• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, August 8, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬೆಂಗಳೂರು ಟ್ರಾಫಿಕ್‌ಗೆ AI ಅಸ್ತ್ರ; ಜಾಮ್ ನಿಯಂತ್ರಣಕ್ಕೆ ಪೊಲೀಸರ ಹೊಸ ಮಾಸ್ಟರ್ ಪ್ಲ್ಯಾನ್

ಪ್ರತಿಧ್ವನಿ by ಪ್ರತಿಧ್ವನಿ
August 8, 2026
in Top Story
0
ಬೆಂಗಳೂರು ಟ್ರಾಫಿಕ್‌ಗೆ AI ಅಸ್ತ್ರ; ಜಾಮ್ ನಿಯಂತ್ರಣಕ್ಕೆ ಪೊಲೀಸರ ಹೊಸ ಮಾಸ್ಟರ್ ಪ್ಲ್ಯಾನ್
Share on WhatsAppShare on FacebookShare on Telegram

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಟ್ರಾಫಿಕ್ ಜಾಮ್ ಸಮಸ್ಯೆಗೆ ಕಡಿವಾಣ ಹಾಕಲು ನಗರ ಪೊಲೀಸರು ಇದೀಗ ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನದ ಮೊರೆ ಹೋಗಿದ್ದಾರೆ. ಸಂಚಾರ ದಟ್ಟಣೆಯನ್ನು ಮುಂಚಿತವಾಗಿಯೇ ಗುರುತಿಸಿ, ಅಗತ್ಯ ಕ್ರಮ ಕೈಗೊಳ್ಳುವ ಮೂಲಕ ಸಂಚಾರ ವ್ಯವಸ್ಥೆಯನ್ನು ಮತ್ತಷ್ಟು ಸುಗಮಗೊಳಿಸಲು ಯೋಜನೆ ರೂಪಿಸಲಾಗುತ್ತಿದೆ.

ADVERTISEMENT

 

ನಗರದಲ್ಲಿ ವೈಯಕ್ತಿಕ ವಾಹನಗಳ ಸಂಖ್ಯೆ ಹೆಚ್ಚಳ, ಕಚೇರಿಗಳಲ್ಲಿ ವರ್ಕ್ ಫ್ರಮ್ ಹೋಮ್ ವ್ಯವಸ್ಥೆ ಕಡಿಮೆಯಾಗಿರುವುದು ಸೇರಿದಂತೆ ಹಲವು ಕಾರಣಗಳಿಂದ ಸಂಚಾರ ದಟ್ಟಣೆ ತೀವ್ರಗೊಂಡಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ನಗರದ ಇಂಟೆಲಿಜೆಂಟ್ ಟ್ರಾಫಿಕ್ ಮ್ಯಾನೇಜ್‌ಮೆಂಟ್ ಸಿಸ್ಟಂ (ITMS) ಅನ್ನು ಮತ್ತಷ್ಟು ಬಲಪಡಿಸಲು ಪೊಲೀಸ್ ಇಲಾಖೆ ಮುಂದಾಗಿದೆ.

HD Kumaraswamy ಕೂಸನ್ನಾ ಇಂಪ್ಲಿಮೆಂಟ್ ಮಾಡೋಕೆ ಹೊರಟಿದ್ದಾರಂತೆ..! | DK Shivakumar | Pratidhvani

ಈ ಸಂಬಂಧ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದ್ದು, AI, ದತ್ತಾಂಶ ವಿಶ್ಲೇಷಣೆ, ವಾಹನಗಳ ಸಂಚಾರ ಮಾದರಿ ಹಾಗೂ ಈಗಿರುವ CCTV ಕ್ಯಾಮೆರಾ ವ್ಯವಸ್ಥೆಯನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುವ ಕುರಿತು ಚರ್ಚಿಸಲಾಗಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

AI ಆಧಾರಿತ ವ್ಯವಸ್ಥೆಯ ಮೂಲಕ ಸಂಚಾರ ದಟ್ಟಣೆ ಹೆಚ್ಚಾಗುವ ಪ್ರದೇಶಗಳನ್ನು ಮುಂಚಿತವಾಗಿ ಗುರುತಿಸುವ ಗುರಿ ಹೊಂದಲಾಗಿದೆ. ಅಲ್ಲದೆ, ವಾಹನಗಳ ದಟ್ಟಣೆಗೆ ಅನುಗುಣವಾಗಿ ಮಾರ್ಗ ಬದಲಾವಣೆ, ಪ್ರಮುಖ ಜಂಕ್ಷನ್‌ಗಳ ಕಾರ್ಯಕ್ಷಮತೆ ವಿಶ್ಲೇಷಣೆ ಹಾಗೂ ದತ್ತಾಂಶ ಆಧಾರಿತ ಸಂಚಾರ ನಿರ್ವಹಣೆಗೆ ಒತ್ತು ನೀಡಲಾಗುತ್ತದೆ.

ಸಂಚಾರ ಅಡಚಣೆ ಗಂಭೀರ ಸ್ವರೂಪ ಪಡೆಯುವ ಮೊದಲೇ ಅದನ್ನು ಗುರುತಿಸಿ ಪರಿಹರಿಸುವುದು ಯೋಜನೆಯ ಪ್ರಮುಖ ಉದ್ದೇಶವಾಗಿದೆ. ಇದರಿಂದ ಹೆಚ್ಚಿನ ಸಂಖ್ಯೆಯ ವಾಹನಗಳು ಕಡಿಮೆ ಸಮಯದಲ್ಲಿ ಪರಿಣಾಮಕಾರಿಯಾಗಿ ಸಂಚರಿಸಲು ಸಾಧ್ಯವಾಗಲಿದೆ.

DK Shivakumar ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಕೇಂದ್ರ ಸಚಿವ Kumaraswamy..! | JDS | Pratidhvani

ಬೆಂಗಳೂರಿನಲ್ಲಿ ಈಗಾಗಲೇ ಅಳವಡಿಸಿರುವ CCTV ಕ್ಯಾಮೆರಾಗಳ ಮಾಹಿತಿಯನ್ನು AI ತಂತ್ರಜ್ಞಾನದೊಂದಿಗೆ ಸಂಯೋಜಿಸಿ ಸಂಚಾರದ ಸ್ಥಿತಿಗತಿಗಳನ್ನು ವಿಶ್ಲೇಷಿಸುವ ಕುರಿತು ಚರ್ಚಿಸಲಾಗಿದೆ. ಇದರಿಂದ ಯಾವ ರಸ್ತೆಯಲ್ಲಿ ಯಾವ ಸಮಯದಲ್ಲಿ ಹೆಚ್ಚಿನ ವಾಹನ ದಟ್ಟಣೆ ಉಂಟಾಗುತ್ತದೆ ಎಂಬುದನ್ನು ಗುರುತಿಸಿ, ಅದಕ್ಕೆ ತಕ್ಕಂತೆ ಸಂಚಾರ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಲು ಸಾಧ್ಯವಾಗಲಿದೆ.

HD Kumaraswamy: ಟೋಲ್ ಸಂಗ್ರಹದ ಪರ್ಯಾಯವೇ ಟೌನ್ ಶಿಪ್ ಗಳು..! | JDS | Pratidhvani

ತಂತ್ರಜ್ಞಾನ ಮತ್ತು ದತ್ತಾಂಶದ ಪರಿಣಾಮಕಾರಿ ಬಳಕೆಯ ಮೂಲಕ ಬೆಂಗಳೂರಿನ ಸಂಚಾರ ವ್ಯವಸ್ಥೆಯನ್ನು ಸುಗಮ, ದಕ್ಷ ಹಾಗೂ ಜನಸ್ನೇಹಿಯಾಗಿಸುವುದು ನಗರ ಸಂಚಾರ ಮಿಷನ್‌ನ ಪ್ರಮುಖ ಗುರಿಗಳಲ್ಲಿ ಒಂದಾಗಿದೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

AI ಆಧಾರಿತ ಸಂಚಾರ ನಿರ್ವಹಣಾ ವ್ಯವಸ್ಥೆ ಜಾರಿಯಾದರೆ ಬೆಂಗಳೂರಿನ ನಿತ್ಯದ ಟ್ರಾಫಿಕ್ ಸಮಸ್ಯೆಗೆ ಎಷ್ಟರ ಮಟ್ಟಿಗೆ ಪರಿಹಾರ ಸಿಗಲಿದೆ ಎಂಬುದು ಮುಂದಿನ ದಿನಗಳಲ್ಲಿ ತಿಳಿಯಬೇಕಿದೆ.

 

Tags: AI Traffic Managementartificial intelligencebengaluru policebengaluru trafficbengaluru traffic jamBengaluru Traffic PoliceCCTV Traffic MonitoringIntelligent Traffic Management SystemITMSPriyank KhargeSmart TrafficTraffic ControlTraffic ManagementTraffic Update
Previous Post

ಕೆಪಿಟಿಸಿಎಲ್‌ನ ‘ಡಾರ್ಕ್ ಫೈಬರ್’ ವಾಣಿಜ್ಯ ಬಳಕೆಗೆ: ₹130 ಕೋಟಿ ಹೆಚ್ಚುವರಿ ಆದಾಯದ ನಿರೀಕ್ಷೆ

Next Post

‘ರಾಮಾಯಣ’ ಸಿನಿಮಾ ಬಿಡುಗಡೆ ದಿನಾಂಕ ಬದಲಾವಣೆ; ಭಾರತದಲ್ಲಿ ಯಾವಾಗ ತೆರೆಗೆ ಬರಲಿದೆ?

Related Posts

ಗೃಹ ಜ್ಯೋತಿ ಪರಿಷ್ಕರಣೆ: ಫಲಾನುಭವಿಗಳ ಆತಂಕಕ್ಕೆ ಬ್ರೇಕ್‌ ಹಾಕಿದ ಸಚಿವ ಕೆ.ಜೆ ಜಾರ್ಜ್
Top Story

ಕೆಪಿಟಿಸಿಎಲ್‌ನ ‘ಡಾರ್ಕ್ ಫೈಬರ್’ ವಾಣಿಜ್ಯ ಬಳಕೆಗೆ: ₹130 ಕೋಟಿ ಹೆಚ್ಚುವರಿ ಆದಾಯದ ನಿರೀಕ್ಷೆ

by ಪ್ರತಿಧ್ವನಿ
August 8, 2026
0

ಬೆಂಗಳೂರು: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ತನ್ನ ವ್ಯಾಪ್ತಿಯಲ್ಲಿರುವ 6,119 ಕಿಲೋಮೀಟರ್ ಉದ್ದದ ಆಪ್ಟಿಕಲ್ ಗ್ರೌಂಡ್ ವೈರ್ (OPGW) ಫೈಬರ್ ಜಾಲದಲ್ಲಿನ ಹೆಚ್ಚುವರಿ 'ಡಾರ್ಕ್...

Read moreDetails
ತಮಿಳುನಾಡು ಜನ ಮಾತ್ರ ರೈತರಾ? ಕರ್ನಾಟಕದವರು ರೈತರಲ್ಲವೇ?-ಹೆಚ್.ಡಿ ಕುಮಾರಸ್ವಾಮಿ

ಖಾತೆ ಹಂಚಿಕೆ ವಿಳಂಬ ಕಾಂಗ್ರೆಸ್ ದಿವಾಳಿತನ ತೋರುತ್ತದೆ: ಹೆಚ್.ಡಿ ಕುಮಾರಸ್ವಾಮಿ

August 8, 2026
ಶಿವಗಂಗೆ ಟ್ರೆಕ್ಕಿಂಗ್‌ಗೆ ತೆರಳಿದ್ದ ಯುವಕ ದಿಢೀರ್‌ ನಾಪತ್ತೆ: ಶೋಧ ಕಾರ್ಯ ಚುರುಕು

ಶಿವಗಂಗೆ ಟ್ರೆಕ್ಕಿಂಗ್‌ಗೆ ತೆರಳಿದ್ದ ಯುವಕ ದಿಢೀರ್‌ ನಾಪತ್ತೆ: ಶೋಧ ಕಾರ್ಯ ಚುರುಕು

August 8, 2026
SIR ಪ್ರಕ್ರಿಯೆ: ನ್ಯಾಯಾಂಗದ ತೀರ್ಪು ಮತ್ತು ವಿಶ್ಲೇಷಣೆ-ಭಾಗ 3

SIR ಪ್ರಕ್ರಿಯೆ: ನ್ಯಾಯಾಂಗದ ತೀರ್ಪು ಮತ್ತು ವಿಶ್ಲೇಷಣೆ-ಭಾಗ 3

August 8, 2026
ಜ್ಞಾನಭಾರತಿ ರಸ್ತೆ ಅಪಘಾತದಲ್ಲಿ ವಿದ್ಯಾರ್ಥಿನಿ ಸಾ**: ಸರ್ಕಾರದಿಂದ 10 ಲಕ್ಷ ಪರಿಹಾರ

ಜ್ಞಾನಭಾರತಿ ರಸ್ತೆ ಅಪಘಾತದಲ್ಲಿ ವಿದ್ಯಾರ್ಥಿನಿ ಸಾ**: ಸರ್ಕಾರದಿಂದ 10 ಲಕ್ಷ ಪರಿಹಾರ

August 8, 2026
Next Post
‘ರಾಮಾಯಣ’ ಸಿನಿಮಾ ಬಿಡುಗಡೆ ದಿನಾಂಕ ಬದಲಾವಣೆ; ಭಾರತದಲ್ಲಿ ಯಾವಾಗ ತೆರೆಗೆ ಬರಲಿದೆ?

‘ರಾಮಾಯಣ’ ಸಿನಿಮಾ ಬಿಡುಗಡೆ ದಿನಾಂಕ ಬದಲಾವಣೆ; ಭಾರತದಲ್ಲಿ ಯಾವಾಗ ತೆರೆಗೆ ಬರಲಿದೆ?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada