ಬೆಂಗಳೂರು: ಮೊದಲನೇ ಹಂತದ ಲೋಕಸಭಾ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ. ಶಾಂತಿ ಪಾಲನೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧಿಸಿ ಆದೇಶ ಹೊರಡಿಸಲಾಗಿದೆ.
ರಾಜ್ಯದ ಕೆಲವು ಜಿಲ್ಲೆಗಳಲ್ಲಿ 26 ರಂದು ಮತದಾನ ನಡೆಯಲಿದೆ. ಈ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಶಾಂತಿ ಪಾಲನೆ, ಕಾನೂನು ಮತ್ತು ಸುವ್ಯವಸ್ಥೆ, ಸಾರ್ವಜನಿಕರ ಸುರಕ್ಷತೆಯನ್ನು ಕಾಪಾಡುವ ನಿಟ್ಟಿನಲ್ಲಿ ಹಾಗೂ ಚುನಾವಣಾ ಕಾರ್ಯಗಳು ಮುಕ್ತ ಹಾಗೂ ನ್ಯಾಯ ಸಮ್ಮತವಾಗಿ ಶಾಂತಿಯುತ ವಾತಾವರಣದಲ್ಲಿ ನಡೆಸಲು ಅನುಕೂಲವಾಗುವ ನಿಟ್ಟಿನಲ್ಲಿ ಈ ನಿಯಮ ಜಾರಿಗೊಳಿಸಲಾಗಿದೆ.
ಕಾನೂನು ಸುವ್ಯವಸ್ಥೆ ಹಿತದೃಷ್ಟಿಯಿಂದ ಏಪ್ರಿಲ್ 24 ರಂದು ಸಂಜೆ 5ರ ವರೆಗೆ ಏಪ್ರಿಲ್ 26 ರ ಮಧ್ಯರಾತ್ರಿ 12ರ ವರೆಗೆ ನಿಷೇಧಿಸಲಾಗಿದೆ. ಬೆಂಗಳೂರು ನಹರ ಮತ್ತು ಗ್ರಾಮಾಂತರ ಜಿಲ್ಲೆಯಾದ್ಯಂತ ಮದ್ಯ ಉತ್ಪಾದನೆ, ಮಾರಾಟ, ಹಂಚಿಕೆ, ಸಾಗಾಣಿಕೆ, ಶೇಖರಣೆ ನಿಷೇಧಿಸಲಾಗಿದೆ.