ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟದ ಯುವ ನಾಯಕಿ ಮೈಥಿಲಿ ಠಾಕೂರ್ ಭರ್ಜರಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ದೇಶದ ಯುವ ಶಾಸಕಿಯಾಗಿ ಮೈಥಿಲಿ ಠಾಕೂರ್ ಹೊರಹೊಮ್ಮಿದ್ದಾರೆ.

ಹಿಂದಿ, ಬಂಗಾಳಿ, ಉರ್ದು, ಮರಾಠಿ, ಭೋಜ್‌ಪುರಿ, ಪಂಜಾಬಿ, ತಮಿಳು ಹಾಗೂ ಇಂಗ್ಲಿಷ್ ಸೇರಿದಂತೆ ಹಲವಾರು ಭಾಷೆಗಳಲ್ಲಿ ಸಾಂಪ್ರದಾಯಿಕ ಜಾನಪದ ಸಂಗೀತ ಹಾಡುವ ಮೂಲಕ ಜನಪ್ರಿಯತೆ ಪಡೆದಿದ್ದ ಮೈಥಿಲಿ ಠಾಕೂರ್, ಪ್ರಧಾನಿ ಮೋದಿಯವರಿಂದ ಸ್ಫೂರ್ತಿ ಪಡೆದು ರಾಜಕೀಯ ಪ್ರವೇಶಿಸಿದರು.
ಬಿಜೆಪಿ ಸೇರಿದ ಮೈಥಿಲಿ ಠಾಕೂರ್ ಅಲಿನಗರ ವಿಧಾನಸಭಾ ಕ್ಷೇತ್ರದ ಮೂಲಕ ಚುನಾವಣಾ ಕಣಕ್ಕಿಳಿದಿದ್ದು, ಮೊದಲ ಪ್ರಯತ್ನದಲ್ಲೇ ನೆಲವತ್ತು ಸಾವಿರ ಅಧಿಕ ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ. ಇನ್ನು ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಗೆಲುವನ್ನು ಸಾಧಿಸಿದರೆ ಅಲಿನಗರವನ್ನು ಸೀತಾನಗರ ಎಂದು ಮರುನಾಮಕರಣ ಮಾಡುವುದಾಗಿ ಬಿಜೆಪಿ ಅಭ್ಯರ್ಥಿ ಮೈಥಿಲಿ ಠಾಕೂರ್ ತಮ್ಮ ಕ್ಷೇತ್ರದ ಜನರಿಗೆ ಭರವಸೆ ನೀಡಿದ್ದರು.





