• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಅಬಕಾರಿ ಅವ್ಯವಹಾರ ಹಗರಣದಲ್ಲಿ ಅರವಿಂದ್‌ ಕೇಜ್ರಿವಾಲ್‌ಗೆ ಬಿಗ್‌ ರಿಲೀಫ್‌..!

‌ದೆಹಲಿ ನ್ಯಾಯಾಲಯದ ತೀರ್ಪಿನ ಬಳಿಕ ಗಳಗಳನೇ ಕಣ್ಣೀರಿಟ್ಟ ಅರವಿಂದ್‌ ಕೇಜ್ರಿವಾಲ್..

ಪ್ರತಿಧ್ವನಿ by ಪ್ರತಿಧ್ವನಿ
February 27, 2026
in Top Story, ಇದೀಗ, ದೇಶ, ರಾಜಕೀಯ
0
ಅಬಕಾರಿ ಅವ್ಯವಹಾರ ಹಗರಣದಲ್ಲಿ ಅರವಿಂದ್‌ ಕೇಜ್ರಿವಾಲ್‌ಗೆ ಬಿಗ್‌ ರಿಲೀಫ್‌..!
Share on WhatsAppShare on FacebookShare on Telegram

ಬೆಂಗಳೂರು : ಅಬಕಾರಿ ಅವ್ಯವಹಾರ ಹಗರಣದ ಆರೋಪದಲ್ಲಿ ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ಗೆ ಬಿಗ್‌ ರಿಲೀಫ್‌ ದೊರಕಿದೆ. ಮದ್ಯ ನೀತಿ ಹಗರಣದ ಕುರಿತು ಸಿಬಿಐ ವಿಚಾರಣೆ ನಡೆಸುತ್ತಿತ್ತು. ಆದರೆ ಸೂಕ್ತ ಸಾಕ್ಷ್ಯಾಧಾರಗಳ ಕೊರತೆಯಿಂದ ದೆಹಲಿಯ ರೋಸ್‌ ಅವೆನ್ಯೂ ನ್ಯಾಯಾಲಯ ಅರವಿಂದ್‌ ಕೇಜ್ರಿವಾಲ್‌, ಮನೀಷ್‌ ಸಿಸೋಡಿಯಾ ಸೇರಿದಂತೆ 23 ಜನರನ್ನು ಖುಲಾಸೆಗೊಳಿಸಿದೆ.

ADVERTISEMENT
THE RAGAM CAFE Grand opening : ಗಣ್ಯರಿಂದ ಉದ್ಘಾಟನೆ ಗೊಂಡ ..THE ರಾಗಂ ಕೆಫೆ #pratidhvani  #cafe #cafemusic

ಅಲ್ಲದೆ ಯಾವುದೇ ಸಾಕ್ಷ್ಯಾಧಾರಗಳಿಲ್ಲದೆ ವಿನಾಕಾರಣ ನಾಯಕರನ್ನು ದೋಷಾರೋಪಣೆಗೆ ಒಳಪಡಿಸಿರುವ ಸಿಬಿಐ ವಿರುದ್ಧ ನ್ಯಾಯಾಲವು ಆಕ್ರೋಶ ವ್ಯಕ್ತಪಡಿಸಿದ್ದಲ್ಲದೆ, ಸಿಬಿಐ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದೆ.

ಆಮ್‌ ಆದ್ಮಿ ಪಕ್ಷವನ್ನು ಮುಗಿಸಲು ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಹೊರಟಿದ್ದರು. ಆದರೆ ನ್ಯಾಯಾಲಯವು ಸತ್ಯದ ಪರವಾಗಿ ತನ್ನ ತೀರ್ಪನ್ನು ನೀಡಿದೆ. ಇದು ಸತ್ಯಕ್ಕೆ ಸಂದ ಜಯ ಎಂದು ಮಾಜಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ತೀರ್ಪಿನ ಬಳಿಕ ಗಳಗಳನೇ ಕಣ್ನೀರಿಟ್ಟಿದ್ದಾರೆ.

ಪ್ರಕರಣದ ಹಿನ್ನೆಲೆ ಏನು..? ವಕೀಲರು ಹೇಳೋದೇನು..?

ಪ್ರಮುಖವಾಗಿ ದೆಹಲಿ ಮದ್ಯ ನೀತಿ ಹಗರಣದಲ್ಲಿ ಸಾವಿರಾರು ಕೋಟಿ ರೂಪಾಯಿ ಮೌಲ್ಯದ ಮದ್ಯ ಹಗರಣವನ್ನು ಕೇಂದ್ರ ತನಿಖಾ ಸಂಸ್ಥೆಗಳು, ಜಾರಿ ನಿರ್ದೇಶನಾಲಯ (ED) ಮತ್ತು CBI ಎರಡೂ ತನಿಖೆ ನಡೆಸಿವೆ. ಸಿಬಿಐ ಸಲ್ಲಿಸಿದ ಎಫ್‌ಐಆರ್ ಆಧರಿಸಿ, ಇಡಿ ಪ್ರಕರಣವನ್ನು ದಾಖಲಿಸಿ ತನಿಖೆ ಆರಂಭಿಸಿತ್ತು.

ಇದನ್ನೂ ಓದಿ : ಬಜೆಟ್‌ ಹೊತ್ತಲ್ಲೇ ಡಿಕೆ ಬಣದ ಕುರ್ಚಿ ರಣತಂತ್ರ : ಕೂತೂಹಲ ಮೂಡಿಸಿದ ಡಿಸಿಎಂ ಟೀಂನ ಡಿನ್ನರ್‌ ಪಾರ್ಟಿ..!

ಇಂದು ನಡೆದ ವಿಚಾರಣೆಯಲ್ಲಿ ಸಾಕ್ಷ್ಯಗಳು, ಹೇಳಿಕೆಗಳನ್ನು ಪರಿಶೀಲಿಸಿದ ನಂತರ, ಸಿಬಿಐ ಆರೋಪಪಟ್ಟಿಯಲ್ಲಿ ಯಾವುದೇ ಆರೋಪವು ಪ್ರಾಥಮಿಕವಾಗಿ ಸಾಬೀತಾಗಿಲ್ಲ ಎಂದು ನ್ಯಾಯಾಲಯವು ಅಭಿಪ್ರಾಯಪಟ್ಟಿದೆ. ಕೆಲವು ವ್ಯಕ್ತಿಗಳಿಗೆ ಪ್ರಯೋಜನವಾಗುವಂತೆ ಅಬಕಾರಿ ನೀತಿಯನ್ನು ರೂಪಿಸಲಾಗಿತ್ತು ಎಂಬ ಆರೋಪವಿತ್ತು ಎಂದು ವಕೀಲ ವಿವೇಕ್‌ ಜೈನ್‌ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಆದರೆ ಈ ನೀತಿಯು ಸಮಗ್ರತೆಯನ್ನು ಹೊಂದಿದೆ. ಎಲ್ಲಾ ಕಾನೂನು ಕ್ರಮಗಳನ್ನು ಅನುಸರಿಸಿರುವುದು ಕಂಡುಬಂದಿದೆ ಎಂದು ನ್ಯಾಯಾಲಯ ಗಮನಿಸಿದೆ. ಈ ನೀತಿಯನ್ನು ಗೌರವಾನ್ವಿತ ಲೆಫ್ಟಿನೆಂಟ್‌ ಜನರಲ್ ಸಹ ಅನುಮೋದಿಸಿದ್ದಾರೆ. ಇದರಲ್ಲಿ ಅವರನ್ನು ದೋಷಮುಕ್ತಗೊಳಿಸದಿದ್ದರೆ, ಇತರರನ್ನು ಹೇಗೆ ದೋಷಮುಕ್ತಗೊಳಿಸಬಹುದು? ಇದೆಲ್ಲವನ್ನೂ ಪರಿಗಣಿಸಿ, ನ್ಯಾಯಾಲಯವು ಎಲ್ಲಾ ಆರೋಪಿಗಳನ್ನು ದೋಷಮುಕ್ತಗೊಳಿಸಿದೆ ಎಂದು ವಕೀಲ ವಿವೇಕ್ ಜೈನ್ ಹೇಳಿದ್ದಾರೆ.

ಇನ್ನೂ ಕೇಜ್ರಿವಾಲ್‌ ಹಾಗೂ ಮನೀಷ್‌ ಸಿಸೋಡಿಯಾ ವಿರುದ್ಧದ  ಎಲ್ಲಾ ಆರೋಪಗಳಲ್ಲಿ ನ್ಯಾಯಾಲಯವು ದೋಷಮುಕ್ತಗೊಳಿಸಿದೆ. ಈಗ ಯಾವುದೇ ರೀತಿಯ ಆರೋಪಗಳಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

 

Tags: Aam Aadmi PartyArvind KejriwalArvind Kejriwal reliefCBIDelhi Ex cmDelhi liquor scamexcise scamKarnataka PoliticsLeftinent general delhiManish Sisodianational newsPratidhvaniRose avenue court
Previous Post

ಬಜೆಟ್‌ ಹೊತ್ತಲ್ಲೇ ಡಿಕೆ ಬಣದ ಕುರ್ಚಿ ರಣತಂತ್ರ : ಕೂತೂಹಲ ಮೂಡಿಸಿದ ಡಿಸಿಎಂ ಟೀಂನ ಡಿನ್ನರ್‌ ಪಾರ್ಟಿ..!

Next Post

ಕೊಟ್ಟ ಮಾತಿಗೆ ತಪ್ಪಿದ ಸರ್ಕಾರದ ವಿರುದ್ಧ ಗುಲಾಬಿ ಗ್ಯಾಂಗ್‌ ಆಕ್ರೋಶ..! : ಬೇಡಿಕೆ ಈಡೇರಿಸೋಕೆ ಆಶಾಗಳ ಒತ್ತಾಯ

Related Posts

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್
Top Story

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

by ಪ್ರತಿಧ್ವನಿ
March 4, 2026
0

ಬೆಂಗಳೂರು ದಕ್ಷಿಣ ಜಿಲ್ಲೆಯನ್ನು ನಂ.1 ಮಾಡುವುದು ಶಿವಕುಮಾರ್ ಅವರ ಕನಸು: ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್.. ಮಾಗಡಿ : "ಮಾಗಡಿ ಕೆಂಪೇಗೌಡರು ಬೆಂಗಳೂರನ್ನು ಕಟ್ಟಿದರು. ಬೆಂಗಳೂರು ದಕ್ಷಿಣ ಜಿಲ್ಲೆಗೆ...

Read moreDetails
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

March 4, 2026
ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

March 4, 2026
Next Post
ಕೊಟ್ಟ ಮಾತಿಗೆ ತಪ್ಪಿದ ಸರ್ಕಾರದ ವಿರುದ್ಧ ಗುಲಾಬಿ ಗ್ಯಾಂಗ್‌ ಆಕ್ರೋಶ..! : ಬೇಡಿಕೆ ಈಡೇರಿಸೋಕೆ ಆಶಾಗಳ ಒತ್ತಾಯ

ಕೊಟ್ಟ ಮಾತಿಗೆ ತಪ್ಪಿದ ಸರ್ಕಾರದ ವಿರುದ್ಧ ಗುಲಾಬಿ ಗ್ಯಾಂಗ್‌ ಆಕ್ರೋಶ..! : ಬೇಡಿಕೆ ಈಡೇರಿಸೋಕೆ ಆಶಾಗಳ ಒತ್ತಾಯ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada