ನವದೆಹಲಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಮಯ ಕೋರಿದ್ದಾರೆ ಎನ್ನಲಾಗಿದೆ.
ಕಾಂಗ್ರೆಸ್ ಪ್ರಣಾಳಿಕೆ ಕುರಿತು ಪ್ರಧಾನಿ ಮೋದಿ ಅವರು ನಿರಂತರವಾಗಿ ವಾಗ್ದಾಳಿ ನಡೆಸುತ್ತಿದ್ದಾರೆ. ಕಾಂಗ್ರೆಸ್ ಗ್ಯಾರಂಟಿಗಳನ್ನು ನಿಮಗೆ ತಪ್ಪಾಗಿ ಅರ್ಥೈಸಿದ್ದಾರೆ. ಕಾಂಗ್ರೆಸ್ ಪ್ರಣಾಳಿಕೆ ಕುರಿತು ತಪ್ಪು ಮಾಹಿತಿ ನೀಡಿದ್ದಾರೆ. ಕಾಂಗ್ರೆಸ್ ಗ್ಯಾರಂಟಿ ಎಲ್ಲ ವರ್ಗದ ಜನರಿಗೆ ನ್ಯಾಯ ಒದಗಿಸುವುದಾಗಿದೆ. ಹೀಗಾಗಿ ಭೇಟಿಗೆ ಅವಕಾಶ ನೀಡಿದರೆ, ನಿಮಗೆ ನಮ್ಮ ಪ್ರಣಾಳಿಕೆ ಬಗ್ಗೆ ತಿಳಿಸಿ ಹೇಳುತ್ತೇನೆ ಎಂದು ಸಮಯ ಕೇಳಿದ್ದಾರೆ ಎನ್ನಲಾಗಿದೆ.
ಈ ಕುರಿತು ಪತ್ರವನ್ನು ಕೂಡ ಖರ್ಗೆ ಬರೆದಿದ್ದಾನೆ. ಕಾಂಗ್ರೆಸ್ನ ‘ನ್ಯಾಯ ಪತ್ರ’ ಯುವಕರು, ಮಹಿಳೆಯರು, ರೈತರು, ಕಾರ್ಮಿಕರು ಮತ್ತು ಎಲ್ಲಾ ಜಾತಿಗಳು ಮತ್ತು ಸಮುದಾಯಗಳ ಅಂಚಿನಲ್ಲಿರುವ ಜನರಿಗೆ ನ್ಯಾಯ ಒದಗಿಸುವ ಗುರಿ ಹೊಂದಿದೆ. ಕೋಮು ವಿಭಜನೆ ನಿಮಗೆ ಅಭ್ಯಾಸ. ಪ್ರಧಾನಿ ಬಳಕೆಯ ಭಾಷೆ ಕಂಡು ನನಗೆ ಆಘಾತವಾಗಿಲ್ಲ. ಅದರ ಹೀನ ಪರಿಸ್ಥಿತಿ ಕಂಡು ಬೇಸರವಾಗಿದೆ. ನಿಮ್ಮಿಂದ ಈ ರೀತಿ ಮಾತು ನಿರೀಕ್ಷಿಸಿರಲಿಲ್ಲ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.