ನಾಯಕ ಅಜಯ್ ರಾವ್ (Ajay roa) ಅವರ ಹುಟ್ಟುಹಬ್ಬ. ಈ ಸಂದರ್ಭದಲ್ಲಿ ಅವರು ನಾಯಕನಾಗಿ ನಟಿಸಲಿರುವ ನೂತನ ಚಿತ್ರದ ಘೋಷಣೆಯಾಗಿದೆ. ಹೆಚ್ ಪಿ ಆರ್ ಎಂಟರ್ ಪ್ರೈಸಸ್ ಲಾಂಛನದಲ್ಲಿ ಹರೀಶ್ ದೇವಿತಂದ್ರೆ ನಿರ್ಮಿಸುತ್ತಿರುವ ಈ ಚೊಚ್ಚಲ ಚಿತ್ರವನ್ನು “ಮಳೆ” (Male) ಚಿತ್ರದ ಖ್ಯಾತಿಯ ಶಿವತೇಜಸ್ ನಿರ್ದೇಶಿಸುತ್ತಿದ್ದಾರೆ.
![](https://pratidhvani.com/wp-content/uploads/2024/01/IMG-20240123-WA0135-1024x682.webp)
ಈ ಹಿಂದೆ ನಾನು ನಿರ್ದೇಶಿಸಿದ “ಧೈರ್ಯಂ” (Dairyam) ಚಿತ್ರದಲ್ಲಿ ಅಜಯ್ ರಾವ್ ನಾಯಕನಾಗಿ ನಟಿಸಿದ್ದರು ಹಾಗೂ “ದಿಲ್ ಪಸಂದ್” ಚಿತ್ರದಲ್ಲಿ ಅತಿಥಿಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಈಗ ನಮ್ಮಿಬ್ಬರ ಕಾಂಬಿನೇಶನ್ ನಲ್ಲಿ ಹೊಸ ಚಿತ್ರವೊಂದು ಸದ್ಯದಲ್ಲೇ ಆರಂಭವಾಗಲಿದೆ. . ಚಿತ್ರದ ಶೀರ್ಷಿಕೆ ಹಾಗೂ ಇತರ ಮಾಹಿತಿಯನ್ನು ಸದ್ಯದಲ್ಲೇ ನೀಡುವುದಾಗಿ ನಿರ್ದೇಶಕ ಶಿವತೇಜಸ್ ತಿಳಿಸಿದ್ದಾರೆ.
![](https://pratidhvani.com/wp-content/uploads/2024/01/IMG-20240123-WA0138-1024x682.webp)