• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ಅಜಯ್​ ಭೂಪತಿ ನಿರ್ದೇಶನದ ‘ಮಂಗಳಾವರಂ’ ಚಿತ್ರದ ಪೋಸ್ಟರ್​ ಬಿಡುಗಡೆ

ಪ್ರತಿಧ್ವನಿ by ಪ್ರತಿಧ್ವನಿ
March 1, 2023
in ಸಿನಿಮಾ
0
ಅಜಯ್​ ಭೂಪತಿ ನಿರ್ದೇಶನದ ‘ಮಂಗಳಾವರಂ’ ಚಿತ್ರದ ಪೋಸ್ಟರ್​ ಬಿಡುಗಡೆ
Share on WhatsAppShare on FacebookShare on Telegram

‘ಆರ್​.ಎಕ್ಸ್​.100’ ಚಿತ್ರದ ಮೂಲಕ ತೆಲುಗು ಚಿತ್ರರಂಗದಲ್ಲಿ ಹೊಸ ಸಂಚಲನವನ್ನೇ ಸೃಷ್ಟಿಸಿದವರು ನಿರ್ದೇಶಕ ಅಜಯ್​ ಭೂಪತಿ. ಆ ಚಿತ್ರದ ನಂತರ ಅವರ ಮುಂದಿನ ನಡೆ ಏನಿರಬಹುದು ಎಂಬ ಕುತೂಹಲ ಎಲ್ಲರಲ್ಲೂ ಇದ್ದೇ ಇತ್ತು. ಅದಕ್ಕೆ ಉತ್ತರವಾಗಿ, ‘ಮಂಗಳಾವರಂ’ ಎಂಬ ಹೊಸ ಚಿತ್ರವನ್ನು ಅವರು ಘೋಷಿಸಿದ್ದು, ಆ ಚಿತ್ರದ ಕಾನ್ಸಪ್ಟ್​ ಪೋಸ್ಟರ್​ ಇತ್ತೀಚೆಗೆ ಬಿಡುಗಡೆಯಾಗಿದೆ.

ADVERTISEMENT

‘ಮಂಗಳಾವರಂ’ ಚಿತ್ರವನ್ನು ಸ್ವಾತಿ ಗುಣಪತಿ ಮತ್ತು ಸುರೇಶ್​ ವರ್ಮಾ ಒಡೆತನದ ಮುದ್ರಾ ಮೀಡಿಯಾ ವರ್ಕ್ಸ್​ ಹಾಗೂ ಅಜಯ್​ ಭೂಪತಿ ಅವರ ಎ ಕ್ರಿಯೇಟಿವ್​ ವರ್ಕ್ಸ್​ ಜಂಟಿಯಾಗಿ ನಿರ್ಮಿಸುತ್ತಿವೆ. ಇದುವರೆಗೂ ನಿರ್ದೇಶಕರಾಗಿದ್ದ ಅಜಯ್​ ಭೂಪತಿ, ಈ ಚಿತ್ರದ ಮೂಲಕ ನಿರ್ಮಾಪಕರಾಗುತ್ತಿದ್ದಾರೆ. ಅವರೇ ಕಥೆ, ಚಿತ್ರಕಥೆ ಬರೆದಿರುವ ಈ ಚಿತ್ರ ಬರೀ ತೆಲುಗುಗಷ್ಟೇ ಸೀಮಿತವಲ್ಲ, ತೆಲುಗಿನಲ್ಲಿ ನಿರ್ಮಾಣವಾಗಿ ಕನ್ನಡ, ತಮಿಳು ಮತ್ತು ಮಲಯಾಳಂ ಭಾಷೆಗಳಿಗೂ ಡಬ್​ ಆಗಿ ಬಿಡುಗಡೆಯಾಗಲಿದೆ. ಈ ಮೂಲಕ ಇದೊಂದು ದಕ್ಷಿಣ ಭಾರತದ ಚಿತ್ರವಾಗಲಿದೆ.

ಇದೊಂದು ವಿಭಿನ್ನ ಚಿತ್ರ ಎಂದು ಬಣ್ಣಿಸುವ ಅಜಯ್​, ‘ಭಾರತೀಯ ಚಿತ್ರರಂಗದಲ್ಲೇ ಇದುವರೆಗೂ ಯಾರೂ ಪ್ರಯತ್ನಿಸದ ಒಂದು ವಿಭಿನ್ನ ಅಂಶವನ್ನಿಟ್ಟುಕೊಂಡು ಚಿತ್ರ ಮಾಡುತ್ತಿದ್ದೇವೆ. ಈ ಚಿತ್ರದಲ್ಲಿ ಒಟ್ಟು 30 ಪಾತ್ರಗಳಿದ್ದು, ಪ್ರತಿ ಪಾತ್ರಕ್ಕೂ ಪ್ರಾಮುಖ್ಯತೆ ಇದೆ. ಪ್ರತಿಯೊಂದು ಪಾತ್ರವೂ ಕಥೆಯನ್ನು ಮುನ್ನಡೆಸುವುದಷ್ಟೇ ಅಲ್ಲ, ಒಟ್ಟಾರೆ ಕಥೆಯಲ್ಲಿ ಮಹತ್ವದ ಪಾತ್ರ ವಹಿಸುತ್ತದೆ’ ಎಂದು ಹೇಳಿದ್ದಾರೆ.

ಇದೊಂದು ಪಕ್ಕಾ ದಕ್ಷಿಣ ಭಾರತದ ಚಿತ್ರ ಎನ್ನುವ ನಿರ್ಮಾಪಕರಾದ ಸ್ವಾತಿ ಗುಣಪತಿ ಮತ್ತು ಸುರೇಶ್​ ವರ್ಮ, ”ಆರ್​.ಎಕ್ಸ್​.100′ ಚಿತ್ರದಂತೆಯೇ, ಈ ಚಿತ್ರದ ಮೂಲಕವೂ ಅಜಯ್​ ಪ್ರೇಕ್ಷಕರಿಗೊಂದು ಅನಿರೀಕ್ಷಿತ ಸರ್​ಪ್ರೈಸ್​ ಕೊಡುತ್ತಾರೆ ಎಂಬ ನಂಬಿಕೆ ಇದೆ. ಕಥೆ ಅದ್ಭುತವಾಗಿ ರೂಪುಗೊಂಡಿದ್ದು, ಎಲ್ಲರಿಗೂ ಇಷ್ಟವಾಗುತ್ತದೆ. ಸದ್ಯ ಪ್ರೀ-ಪ್ರೊಡಕ್ಷನ್​ ಕೆಲಸಗಳು ಪ್ರಾರಂಭವಾಗಿದ್ದು, ಸದ್ಯದಲ್ಲೇ ಕಲಾವಿದರ ಆಯ್ಕೆ ಅಂತಿಮವಾಗಲಿದೆ’  ಎನ್ನುತ್ತಾರೆ

‘ಮಂಗಳಾವರಂ’ ಚಿತ್ರಕ್ಕೆ ಕನ್ನಡದ ಅಜನೀಶ್​ ಲೋಕನಾಥ್​ ಸಂಗೀತ ಸಂಯೋಜಿಸುತ್ತಿದ್ದು, ದಾಶರಥಿ ಶಿವೇಂದ್ರ ಅವರ ಛಾಯಾಗ್ರಹಣವಿದೆ, ರಘು ಕುಲಕರ್ಣಿ ಅವರ ಕಲಾ ನಿರ್ದೇಶನವಿರಲಿದೆ. ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರಾಗಿ ಸಾಯಿಕುಮಾರ್​ ಯಡವಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

Tags: ಅಜಯ್​ ಭೂಪತಿಮಂಗಳಾವರಂ
Previous Post

ಸರ್ಕಾರಿ ನೌಕರರ ಸಮಸ್ಯೆ ಸೌಹಾರ್ದಯುತವಾಗಿ ಬಗೆ ಹರಿಯುವ ವಿಶ್ವಾಸ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Next Post

ರಾಜ್ಯ ಸರ್ಕಾರಿ ನೌಕರರಿಗೆ ಮಧ್ಯಂತರ ಪರಿಹಾರ: ಶೇ.17 ರಷ್ಟು ವೇತನ ಹೆಚ್ಚಳ

Related Posts

ಶಿವರಾಜ್‌ಕುಮಾರ್ ಮದುವೆ ಗಾಸಿಪ್‌ಗೆ ಸುಧಾರಾಣಿ ಟಾಂಗ್
ಸಿನಿಮಾ

ಶಿವರಾಜ್‌ಕುಮಾರ್ ಮದುವೆ ಗಾಸಿಪ್‌ಗೆ ಸುಧಾರಾಣಿ ಟಾಂಗ್

by ಪ್ರತಿಧ್ವನಿ
April 7, 2026
0

ಸ್ಯಾಂಡಲ್‌ವುಡ್‌ನಲ್ಲಿ ಹರಿದಾಡುತ್ತಿದ್ದ ಗಾಸಿಪ್‌ಗೆ ನಟಿ ಸುಧಾರಾಣಿ ತಮ್ಮದೇ ಶೈಲಿಯಲ್ಲಿ ಉತ್ತರ ನೀಡಿದ್ದು ಗಮನ ಸೆಳೆದಿದೆ. ನಟ ಶಿವರಾಜ್ ಕುಮಾರ್ ಅವರನ್ನು ಮದುವೆಯಾಗಲು ಸುಧಾರಾಣಿ ಮುಂದಾಗಿದ್ದರು ಎಂಬ ಸುದ್ದಿ...

Read moreDetails
BBK 12: ಬಿಗ್ ಬಾಸ್‌ನಲ್ಲಿ ಗೆದ್ದ 50 ಲಕ್ಷ ರೂಪಾಯಿ ಹಣನ ಗಿಲ್ಲಿ ಏನ್‌ ಮಾಡ್ತಾರಂತೆ ಗೊತ್ತಾ..?

ಬಿಗ್ ಬಾಸ್ ವಿಜೇತ ಗಿಲ್ಲಿ ಹೀರೋ ಎಂಟ್ರಿ: ಇವರ ನಿರ್ದೇಶನದಲ್ಲಿ ಹೊಸ ಸಿನಿಮಾ!

April 6, 2026
ಮತ್ತೆ ಚಂದನ್ ಶೆಟ್ಟಿಯ  ಮದುವೆ ಸುಳಿವು: ಮದುವೆ ಬಗ್ಗೆ ಮುಕ್ತವಾದ ಮಾತು!

ಮತ್ತೆ ಚಂದನ್ ಶೆಟ್ಟಿಯ  ಮದುವೆ ಸುಳಿವು: ಮದುವೆ ಬಗ್ಗೆ ಮುಕ್ತವಾದ ಮಾತು!

April 5, 2026
ಆಕ್ಷೇಪಾರ್ಹ ಹೇಳಿಕೆ ; ರಾಹುಲ್‌ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದ ಮುಖ್ಯ ಮಂತ್ರಿ ಯೋಗಿ ಆದಿತ್ಯ ನಾಥ್‌….

ಬಾಲಿವುಡ್​ ಸಿನಿಮಾಗಳಿಗೆ ಯೋಗಿ ಆದಿತ್ಯನಾಥ್ ಎಚ್ಚರಿಕೆ

April 5, 2026
“ಮಕ್ಕಳು ಸ್ವಾರ್ಥಕ್ಕಾಗಿ ಅಲ್ಲ” – ಪೋಷಕರಿಗೆ ರಶ್ಮಿಕಾ ಮಂದಣ್ಣ ಖಡಕ್ ಸಂದೇಶ, ವೈರಲ್ ಆಯ್ತು ಮಾತು!

“ಮಕ್ಕಳು ಸ್ವಾರ್ಥಕ್ಕಾಗಿ ಅಲ್ಲ” – ಪೋಷಕರಿಗೆ ರಶ್ಮಿಕಾ ಮಂದಣ್ಣ ಖಡಕ್ ಸಂದೇಶ, ವೈರಲ್ ಆಯ್ತು ಮಾತು!

April 4, 2026
Next Post
ರಾಜ್ಯ ಸರ್ಕಾರಿ ನೌಕರರ ಬೇಡಿಕೆಗೆ ಈಡೇರಿಕೆಗೆ ಸಿಎಂ ಅಸ್ತು..! 

ರಾಜ್ಯ ಸರ್ಕಾರಿ ನೌಕರರಿಗೆ ಮಧ್ಯಂತರ ಪರಿಹಾರ: ಶೇ.17 ರಷ್ಟು ವೇತನ ಹೆಚ್ಚಳ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada