• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, July 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕೃಷಿ ಇಲಾಖೆ ಮಿಂಚಿನ ಕಾರ್ಯಾಚರಣೆ: ಹಲವೆಡೆ ಅಕ್ರಮ ಬೀಜ ದಾಸ್ತಾನು ಜಪ್ತಿ

ಪ್ರತಿಧ್ವನಿ by ಪ್ರತಿಧ್ವನಿ
July 5, 2026
in Top Story, ಕರ್ನಾಟಕ
0
ಕೃಷಿ ಇಲಾಖೆ ಮಿಂಚಿನ ಕಾರ್ಯಾಚರಣೆ: ಹಲವೆಡೆ ಅಕ್ರಮ ಬೀಜ ದಾಸ್ತಾನು ಜಪ್ತಿ
Share on WhatsAppShare on FacebookShare on Telegram
ADVERTISEMENT

ಬೆಂಗಳೂರು: ಕೃಷಿ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ನೇತೃತ್ವದ ಪ್ರತ್ಯೇಕ ತಂಡಗಳು ರಾಜ್ಯದ ಹಾಸನ ತುಮಕೂರು ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ವಿವಿಧ ರಸಗೊಬ್ಬರ ಮಾರಾಟ ಕೇಂದ್ರಗಳಿಗೆ ಭೇಟಿ ನೀಡಿ ಅನಧಿಕೃತವಾಗಿ ಸಂಗ್ರಹಿಸಲಾಗಿದ್ದ ಬೀಜ ಮತ್ತು ಸೂಕ್ಷ್ಮ ಪೋಷಕಾಂಶಗಳನ್ನು ವಶಪಡಿಸಿಕೊಂಡಿದ್ದಾರೆ.

R Ashok : ಡಿಕೆ ಶಿವಕುಮಾರ್ ಸಿಎಂ ಆಗಿ ಒಂದು ತಿಂಗಳು ಆಯ್ತು. #pratidhvani

ಅನಧಿಕೃತವಾಗಿ ಬೀಜ,ರಸಗೊಬ್ಬರ ದಾಸ್ತಾನು, ಮಾರಾಟ ನಿಯಂತ್ರಿಸಲು ಕೃಷಿ ಇಲಾಖೆ ಆಯುಕ್ತರಾದ ಡಾ.ಬಿ.ಸಿ.ಸತೀಶ್ ಅವರ ಸೂಚನೆ ಮೇರೆಗೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕೃಷಿ ಅಧಿಕಾರಿಗಳು ಮಿಂಚಿನ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಹಾಸನ ಜಿಲ್ಲೆ ಸಾಲಗಾಮೆ ಹೋಬಳಿಯ ಕೊಂಡಜ್ಜಿಕೊಪ್ಪಲುವಿನ ಕಾರ್ತಿಕ ಟ್ರೇಡರ್ಸ್‌ನಲ್ಲಿ ಬೀಜ ಕಾಯ್ದೆ 1966 ಉಲ್ಲಂಘಿಸಿ ಅನುಮತಿ ಇಲ್ಲದೇ ದಾಸ್ತಾನು ಮಾಡಲಾಗಿದ್ದ ಸುಮಾರು 85 ಸಾವಿರ ರೂ.ಮೌಲ್ಯದ 180 ಕೆ.ಜಿ.ಹೈಬ್ರೀಡ್ ಮೆಕ್ಕೆಜೋಳ ಬೀಜಗಳನ್ನು , ಅರಸೀಕೆರೆ ತಾಲ್ಲೂಕಿನ ಜಾವಗಲ್ ಹೋಬಳಿಯ ಪುಷ್ಪಗಿರಿ ಅಗ್ರೋ ಕೇಂದ್ರದಲ್ಲಿ ಅನಧಿಕೃತವಾಗಿ ಸಂಗ್ರಹಿಸಿದ್ದ ಸುಮಾರು 12 ಸಾವಿರ ರೂ.ಮೌಲ್ಯದ 30 ಕೆ.ಜಿ.ಹೈಬ್ರಿಡ್ ಮೆಕ್ಕೆಜೋಳ ಹಾಗೂ ಬೇಲೂರು ತಾಲೂಕಿನ ಅರೇಹಳ್ಳಿ ಹೋಬಳಿಯ ಮದಿಹಳ್ಳಿಯ ಶ್ರೀ ವೆಂಕಟೇಶ್ವರ ಟ್ರೇಡರ್ಸ್‌ನಲ್ಲಿ ಕಾನೂನು ಉಲ್ಲಂಘಿಸಿ ದಾಸ್ತಾನು ಮಾಡಲಾಗಿದ್ದ ಸುಮಾರು 1.77 ಲಕ್ಷ ಮೌಲ್ಯದ 88 ಚೀಲ ಯೂರಿಯಾ,ಪಾಸ್ಫೋ ಜಿಪ್ಸಮ್ ಗ್ರ್ಯಾನ್ಯುಲ್ಸ್ ವಶಪಡಿಸಿಕೊಂಡಿದ್ದಾರೆ.

ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಮಿಡಗೇಶಿ ಹೋಬಳಿಯ ಹಸಿರು ಹೈಟೆಕ್ ಸೀಡ್ಸ್ ಕೇಂದ್ರದಲ್ಲಿ ಅನಧಿಕೃತವಾಗಿ ದಾಸ್ತಾನು ಮಾಡಲಾಗಿದ್ದ ಸುಮಾರು 86 ಸಾವಿರ ರೂ.ಮೌಲ್ಯದ 22 ಲೀಟರ್ ಸೂಕ್ಷ್ಮ ಪೋಷಕಾಂಶ ಮಿಶ್ರಣವನ್ನು ವಶಪಡಿಸಿಕೊಳ್ಳಲಾಗಿದೆ.

ಮಂಡ್ಯ ತಾಲೂಕಿನ ಇಂದುವಾಳದಲ್ಲಿ ಅನಧಿಕೃತವಾಗಿ ಸಾಗಾಟ ಮಾಡುತ್ತಿದ್ದ ಸುಮಾರು 300 ಚೀಲ ಎನ್.ಎಫ್.ಎಲ್.ಯೂರಿಯಾವನ್ನು ಮಂಡ್ಯದ ಕೃಷಿ ಅಧಿಕಾರಿಗಳು ಶನಿವಾರ ಜುಲೈ 4 ರಾತ್ರಿ ವಶಪಡಿಸಿಕೊಂಡಿದ್ದಾರೆ. ಬೀಜ,ರಸಗೊಬ್ಬರ ಮಾರಾಟಗಾರರು ನಿಯಮಬಾಹಿರವಾಗಿ ಚಟುವಟಿಕೆಗಳನ್ನು ನಡೆಸುತ್ತಿರುವುದು ಕಂಡು ಬಂದರೆ ಕೃಷಿ ಇಲಾಖೆಯು ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುವುದು ಎಂದು ಕೃಷಿ ಇಲಾಖೆಯು ಪ್ರಕಟಣೆಯಲ್ಲಿ ತಿಳಿಸಿದೆ.

Priyank Kharge Visits Bengaluru Central Prison: ಸರ್ ಜೈಲಲ್ಲಿ ದರ್ಶನ್ ನ ಭೇಟಿ ಮಾಡಿದ್ರಾ..? #pratidhvani
Previous Post

ಬೆಳಗಾವಿಯಲ್ಲಿ RSS ಶಕ್ತಿ ಪ್ರದರ್ಶನ: ಪ್ರಿಯಾಂಕ್ ಖರ್ಗೆಗೆ ಪರೋಕ್ಷ ಟಾಂಟ್‌..?

Next Post

ಮತದಾರರ ಪಟ್ಟಿ ಪರಿಷ್ಕರಣೆ ಕರ್ತವ್ಯದ ವೇಳೆ ಹೃದಯಾಘಾತ: ಬಿಎಲ್‌ಒ ಸಾ**

Related Posts

Karnataka Drought: ಬತ್ತಿದ ತುಂಗಭದ್ರಾ ನದಿ: ಏಕಾಏಕಿ ಸಾವಿರಾರು ಮೀನುಗಳ ಸಾವು
Top Story

Karnataka Drought: ಬತ್ತಿದ ತುಂಗಭದ್ರಾ ನದಿ: ಏಕಾಏಕಿ ಸಾವಿರಾರು ಮೀನುಗಳ ಸಾವು

by ಪ್ರತಿಧ್ವನಿ
July 20, 2026
0

ಕೊಪ್ಪಳ: ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಕಡಿಮೆಯಾಗಿದ್ದು, ಬಹುತೇಕ ಜಿಲ್ಲೆಯಲ್ಲಿ ಬರದ ಛಾಯೆ ಆವರಿಸುತ್ತಿದೆ. ಸಮರ್ಪಕ ಮಳೆಯ ಕೊರತೆಯಿಂದ ತುಂಗಭದ್ರಾ ನದಿಯಲ್ಲಿ ನೀರಿನ ಹರಿವು ಕಡಿಮೆಯಾಗಿದ್ದು,...

Read moreDetails
ಮೇಕೆದಾಟು ಯೋಜನೆಗೆ ಲೋಕಸಭೆಯಲ್ಲಿ ಡಿಎಂಕೆ ತೀವ್ರ ವಿರೋಧ: ಸದನದ ಬಾವಿಗಿಳಿದು ಪ್ರತಿಭಟನೆ

ಮೇಕೆದಾಟು ಯೋಜನೆಗೆ ಲೋಕಸಭೆಯಲ್ಲಿ ಡಿಎಂಕೆ ತೀವ್ರ ವಿರೋಧ: ಸದನದ ಬಾವಿಗಿಳಿದು ಪ್ರತಿಭಟನೆ

July 20, 2026
ದಾಂಡೇಲಿಯಲ್ಲಿ ಜಿಪ್‌ಲೈನ್‌ ದುರಂತ: ಪ್ರವಾಸಿಗನ ಸ್ಥಿತಿ ಚಿಂತಾಜನಕ

ದಾಂಡೇಲಿಯಲ್ಲಿ ಜಿಪ್‌ಲೈನ್‌ ದುರಂತ: ಪ್ರವಾಸಿಗನ ಸ್ಥಿತಿ ಚಿಂತಾಜನಕ

July 20, 2026
FIFA World Cup 2026: ವಿಶ್ವಕಪ್ ಫೈನಲ್‌ನಲ್ಲಿ ಸ್ಪೇನ್ ಅಬ್ಬರ..! ಮೆಸ್ಸಿ ಕನಸಿಗೆ ಕಣ್ಣೀರ ತೆರೆ..!

FIFA World Cup 2026: ವಿಶ್ವಕಪ್ ಫೈನಲ್‌ನಲ್ಲಿ ಸ್ಪೇನ್ ಅಬ್ಬರ..! ಮೆಸ್ಸಿ ಕನಸಿಗೆ ಕಣ್ಣೀರ ತೆರೆ..!

July 20, 2026
Prajwal Revanna: ಜೈಲಿನಿಂದಲೇ ಅಜ್ಜಿ ಅಂತ್ಯಕ್ರಿಯೆಯಲ್ಲಿ ಪ್ರಜ್ವಲ್ ರೇವಣ್ಣ ಭಾಗಿ

Prajwal Revanna: ಜೈಲಿನಿಂದಲೇ ಅಜ್ಜಿ ಅಂತ್ಯಕ್ರಿಯೆಯಲ್ಲಿ ಪ್ರಜ್ವಲ್ ರೇವಣ್ಣ ಭಾಗಿ

July 20, 2026
Next Post
ಮತದಾರರ ಪಟ್ಟಿ ಪರಿಷ್ಕರಣೆ ಕರ್ತವ್ಯದ ವೇಳೆ  ಹೃದಯಾಘಾತ: ಬಿಎಲ್‌ಒ  ಸಾ**

ಮತದಾರರ ಪಟ್ಟಿ ಪರಿಷ್ಕರಣೆ ಕರ್ತವ್ಯದ ವೇಳೆ ಹೃದಯಾಘಾತ: ಬಿಎಲ್‌ಒ ಸಾ**

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada