ಬೆಂಗಳೂರು : ಸ್ಯಾಂಡಲ್ವುಡ್ ನಟ ಆ ದಿನಗಳು ಖ್ಯಾತಿಯ ಚೇತನ್ ಅಂಹಿಸಾ ಇತ್ತೀಚಿನ ದಿನಗಳಲ್ಲಿ ತಮ್ಮ ಸಿನಿಮಾಗಳಿಗಿಂತ ವಿವಾದಾತ್ಮಕ ಹೇಳಿಕೆಗಳ ಮೂಲಕವೇ ಹೆಚ್ಚು ಸುದ್ದಿಯಲ್ಲಿರ್ತಾರೆ. ಹಿಂದುತ್ವ ವಿರೋಧಿ ಹೇಳಿಕೆಗಳನ್ನು ನೀಡಿ ಚೇತನ್ ವಿವಾದಕ್ಕೆ ಸಿಲುಕೋದು ಕಾಮನ್ ಆಗಿಬಿಟ್ಟಿದೆ. ಇದೀಗ ನಟ ಚೇತನ್ ಅಂಹಿಸಾರನ್ನು ನಗರದ ಶೇಷಾದ್ರಿಪುರ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಹಿಂದುತ್ವದ ವಿಚಾರವಾಗಿ ಸೋಶಿಯಲ್ ಮೀಡಿಯಾದಲ್ಲಿ ನಟ ಚೇತನ್ ನಾಲಗೆ ಹರಿಬಿಟ್ಟಿದ್ದಾರೆ. ಈ ಸಂಬಂಧ ಚೇತನ್ ಅಂಹಿಸಾ ವಿರುದ್ಧ ಹಿಂದೂ ಪರ ಸಂಘಟನೆಗಳಿಂದ ಪ್ರಕರಣ ದಾಖಲಾಗಿತ್ತು. ಇದೇ ಕಾರಣಕ್ಕೆ ಇಂದು ನಟ ಚೇತನ್ ಅಂಹಿಸಾರನ್ನು ಶೇಷಾದ್ರಿಪುರಂ ಠಾಣಾ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ನಟ ಚೇತನ್ ವಿರುದ್ಧ ಭಾರತೀಯ ದಂಡ ಸಂಹಿತೆ 295 ಎ, 505 ಬಿ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ನಟ ಚೇತನ್ರನ್ನು ನ್ಯಾಯಾಲಯದ ಎದುರು ಹಾಜರು ಪಡಿಸಿದ್ದಾರೆ. ಹಿಂದೂ ಪರ ಸಂಘಟನೆಗಳು ನೀಡಿದ ದೂರನ್ನು ಆಧರಿಸಿ ಶೇಷಾದ್ರಿಪುರಂ ಠಾಣೆಯಲ್ಲಿ ಇದೀಗ ಪ್ರಕರಣ ದಾಖಲಾಗಿದೆ.