• Home
  • About Us
  • ಕರ್ನಾಟಕ
Monday, October 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಕೃಷಿ ಮೇಳಗಳು ಕೃಷಿ ಕ್ಷೇತ್ರಕ್ಕೆ ಯುವಕರನ್ನು, ಹೊಸಬರನ್ನು ಸೆಳೆಯಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
September 9, 2023
in Top Story, ಇದೀಗ, ಕರ್ನಾಟಕ, ರಾಜಕೀಯ
0
ಮುಖ್ಯಮಂತ್ರಿ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ

Share on WhatsAppShare on FacebookShare on Telegram

ಕೃಷಿ ವಿವಿಗಳು ಒಣಭೂಮಿಯಲ್ಲಿ ಕೃಷಿ ಅಭಿವೃದ್ಧಿ ಪಡಿಸುವ ಕುರಿತು ಹೆಚ್ಚು ಸಂಶೋಧನೆ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ADVERTISEMENT

ಧಾರವಾಡ ಕೃಷಿ ವಿಶ್ವವಿದ್ಯಾಲಯ ಆವರಣದಲ್ಲಿ ಶನಿವಾರ (ಸೆಪ್ಟೆಂಬರ್ 9) ಆಯೋಜಿಸಲಾಗಿದ್ದ ಕೃಷಿಮೇಳ- 2023 ಉದ್ಘಾಟಿಸಿ, ಮಾತನಾಡಿದರು.

ಇಂದು ಶೇ.60 ರಷ್ಟು ಜನ ಕೃಷಿ ಮಾಡುತ್ತಿದ್ದು, ಭಾರತವು ಕೃಷಿ ಪ್ರಧಾನ ದೇಶವಾಗಿದ್ದರೂ ಸಾಕಷ್ಟು ಜನ ಕೃಷಿಯಿಂದ ವಿಮುಖರಾಗುತ್ತಿದ್ದಾರೆ. ಮಳೆ ಆಧಾರಿತ ಕೃಷಿ ಭೂಮಿ ಇರುವದರಿಂದ ಮಳೆ ಕೊರತೆಯಾಗಿ ಸಮಸ್ಯೆ ಆಗುತ್ತಿದೆ ಎಂದು ಹೇಳಿದರು.

ಯುವಕರು, ಹೆಚ್ಚುಜನ ಕೃಷಿಯಲ್ಲಿ ತೊಡಗಿಸಿಕೊಳ್ಳುವಂತೆ ಕೃಷಿ ವಿವಿಗಳು ಕಾರ್ಯ ಮಾಡಬೇಕು. ವಿಶ್ವವಿದ್ಯಾಲಯದ ಸಂಶೋಧನೆ, ತಾಂತ್ರಿಕತೆಗಳು ರೈತರ ಜಮೀನುಗಳಿಗೆ ತಲುಪಿದರೆ ಮಾತ್ರ ಸಾರ್ಥಕವಾಗುತ್ತದೆ. ಕೃಷಿ ಮೇಳಗಳು ಜಾತ್ರೆಗಳಾಗದೇ ಕೃಷಿ ಕ್ಷೇತ್ರಕ್ಕೆ ಯುವಕರನ್ನು, ಹೊಸಬರನ್ನು ಸೆಳೆಯುವಂತೆ ಆಕರ್ಷಕವಾಗಿ ಸಂಘಟಿಸಬೇಕು ಎಂದರು.

ಒಣ ಬೇಸಾಯ ಮಾಡುವ ರೈತರ ಬಗ್ಗೆ ವಿಶೇಷ ಕಾಳಜಿ ಇದೆ. ಒಣಬೇಸಾಯ ಮಾಡಲು ಅಗತ್ಯ ಸುಧಾರಿತ ಹೊಸ ತಳಿಗಳ ಸಂಶೋಧನೆ ಮಾಡಬೇಕು. ಬಿತ್ತಿದ ಯಾವುದೇ ಮುಖ್ಯ ಬೆಳೆ ಹಾಳಾದರೆ, ಅದಕ್ಕೆ ಪರ್ಯಾಯವಾದ ತಕ್ಷಣದ ಬೆಳೆಗಳನ್ನು ಮಾಡಬೇಕು ಎಂಬುದರ ಬಗ್ಗೆ ವಿಜ್ಞಾನಿಗಳು ಆಸಕ್ತಿ ವಹಿಸಿ, ಸಂಶೋಧನೆ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಪ್ರಯೋಗಾಲಯದ ಸಂಶೋಧನೆಗಳು ರೈತರ ಭೂಮಿಗೆ ತಲುಪಬೇಕು

ಲ್ಯಾಬ್ ಟು ಲ್ಯಾಂಡ್ ಅಂದರೆ ಪ್ರಯೋಗಾಲಯದ ಸಂಶೋಧನೆಗಳು ರೈತರ ಭೂಮಿಗೆ ತಲುಪಬೇಕು. ಅಂದಾಗ ಮಾತ್ರ ವಿಜ್ಞಾನಿಗಳ ಸಂಶೋಧನೆಗಳು ಫಲಪ್ರದವಾಗುತ್ತದೆ ಎಂದು ಅವರು ಹೇಳಿದರು.

ರೈತರಿಗೆ ಉನ್ನತ ತಾಂತ್ರಿಕತೆ ಇರುವ ಕಟಾವು ಯಂತ್ರ

ಕೃಷಿ ಭಾಗ್ಯ, ಕೃಷಿ ಯಂತ್ರಧಾರೆ ಯೊಜನೆಗಳ ಮರುಜಾರಿ ಘೋಷಿಸಲಾಗಿದೆ. ರಾಜ್ಯದಲ್ಲಿ ಸಣ್ಣ ರೈತರು ಹೆಚ್ಚಿಗೆ ಇರುವದರಿಂದ ಉನ್ನತ ತಾಂತ್ರಿಕತೆ ಇರುವ ಕಟಾವು ಯಂತ್ರಗಳನ್ನು ರೈತರಿಗೆ ನೀಡಲು ಕ್ರಮವಹಿಸಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ನೀರಿನ ಸಮಸ್ಯೆ ಪರಿಹಾರಕ್ಕೆ ಕ್ರಮ

ಕೋರಮಂಗಲ ಚಲ್ಲಘಟ್ಟ(ಕೆಸಿ) ವ್ಯಾಲಿ ಮೂಲಕ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಹೆಚ್ಚಳಕ್ಕೆ, ನೀರಾವರಿಗೆ ಅನಕೂಲ ಮಾಡಲಾಗಿದೆ. ನೀರಿನ ಸಮಸ್ಯೆ ಪರಿಹಾರಕ್ಕೆ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.

ರೈತರಿಗೆ ರೂ. 5 ಲಕ್ಷದವರೆಗೆ ಶೂನ್ಯ ಬಡ್ಡಿ ಸಾಲ

ರಾಜ್ಯ ಸರಕಾರ ಈ ವರ್ಷದಿಂದ ರೈತರಿಗೆ ರೂ. 5 ಲಕ್ಷದವರೆಗೆ ಶೂನ್ಯ ಬಡ್ಡಿ ಸಾಲ ಮತ್ತು ರೂ.15 ಲಕ್ಷದವರೆಗೆ ಕೇವಲ ಶೇ. 3 ರಷ್ಟು ಬಡ್ಡಿ ನಿಗದಿಗೊಳಿಸಿ, ಕ್ರಮಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಮಹದಾಯಿ ಯೋಜನೆಗೆ ಬದ್ಧ

ಮಹಾದಾಯಿ ಯೋಜನೆ ಜಾರಿಗೊಳಿಸಲು ಸರಕಾರ ಬದ್ದವಾಗಿದೆ. ಕೇಂದ್ರ ಸರಕಾರ ಶೀಘ್ರವಾಗಿ ಸ್ಪಂದಿಸಿ, ಸಮಸ್ಯೆ ಬಗೆಹರಿಸಿದರೆ ಯೋಜನೆ ಅನುಷ್ಠಾನ ಸುಲಭ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಕೇಂದ್ರ ಸರಕಾರ ಗೋವಾ ಸರಕಾರದೊಂದಿಗೆ ಸಮಾಲೋಚಿಸಿ, ಪರಿಸರ ಮತ್ತು ಅರಣ್ಯ ಸಂಬಂಧಿಸಿದ ತಕರಾರು ಪರಿಹರಿಸಿದರೆ ರಾಜ್ಯ ಸರಕಾರ ತಕ್ಷಣ ಕ್ರಮ ವಹಿಸಲಿದೆ. ರಾಜ್ಯ ಸರಕಾರಕ್ಕೆ ಹಣಕಾಸಿನ ಕೊರತೆ ಇಲ್ಲ ಎಂದು ಅವರು ಹೇಳಿದರು.

ಬೆಣ್ಣಿಹಳ್ಳ ಯೋಜನೆ: ಶೀಘ್ರ ಜಾರಿ

ಬೆಣ್ಣಿಹಳ್ಳ ಯೋಜನೆಯನ್ನು ಡಿಪಿಆರ್ ಮಾಡಿಸಿ, ಶೀಘ್ರವಾಗಿ ಜಾರಿಗೊಳಿಸಲಾಗುವುದು. ಧಾರವಾಡ ಜಿಲ್ಲೆಯ ಹಾಗೂ ಉತ್ತರ ಕರ್ನಾಟಕದ ರೈತರ ಎಲ್ಲ ಬೇಡಿಕೆಗಳಿಗೆ ಸ್ಪಂದಿಸಿ, ಕ್ರಮವಹಿಸಲಾಗುವುದು ಎಂದು ಮುಖ್ಯಮಂತ್ರಿಗಳು ಹೇಳಿದರು .

ಪಂಚ ಗ್ಯಾರಂಟಿಗಳೊಂದಿಗೆ ಎಲ್ಲ ಅಭಿವೃದ್ಧಿ ಕಾರ್ಯಗಳ ಮುಂದುವರಿಕೆ; ಸರಕಾರ ಆರ್ಥಿಕವಾಗಿ ಸುಸ್ಥಿರವಾಗಿದೆ ಬಡವರ ವಿರೋಧಿಗಳು ಪಂಚ ಗ್ಯಾರಂಟಿ ಅನುಷ್ಠಾನ ವಿಷಯದಲ್ಲಿ ಸರಕಾರದ ವಿರುದ್ಧ ಸುಳ್ಳ ಆರೋಪ ಮಾಡುತ್ತಿದ್ದಾರೆ, ಆದರೆ ಸರಕಾರ ಆರ್ಥಿಕವಾಗಿ ಸುಸ್ಥಿರವಾಗಿದ್ದು, ಎಲ್ಲ ಅಭಿವೃದ್ಧಿ ಕಾರ್ಯಗಳನ್ನು ಮುಂದುವರೆಸಲಾಗಿದೆ. ಪಂಚಗ್ಯಾರಂಟಿಗಳು ಸೇರಿ ರಾಜ್ಯದ ಅಭಿವೃದ್ಧಿಗಾಗಿ ಮುಂದಿನ ವರ್ಷ ಸುಮಾರು 3 ಲಕ್ಷ 80 ಸಾವಿರ ಕೋಟಿ ರೂ. ಗಳ ಬಜೆಟ್ ಮಂಡಿಸಲಾಗುತ್ತದೆ ಎಂದು ಮುಖ್ಯಮಂತ್ರಿಗಳು ಹೇಳಿದರು.

ಯಾರಿಗೂ ಭಯಬೇಡ

ಪಂಚಗ್ಯಾರಂಟಿ ಯೋಜನೆಗಳ ಜಾರಿಯಿಂದ ಅಭಿವೃದ್ಧಿಗೆ ಹಣದ ಕೊರತೆ ಆಗಿದೆ ಎಂದು ಅಪಪ್ರಚಾರ ಮಾಡಲಾಗುತ್ತಿದೆ. ಸರಕಾರಕ್ಕೆ ಯಾವುದೇ ರೀತಿಯ ಆರ್ಥಿಕ ತೊಂದರೆ ಇಲ್ಲ. ಸರಕಾರದ ಎಲ್ಲ ಅಭಿವೃದ್ಧಿ ಕಾರ್ಯಕ್ರಮಗಳು ಮುಂದುವರೆಯಲಿವೆ. ಪ್ರಸಕ್ತ ವರ್ಷ ಪಂಚ ಗ್ಯಾರಂಟಿಗಳ ಅನುಷ್ಠಾನಕ್ಕೆ ಸುಮಾರು 32 ಸಾವಿರ ಕೋಟಿ ರೂ.ಗಳ ಅಗತ್ಯವಿದೆ. ಮುಂದಿನ ವರ್ಷದಿಂದ ಪ್ರತಿವರ್ಷ ಪಂಚ ಗ್ಯಾರಂಟಿಗಳ ಜಾರಿಗೆ ಸುಮಾರು 56 ಸಾವಿರ ಕೋಟಿ ರೂ.ಗಳು ಬೇಕಾಗುತ್ತದೆ. ಈ ಎಲ್ಲ ಅಗತ್ಯ ಹಣ ಹೊಂದಿಸಲು ಸರಕಾರ ಸಶಕ್ತವಾಗಿದೆ. ಯಾರಿಗೂ ಭಯಬೇಡ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಪಂಚ ಗ್ಯಾರಂಟಿಗಳ ವೆಚ್ಚ ಸೇರಿ ಮುಂದಿನ ವರ್ಷದ ಬಜೆಟ್ ಸುಮಾರು 380 ಲಕ್ಷ ಕೋಟಿಗಳಾಗುವ ಅಂದಾಜಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಕಾರ್ಯಕ್ರಮದಲ್ಲಿ ಕೃಷಿ ಸಚಿವ ಹಾಗೂ ಕೃಷಿವಿವಿ ಸಮ ಕುಲಾಧಿಪತಿ ಎನ್. ಚಲುವರಾಯಸ್ವಾಮಿ ಅವರು ಕೃಷಿ ವಿವಿಯ ವಿಶೇಷ ಪ್ರಕಟಣೆಗಳನ್ನು ವೇದಿಕೆಯಲ್ಲಿ ಬಿಡುಗಡೆ ಮಾಡಿದರು. ಶ್ರೇಷ್ಠ ಕೃಷಿ ಪ್ರಶಸ್ತಿ ಪುರಸ್ಕೃತ ರೈತ ಮಹಿಳೆಯರಿಗೆ, ಪ್ರಗತಿಪರ ರೈತರಿಗೆ ಮುಖ್ಯಮಂತ್ರಿಗಳು ಪ್ರಶಸ್ತಿ ವಿತರಿಸಿ, ಗೌರವಿಸಿದರು.

ಕೃಷಿ ಸಚಿವ ಎನ್. ಚಲುರಾಯಸ್ವಾಮಿ , ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್, ವಿಧಾನ ಪರಿಷತ್ ಸರಕಾರದ ಮುಖ್ಯ ಸಚೇತಕ ಸಲೀಂ ಅಹ್ಮದ್, ಶಾಸಕರಾದ ಪ್ರಸಾದ ಅಬ್ಬಯ್ಯ, ಎನ್.ಎಚ್.ಕೋನರಡ್ಡಿ, ಬಸವರಾಜ ಶಿವಣ್ಣನವರ, ಕೃಷಿ ಇಲಾಖೆ ಕಾರ್ಯದರ್ಶಿ ಅನ್ಬುಕುಮಾರ, ಕೃಷಿ ಇಲಾಖೆ ಆಯುಕ್ತರಾದ ವೈ.ಎಸ್.ಪಾಟೀಲ, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಪೊಲೀಸ್ ಆಯುಕ್ತರಾದ ರೇಣುಕಾ ಸುಕುಮಾರ, ಜಿ.ಪಂ. ಸಿಇಒ ಸ್ವರೂಪ. ಟಿ.ಕೆ., ಮಾಜಿ ಶಾಸಕಿ ಕುಸುಮಾವತಿ ಶಿವಳ್ಳಿ ಹಾಗೂ ಕೃಷಿ ವಿವಿ ಆಡಳಿತ ಮಂಡಳಿ ಸದಸ್ಯರು, ಅಧಿಕಾರಿಗಳು ವೇದಿಕೆಯಲ್ಲಿದ್ದರು.

Tags: AgricultureAgriculture FairCM Siddaramaiahಕೃಷಿಕೃಷಿ ಮೇಳಮುಖ್ಯಮಂತ್ರಿ ಸಿದ್ದರಾಮಯ್ಯ
Previous Post

ಪ್ರಜಾಪ್ರಭುತ್ವದಲ್ಲಿ ಇಂತಹ ಘಟನೆಗಳು ದುರದೃಷ್ಟಕರ: ಚಂದ್ರಬಾಬು ನಾಯಡು ಬಂಧನಕ್ಕೆ ಪವನ್‌ ಕಲ್ಯಾಣ್ ಖಂಡನೆ

Next Post

ಜೆಡಿಎಸ್ – ಬಿಜೆಪಿ ಮೈತ್ರಿ ಮಾತುಕತೆ ಆರಂಭಿಕ ಹಂತದಲ್ಲಿದೆ: ಎಚ್.ಡಿ.ಕುಮಾರಸ್ವಾಮಿ

Related Posts

Top Story

Siddaramaiah: ತಮಿಳುನಾಡಿನಲ್ಲಿ ಕೈಗೊಂಡಂತೆ ಆರ್‌ಎಸ್‌ಎಸ್‌ ವಿರುದ್ಧ ರಾಜ್ಯದಲ್ಲಿ ಕ್ರಮ..!!

by ಪ್ರತಿಧ್ವನಿ
October 13, 2025
0

ಆರ್‌ಎಸ್‌ಎಸ್‌ ವಿರುದ್ಧ ತಮಿಳುನಾಡಿನಲ್ಲಿ ಯಾವ ರೀತಿ ಕ್ರಮ ಕೈಗೊಂಡಿದ್ದಾರೋ ಆ ರೀತಿ ಕ್ರಮವನ್ನು ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಮುಖ್ಯ ಕಾರ್ಯದರ್ಶಿ ಅವರಿಗೆ ಸೂಚಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ...

Read moreDetails

ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾದ ಮಾಜಿ ಐಎಎಸ್‌ ಅಧಿಕಾರಿ ಕಣ್ಣನ್‌ ಗೋಪಿನಾಥನ್..

October 13, 2025

Kantara Chapter-1: ಗಲ್ಲಾಪೆಟ್ಟಿಗೆಯಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ‘ಕಾಂತಾರ ಚಾಪ್ಟರ್ 1’ .

October 13, 2025

Siddaramaiah: ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

October 13, 2025
ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ

ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ

October 13, 2025
Next Post
ಎಚ್‌.ಡಿ.ಕುಮಾರಸ್ವಾಮಿ

ಜೆಡಿಎಸ್ - ಬಿಜೆಪಿ ಮೈತ್ರಿ ಮಾತುಕತೆ ಆರಂಭಿಕ ಹಂತದಲ್ಲಿದೆ: ಎಚ್.ಡಿ.ಕುಮಾರಸ್ವಾಮಿ

Please login to join discussion

Recent News

Top Story

Siddaramaiah: ತಮಿಳುನಾಡಿನಲ್ಲಿ ಕೈಗೊಂಡಂತೆ ಆರ್‌ಎಸ್‌ಎಸ್‌ ವಿರುದ್ಧ ರಾಜ್ಯದಲ್ಲಿ ಕ್ರಮ..!!

by ಪ್ರತಿಧ್ವನಿ
October 13, 2025
Top Story

ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾದ ಮಾಜಿ ಐಎಎಸ್‌ ಅಧಿಕಾರಿ ಕಣ್ಣನ್‌ ಗೋಪಿನಾಥನ್..

by ಪ್ರತಿಧ್ವನಿ
October 13, 2025
Top Story

Kantara Chapter-1: ಗಲ್ಲಾಪೆಟ್ಟಿಗೆಯಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ‘ಕಾಂತಾರ ಚಾಪ್ಟರ್ 1’ .

by ಪ್ರತಿಧ್ವನಿ
October 13, 2025
Top Story

Siddaramaiah: ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

by ಪ್ರತಿಧ್ವನಿ
October 13, 2025
Top Story

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

by ಪ್ರತಿಧ್ವನಿ
October 12, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Siddaramaiah: ತಮಿಳುನಾಡಿನಲ್ಲಿ ಕೈಗೊಂಡಂತೆ ಆರ್‌ಎಸ್‌ಎಸ್‌ ವಿರುದ್ಧ ರಾಜ್ಯದಲ್ಲಿ ಕ್ರಮ..!!

October 13, 2025

ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾದ ಮಾಜಿ ಐಎಎಸ್‌ ಅಧಿಕಾರಿ ಕಣ್ಣನ್‌ ಗೋಪಿನಾಥನ್..

October 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada