ಇಂಗ್ಲೆಂಡ್(England) ವಿರುದ್ಧದ 4ನೇ ಟೆಸ್ಟ್‌ನಲ್ಲಿ ಯುವ ಆಟಗಾರ ಆಕಾಶ್ ದೀಪ್(Akash Deep) ಟೀಮ್ ಇಂಡಿಯಾದ(Team India) ಪ್ಲೇಯಿಂಗ್ ಇಲವೆನ್‌ನಲ್ಲಿ ಸ್ಥಾನ ಪಡೆಯುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದಾರೆ.

ರಾಂಚಿ(Ranchi)ಯಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಅನುಭವಿ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ(Jasprit Bumrah) ಅವರ ಅನುಪಸ್ಥಿತಿಯಲ್ಲಿ ಆಕಾಶ್ ದೀಪ್ ಅವರನ್ನು ತಂಡಕ್ಕೆ ಆಯ್ಕೆ ಮಾಡಲಾಗಿದೆ. ಪಂದ್ಯದ ಆರಂಭಕ್ಕೂ ನಡೆದ ಟೀಮ್ ಹಡಲ್‌ನಲ್ಲಿ ತಂಡದ ಹೆಡ್ ಕೋಚ್ ರಾಹುಲ್ ದ್ರಾವಿಡ್(Rahul Dravid) ಅವರು ಕ್ಯಾಪ್ ವಿತರಿಸುವ ಮೂಲಕ ತಂಡಕ್ಕೆ ಬರಮಾಡಿಕೊಂಡರು.

ಇಂಗ್ಲೆಂಡ್ ಲಯನ್ಸ್ ವಿರುದ್ಧದ ಪಂದ್ಯದ ವೇಳೆ ಉತ್ತಮ ಪ್ರದರ್ಶನ ನೀಡಿ ಗಮನ ಸೆಳೆದಿದ್ದ ಆಕಾಶ್ ದೀಪ್ 12 ವಿಕೆಟ್ ಪಡೆದು ಮಿಂಚಿದ್ದರು. ಇವರ ಈ ಪ್ರದರ್ಶನದಿಂದಾಗಿ ಟೀಮ್ ಇಂಡಿಯಾದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಬುಮ್ರಾ ಅನುಪಸ್ಥಿತಿಯಲ್ಲಿ ತಂಡದಲ್ಲಿ ಸ್ಥಾನ ಪಡೆದಿರುವ ಆಕಾಶ್ ದೀಪ್ ಅವರ ಮೇಲೆ ನಿರೀಕ್ಷೆ ಹೆಚ್ಚಾಗಿದೆ.

ಉಳಿದಂತೆ ಯಾವುದೇ ಬದಲಾವಣೆ ಇಲ್ಲದೆ ಟೀಮ್ ಇಂಡಿಯಾ ನಾಲ್ಕನೇ ಟೆಸ್ಟ್‌ನಲ್ಲಿ ಕಣಕ್ಕಿಳಿದಿದ್ದು, ಟಾಸ್ ಗೆದ್ದ ಬೆನ್ ಸ್ಟೋಕ್ಸ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ ಆಕಾಶ್ ದೀಪ್ ಅವರಿಗೆ ಟೀಮ್ ಇಂಡಿಯಾ ಆಟಗಾರರು ಹಾಗೂ ಆಕಾಶ್ ದೀಪ್ ಅವರ ಕುಟುಂಬ ಸದಸ್ಯರು ಶುಭಕೋರಿದರು.
#TeamIndia #England #RohitSharma #AkashDeep #FourthTest