• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ವಿಧಾನ ಮಂಡಲದ ಉಭಯ ಸದನಗಳ ಒಪ್ಪಿಗೆ ಕಾಯ್ದೆಯಾಗಲು ಒಂದೇ ಹೆಜ್ಜೆ ಬಾಕಿ

ಪ್ರತಿಧ್ವನಿ by ಪ್ರತಿಧ್ವನಿ
December 19, 2024
in Top Story, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ಬೆಳಗಾವಿ: ವಿಧಾನಸಭೆಯಲ್ಲಿ ಅಂಗೀಕಾರಗೊಂಡಿದ್ದ 2024 ನೇ ಸಾಲಿನ ಕರ್ನಾಟಕ ಕಾರ್ಮಿಕ ಕಲ್ಯಾಣ ನಿಧಿ ತಿದ್ದುಪಡಿ ವಿಧೇಯಕಕ್ಕೆ ವಿಧಾನ ಪರಿಷತ್‌ ಅನುಮೋದನೆ ನೀಡಿತು.

ADVERTISEMENT

ಪರಿಷತ್‌ ಕಲಾಪದ ವೇಳೆ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಅವರು ವಿಧೇಯಕವನ್ನು ಮಂಡಿಸಿದರು.ಆನಂತರ ಮಾತನಾಡಿದ ಅವರು, ಇದು ಐದನೇ ಬಾರಿಗೆ ಈ ಮಸೂದೆಗೆ ತಿದ್ದುಪಡಿ ತರಲಾಗಿದೆ. ಈಗಾಗಲೇ ಹಲವು ಬಾರಿ ಉದ್ಯೋಗಿ, ಉದ್ಯೋಗದಾತ ಮತ್ತು ಸರ್ಕಾರದ ಕೊಡುಗೆ ಬದಲಾಯಿಸಲಾಗಿದೆ.ಐವತ್ತು ಉದ್ಯೋಗಿಗಳಿಗೂ ಹೆಚ್ಚು ಇರುವಲ್ಲಿ ಈ ಕಾಯ್ದೆಗೆ ವ್ಯಾಪ್ತಿಗೆ ಬರಲಿದ್ದಾರೆ ಎಂದರು.

ಈ ನಿಧಿನಿಂದ ಹಲವಾರು ಸಾಮಾಜಿಕ ಸೇವಾ ಸೌಲಭ್ಯಗಳನ್ನು ನೀಡಲಾಗುತ್ತಿದೆ. ವಿಶೇಷವಾಗಿ ಶೈಕ್ಷಣಿಕ ನೆರವು, ವೈದ್ಯಕೀಯ ಸೌಲಭ್ಯ, ಅಪಘಾತ ಧನಸಹಾಯ, ಅಂತ್ಯಸಂಸ್ಕಾರ ನೆರವು, ಹೆರಿಗೆ ಭತ್ಯೆ ನೀಡಲಾಗುತ್ತದೆ. ಕಳೆದ ಎರಡು ಸಾಲಿನಿಂದ ಕೊಡುಗೆಗಿಂತ ವೆಚ್ಚ ಜಾಸ್ತಿ ಆಗಿತ್ತು. ಕಾರ್ಮಿಕರ ಸಂಖ್ಯೆ ಹೆಚ್ಚಳವಾಗಿದೆ. ಆಡಳಿತಾತ್ಮಕ ವೆಚ್ಚ ಏರಿದೆ. ಆದ್ದರಿಂದ ಸಂಘಟಿತ ವಲಯದ ಕಾರ್ಮಿಕರಿಗೆ ಹೆಚ್ಚಿನ ಸಹಾಯ ಮಾಡಲು ಈ ತಿದ್ದುಪಡಿ ತರಲಾಗಿದೆ ಎಂದು ವಿವರಿಸಿದರು.

ಪರಿಷತ್‌ ಸದಸ್ಯರಾದ ತಿಪ್ಪೇಸ್ವಾಮಿ, ಟಿ ಎ ಶರವಣ, ಕೇಶವ ಪ್ರಸಾದ್‌, ಐವನ್‌ ಡಿಸೋಜ ಅವರು ಈ ನಿಧಿಯ ಬಳಕೆ ಬಗ್ಗೆ ವಿವರಗಳನ್ನು ಕೋರಿದರು. ಇದಕ್ಕೆ ಉತ್ತರಿಸಿದ ಸಚಿವ ಲಾಡ್‌ ಅವರು, ಕಾರ್ಮಿಕರ ಕೊಡುಗೆ ವರ್ಷಕ್ಕೆ ಒಂದು ಬಾರಿ. ಎಲ್ಲಾ ಕಡೆಯಿಂದ ಪರಿಶೀಲನೆ ಮಾಡಿಯೇ ಫಲಾನುಭವಿಗಳಿಗೆ ಹಣ ನೀಡಲಾಗುತ್ತದೆ. ಇದರಲ್ಲಿ ಯಾವುದೇ ಅವ್ಯವಹಾರ ಆಗಲು ಬಿಡುವುದಿಲ್ಲ ಎಂದರು.

ಇಎಸ್‌ಐ ಆಸ್ಪತ್ರೆಗಳ ಸುಧಾರಣೆಗೆ ಕ್ರಮ ಕೈಗೊಳ್ಳಲಾಗುವುದು. ಈ ಬಗ್ಗೆ ಕೇಂದ್ರ ಸಚಿವರೊಂದಿಗೆ ಮಾತನಾಡಿದ್ದೇನೆ. ಖಾಸಗಿ ಆಸ್ಪತ್ರೆಗಳಿಗೆ ಹೋಗುವುದನ್ನು ತಡೆದು ನಮ್ಮಲ್ಲೇ ಒಳ್ಳೆಯ ಚಿಕಿತ್ಸೆ ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ವಿವರಿಸಿದರು. ನಮ್ಮ ಇಲಾಖೆ ಪಾರದರ್ಶಕವಾಗಿ ಕೆಲಸ ಮಾಡುತ್ತಿದೆ. ಯಾವುದೇ ಭ್ರಷ್ಟಾಚಾರಕ್ಕೆ ಅವಕಾಶ ಇಲ್ಲ. ನಿರ್ದಿಷ್ಟ ಪ್ರಕರಣ ಇದ್ದರೆ ಕ್ರಮ ಕೈಗೊಳ್ಳಲಾಗುವುದು. ಅಸಂಘಟಿತ ಕಾರ್ಮಿಕರಿಗೆ ಸಹ ಸೌಲಭ್ಯಗಳನ್ನು ನೀಡಲಾಗುತ್ತಿದೆ ಎಂದು ಹೇಳಿದರು.

Tags: accident grantAgreement by both Houses of Legislative AssemblyBelgaumfuneral assistanceLabor Minister Santosh Ladmaternity allowance.medical facilityOne step left to become lawSpecially educational assistance
Previous Post

IISC ವಿದ್ಯಾರ್ಥಿ ನಿಗೂಢ ನಾಪತ್ತೆ ! ಅನ್ಮೋಲ್ ಗಿಲ್ ಬೆನ್ನುಬಿದ್ದ ಪೊಲೀಸರು ! 

Next Post

8 ಸಾವಿರ ಮಹಿಳೆಯರು ಸೇರಿ 12,699 ಪೌರಕಾರ್ಮಿಕರ ನೇಮಕಾತಿ ಕಾಯಂ

Related Posts

ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ
ಕರ್ನಾಟಕ

ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ

by ಪ್ರತಿಧ್ವನಿ
March 5, 2026
0

ಬೆಂಗಳೂರು: ಮೀಸಲಾತಿ ಹಾಗೂ ಒಳಮೀಸಲಾತಿ ಜಾರಿಯಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರ ಬದ್ಧತೆಯಿಲ್ಲದೆ ನಡೆದುಕೊಳ್ಳುತ್ತಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದರು. ಶೀಘ್ರದಲ್ಲೇ ರಾಜ್ಯಾದ್ಯಂತ ದೊಡ್ಡ...

Read moreDetails
ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

March 4, 2026
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

March 4, 2026
Next Post
8 ಸಾವಿರ ಮಹಿಳೆಯರು ಸೇರಿ 12,699 ಪೌರಕಾರ್ಮಿಕರ ನೇಮಕಾತಿ ಕಾಯಂ

8 ಸಾವಿರ ಮಹಿಳೆಯರು ಸೇರಿ 12,699 ಪೌರಕಾರ್ಮಿಕರ ನೇಮಕಾತಿ ಕಾಯಂ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada