ಇಂಗ್ಲೆಂಡ್(England) ವಿರುದ್ಧದ 4ನೇ ಟೆಸ್ಟ್ ಪಂದ್ಯಕ್ಕೆ ಟೀಮ್ ಇಂಡಿಯಾ(Team India) ತಯಾರಿ ಆರಂಭಿಸಿದ್ದು, ರಾಂಚಿಯಲ್ಲಿ ನಡೆಯಲಿರುವ ಟೆಸ್ಟ್ ಪಂದ್ಯದಲ್ಲಿ(Test Match) ಯುವ ಆಟಗಾರ ಆಕಾಶ್ ದೀಪ್(Akash Deep) ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಪಾದಾರ್ಪಣೆ(Debut) ಮಾಡುವ ಸಾಧ್ಯತೆ ಹೆಚ್ಚಾಗಿದೆ.
ತಂಡದ ಅನುಭವಿ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ(Jasprit Bumrah) ಅವರಿಗೆ 4ನೇ ಟೆಸ್ಟ್ನಿಂದ ಈಗಾಗಲೇ ವಿಶ್ರಾಂತಿ ನೀಡಲಾಗಿದ್ದು, ಈ ಹಿನ್ನೆಲೆಯಲ್ಲಿ ಆಕಾಶ್ ದೀಪ್ ಅವರನ್ನು ತಂಡದ ಪ್ಲೇಯಿಂಗ್ ಇಲವೆನ್ನಲ್ಲಿ ಆಡಿಸುವ ನಿರೀಕ್ಷೆ ಇದೆ.
![](https://pratidhvani.com/wp-content/uploads/2024/02/1708446512__AI_9335-1024x576.webp)
ರಾಜ್ಕೋಟ್ನಲ್ಲಿ ನಡೆದ 3ನೇ ಟೆಸ್ಟ್ ಪಂದ್ಯದಲ್ಲಿ ತಂಡಕ್ಕೆ ಆಯ್ಕೆಯಾಗಿದ್ದ ಆಕಾಶ್ ದೀಪ್, ಪ್ಲೇಯಿಂಗ್ ಇಲವೆನ್ನಲ್ಲಿ ಆಡುವ ಅವಕಾಶ ಪಡೆದಿರಲಿಲ್ಲ. ಆದರೆ ಇದೀಗ ಬುಮ್ರಾ ಅವರ ಅನುಪಸ್ಥಿತಿಯಲ್ಲಿ ಮೊಹಮ್ಮದ್ ಸಿರಾಜ್(Mohammed Siraj) ಅವರೊಂದಿಗೆ ತಂಡದ 2ನೇ ವೇಗದ ಬೌಲರ್ ಆಗಿ ಆಕಾಶ್ ದೀಪ್ ಅವರನ್ನು ಆಡಿಸುವ ಸಾಧ್ಯತೆ ಇದೆ. ಈ ನಡುವೆ ಮತ್ತೋರ್ವ ವೇಗದ ಬೌಲರ್ ಮುಖೇಶ್ ಕುಮಾರ್(Mukesh Kumar) ಅವರು ಸಹ ತಂಡದಲ್ಲಿ ಸ್ಥಾನ ಪಡೆದಿದ್ದರೂ, 2ನೇ ಟೆಸ್ಟ್ನಲ್ಲಿ ಆಡುವ ಹನ್ನೊಂದರ ಬಳಗಕ್ಕೆ ಆಯ್ಕೆಯಾಗಿದ್ದ ಮುಖೇಶ್ ಕುಮಾರ್ ನಿರೀಕ್ಷಿತ ಪ್ರದರ್ಶನ ನೀಡುವಲ್ಲಿ ವಿಫಲವಾಗಿದ್ದರು. ಈ ಕಾರಣದಿಂದ ಮುಖೇಶ್ ಕುಮಾರ್ ಅವರ ಬದಲಿಗೆ ಆಕಾಶ್ ದೀಪ್ ಅವರನ್ನು ಕಣಕ್ಕಿಳಿಸುವ ಸಾಧ್ಯತೆ ಹೆಚ್ಚಾಗಿದೆ.
![](https://pratidhvani.com/wp-content/uploads/2024/02/111-3-1024x683.webp)
ಒಂದೊಮ್ಮೆ ನಿರೀಕ್ಷೆಯಂತೆ ಆಕಾಶ್ ದೀಪ್ ಪ್ಲೇಯಿಂಗ್ ಇಲವೆನ್ನಲ್ಲಿ ಸ್ಥಾನ ಪಡೆದು ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಎಂಟ್ರಿಕೊಟ್ಟಿದ್ದೇ ಆದಲ್ಲಿ, ಪ್ರಸಕ್ತ ಟೂರ್ನಿಯಲ್ಲಿ ಭಾರತದ ಪರ ಟೆಸ್ಟ್ ಕ್ರಿಕೆಟ್ ಪಾದಾರ್ಪಣೆ ಮಾಡಿದ ಆಟಗಾರರ ಸಾಲಿಗೆ ಸೇರಿಕೊಳ್ಳಲಿದ್ದಾರೆ. ಟೀಮ್ ಇಂಡಿಯಾ ಪರ ಈಗಾಗಲೇ ಸರ್ಫರಾಜ್ ಖಾನ್, ಧ್ರುವ್ ಜುರೇಲ್ ಅವರು ಇಂಗ್ಲೆಂಡ್ ವಿರುದ್ಧದ ಈ ಸರಣಿಯೊಂದಿಗೆ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಪಾದಾರ್ಪಣೆ ಮಾಡಿದ್ದು, ಮೊದಲ ಪಂದ್ಯದಲ್ಲೇ ಗಮನಾರ್ಹ ಪ್ರದರ್ಶನ ನೀಡಿದ್ದಾರೆ.
ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಆಡಿರುವ ಮೂರು ಪಂದ್ಯಗಳಲ್ಲಿ ಭಾರತ 2-1ರ ಅಂತರದಿಂದ ಮುನ್ನಡೆ ಸಾಧಿಸಿದ್ದು, ನಾಲ್ಕನೇ ಟೆಸ್ಟ್ ಪಂದ್ಯ ಫೆ.23ರಿಂದ ರಾಂಚಿಯಲ್ಲಿ ಆರಂಭಗೊಳ್ಳಲಿದೆ.
#TeamIndia #England #RohitSharma #AkashDeep #TestSeries