ್ದು, ಸಾರ್ಜನಿಕ ರೈಲುಗಳಿಗೆ ಬೆಂಕಿ ಹಚ್ಚಲಾಯಿತು, ಸಾರ್ವಜನಿಕ ಮತ್ತು ಪೊಲೀಸ್ ವಾಹನಗಳ ಮೇಲೆ ದಾಳಿ ಮಾಡಲಾಯಿತು ಮತ್ತು ಸಿಬ್ಬಂದಿ ಗಾಯಗೊಂಡರು. ನಾಲ್ಕು ವರ್ಷಗಳ ಕಾಲ ಸೇನೆ, ನೌಕಾಪಡೆ ಮತ್ತು ವಾಯುಪಡೆಗೆ ಜವಾನರನ್ನು ನೇಮಿಸಿಕೊಳ್ಳಲು ಮಂಗಳವಾರ ವಿವಾದಾತ್ಮಕ ಅಗ್ನಿಪಥ್ ಯೋಜನೆಯನ್ನು ಘೋಷಿಸಿದ ಬೆನ್ನಲ್ಲೇ ಈ ಒಂದು ವ್ಯಾಪಕ ಪ್ರತಿರೋಧ ವ್ಯಕ್ತವಾಗಿದೆ.






