• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

ಪ್ರತಿಧ್ವನಿ by ಪ್ರತಿಧ್ವನಿ
June 27, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
Share on WhatsAppShare on FacebookShare on Telegram

“ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಬೇಕು. ಪ್ರತಿ ವರ್ಷ ಕೆಂಪೇಗೌಡ ಜಯಂತಿ ಕಾರ್ಯಕ್ರಮ ಮಾಡಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ADVERTISEMENT

ಕೆಂಪೇಗೌಡ ಜಯಂತಿ ಅಂಗವಾಗಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿರುವ ನಾಡಪ್ರಭು ಕೆಂಪೇಗೌಡ ಪ್ರತಿಮೆ, ಬಿಬಿಎಂಪಿ ಕಚೇರಿ ಮುಂಭಾಗದ ಪ್ರತಿಮೆ ಹಾಗೂ ವಿಧಾನಸೌಧ ಆವರಣದಲ್ಲಿರುವ ಪ್ರತಿಮೆಗೆ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ ಪುಷ್ಪನಮನ ಸಲ್ಲಿಸಿ ಮಾತನಾಡಿದರು.

ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಮಾತನಾಡಿದ ಅವರು, “ಕೆಂಪೇಗೌಡರು ಬೆಂಗಳೂರು ಕಟ್ಟದಿದ್ದರೆ, ನಾವು ನೀವು ಇಲ್ಲಿ ಇರುತ್ತಿರಲಿಲ್ಲ. ಇಲ್ಲಿನ ವಾತಾವರಣ ಮನಗಂಡು ಕೆಂಪೇಗೌಡರು ಈ ನಗರ ಕಟ್ಟಿದ ಪರಿಣಾಮ ರಾಜ್ಯ, ದೇಶ ಹಾಗೂ ವಿದೇಶಗಳ ಜನ ಇಲ್ಲಿ ಆಶ್ರಯ ಪಡೆಯುತ್ತಿದ್ದಾರೆ” ಎಂದು ತಿಳಿಸಿದರು.

“ಈ ಹಿಂದಿನ ಸರ್ಕಾರದಲ್ಲಿ ಈ ಪ್ರತಿಮೆ ನಿರ್ಮಾಣ ಮಾಡಿದಾಗ ನಾನು ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೆ. ಎಸ್.ಎಂ ಕೃಷ್ಣ ಅವರ ಕಾಲದಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸಲು ಪ್ರಾರಂಭಿಸಿದಾಗ, ಯೋಜನಾ ಪ್ರಾಧಿಕಾರ, ನಕ್ಷೆ ಸೇರಿದಂತೆ ಅನೇಕ ತೀರ್ಮಾನ ಮಾಡಿದ್ದೆ. ಆಗ ನಗರಾಭಿವೃದ್ಧಿ ಸಚಿವನಾಗಿ ನಾನು ಹಾಕಿದ ಕೊನೆ ಸಹಿ ಈ ವಿಮಾನ ನಿಲ್ದಾಣ” ಎಂದು ಮೆಲುಕು ಹಾಕಿದರು.

“ಕೆಂಪೇಗೌಡ ಜಯಂತಿ ಅಂಗವಾಗಿ ನಿಮ್ಮೆಲ್ಲರಿಗೂ ಅಭಿನಂದನೆಗಳು. ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರದಿಂದ ನೀಡುವ ಕೆಂಪೇಗೌಡ ಪ್ರಶಸ್ತಿಗೆ ಈ ವರ್ಷ ವಿಮಾನ ನಿಲ್ದಾಣ ಪ್ರಾಧಿಕಾರಕ್ಕೂ ಲಭಿಸಿದೆ. ಪ್ರಾಧಿಕಾರಕ್ಕೆ ಅಭಿನಂದನೆಗಳು” ಎಂದು ತಿಳಿಸಿದರು.

ನಂತರ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿದರು. ಕೆಂಪೇಗೌಡ ಥೀಮ್ ಪಾರ್ಕ್ ವಿಚಾರವಾಗಿ ಕೇಳಿದಾಗ, “ಈ ಯೋಜನೆ ಜವಾಬ್ದಾರಿಯನ್ನು ಕೃಷ್ಣ ಭೈರೇಗೌಡ ಅವರು ವಹಿಸಿಕೊಂಡಿದ್ದಾರೆ. ಈ ಯೋಜನೆಗೆ ಅನುದಾನ ಸಿಕ್ಕಿರಲಿಲ್ಲ. ಈಗ ಅದನ್ನು ಸರಿಪಡಿಸಲಾಗಿದ್ದು, ಮುಂದಿನ 3-4 ತಿಂಗಳಲ್ಲಿ ಅಂತಿಮ ರೂಪ ನೀಡಲಾಗುವುದು” ಎಂದು ತಿಳಿಸಿದರು.

ಬಿಬಿಎಂಪಿ ಕಚೇರಿ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ, “ಕೆಂಪೇಗೌಡ ಜಯಂತಿ ಆಚರಣೆ ಆರಂಭಿಸಿದ್ದು ನಾವೇ, ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಿದ್ದು ನಾವೇ, ಇದಕ್ಕೆ 5 ಎಕರೆ ಜಾಗವನ್ನು ನೀಡಿದ್ದೇವೆ” ಎಂದು ತಿಳಿಸಿದರು.

ಸೆಪ್ಟೆಂಬರ್ ನಲ್ಲಿ ಕ್ರಾಂತಿಯಾಗಲಿದೆ, ಸರ್ಕಾರದಲ್ಲಿ ಪವರ್ ಸೆಂಟರ್ ಜಾಸ್ತಿಯಾಗಿವೆ ಎಂಬ ಸಚಿವ ರಾಜಣ್ಣ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ನನಗೆ ಈ ವಿಚಾರ ಗೊತ್ತಿಲ್ಲ. ನೀವು ಅವರನ್ನೇ ಕೇಳಿ. ನಾವು ಅವರ ಜೊತೆ ಚರ್ಚೆ ಮಾಡಿದ ನಂತರ ಪ್ರತಿಕ್ರಿಯೆ ನೀಡುತ್ತೇನೆ” ಎಂದು ತಿಳಿಸಿದರು.

Tags: airportBBMPcongresscongress dk shivakumarDCM DK ShivakumarDK Shivakumardk shivakumar 2025dk shivakumar bengalurudk shivakumar cmdk shivakumar congressdk shivakumar dcmdk shivakumar falldk shivakumar interviewdk shivakumar latest newsdk shivakumar livedk shivakumar memesdk shivakumar newsdk shivakumar next cmdk shivakumar rallydk shivakumar sondk shivakumar speechdk shivakumar supportdk shivakumar today newsdk shivakumar updatesdk shivakumar videoskempegowdaRajannasiddaramaiah
Previous Post

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

Next Post

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ

Related Posts

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!
Top Story

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

by ಪ್ರತಿಧ್ವನಿ
March 4, 2026
0

ಬೆಂಗಳೂರು : ರೈತರು ತಮ್ಮ ಗಂಗಾ ಕಲ್ಯಾಣ ಯೋಜನೆ ಕುರಿತ ಅರ್ಜಿಯ ಸ್ಥಿತಿಯನ್ನು ಆನ್‌ಲೈನ್‌ನಲ್ಲಿ ಟ್ರ್ಯಾಕ್ ಮಾಡಲು ಗಂಗಾ ಕಲ್ಯಾಣ ಪೋರ್ಟಲ್‌ನಲ್ಲಿ ಬೆಸ್ಕಾಂ ವತಿಯಿಂದ ಹೊಸ ಆಯ್ಕೆ...

Read moreDetails
ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

March 4, 2026
ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!

ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!

March 4, 2026
ಸಾಮ್ರಾಜ್ಯಶಾಹಿ ಕ್ರೌರ್ಯವೂ ಯುದ್ಧಕೋರ ಮನಸ್ಥಿತಿಯೂ..

ಸಾಮ್ರಾಜ್ಯಶಾಹಿ ಕ್ರೌರ್ಯವೂ ಯುದ್ಧಕೋರ ಮನಸ್ಥಿತಿಯೂ..

March 4, 2026
ಕೇಂದ್ರದ ಅಸಮಾನತೆ ನೀತಿ ನಮ್ಮ ಸಂವಿಧಾನ ರಚನಕಾರರ ಹೊಂದಾಣಿಕೆ ನೀತಿಗೆ ಅಡ್ಡಿ : ಸ್ಟಾಲಿನ್‌ಗೆ ಸಿದ್ದರಾಮಯ್ಯ ಪತ್ರ..

ಕೇಂದ್ರದ ಅಸಮಾನತೆ ನೀತಿ ನಮ್ಮ ಸಂವಿಧಾನ ರಚನಕಾರರ ಹೊಂದಾಣಿಕೆ ನೀತಿಗೆ ಅಡ್ಡಿ : ಸ್ಟಾಲಿನ್‌ಗೆ ಸಿದ್ದರಾಮಯ್ಯ ಪತ್ರ..

March 4, 2026
Next Post
ನವ ಭಾರತದ ಪ್ರಾಚೀನ ಸಮಾಜಗಳ ನಡುವೆ

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada