• Home
  • About Us
  • ಕರ್ನಾಟಕ
Sunday, January 18, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಬಹುರಾಷ್ಟ್ರೀಯ ಕಂಪನಿಗಳ ಬಂಡವಾಳ ಹೂಡಿಕೆಗೆ ಸೂಕ್ತ ಭೂಮಿಕೆ ಸಿದ್ಧಪಡಿಸಲು ರಾಜ್ಯ ಸರ್ಕಾರದ ಸರ್ವ ಪ್ರಯತ್ನ

ಪ್ರತಿಧ್ವನಿ by ಪ್ರತಿಧ್ವನಿ
June 2, 2024
in ಕರ್ನಾಟಕ
0
ಕೆಪಿಸಿಸಿ ಅಧ್ಯಕ್ಷಗಿರಿಗೆ ನಾನು ಲಾಬಿ ಮಾಡಲ್ಲ; ಎಂ.ಬಿ. ಪಾಟೀಲ್
Share on WhatsAppShare on FacebookShare on Telegram

ಬೆಂಗಳೂರು: ‘ಕರ್ನಾಟಕ ಬಿಡಿ, ಇಡೀ ದೇಶದಲ್ಲೇ ವಿದೇಶಿ ನೇರ ಬಂಡವಾಳ ಹೂಡಿಕೆಯು (ಎಫ್‌ಡಿಐ) ಕಳೆದ ಎರಡು – ಮೂರು ವರ್ಷಗಳಿಂದ ಸತತವಾಗಿ ಇಳಿಮುಖ ಆಗಿದೆ. ಹಾಗಾದರೆ ಇದಕ್ಕೆ ಯಾರು ಹೊಣೆʼ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ. ಬಿ. ಪಾಟೀಲ ಅವರು ಪ್ರಶ್ನಿಸಿದ್ದಾರೆ.

ADVERTISEMENT

ಕೇಂದ್ರ ಸರ್ಕಾರವೇ ಬಿಡುಗಡೆ ಮಾಡಿರುವ ಅಧಿಕೃತ ಅಂಕಿ ಅಂಶಗಳೇ ದೇಶದಲ್ಲಿನ ಎಫ್‌ಡಿಐ ಒಳಹರಿವು ಕುಸಿದಿರುವುದರ ವಾಸ್ತವ ಚಿತ್ರಣ ನೀಡುತ್ತವೆ ಎಂದು ಸಚಿವರು ವಿವರಗಳನ್ನು ಹಂಚಿಕೊಂಡಿದ್ದಾರೆ.

ʼದೇಶದಲ್ಲಿ ಎಫ್‌ಡಿಐ ಇಳಿಕೆ ಆಗಲು ಕೇಂದ್ರ ಸರ್ಕಾರದ ದೂರದೃಷ್ಟಿ ಇಲ್ಲದ, ದೋಷಪೂರಿತ ನೀತಿಗಳೇ ಕಾರಣ. ಹಾಗೆಯೇ ಜಾಗತಿಕ ವಿದ್ಯಮಾನಗಳು ಕೂಡ ಸೇರಿರಬಹುದು’ ಎಂದು ಅವರು ತಿಳಿಸಿದರು.
ಕುಸಿತದ ವಿವರಗಳು
ʼಹಣಕಾಸು ವರ್ಷ 2023ರಲ್ಲಿ 71 ಶತಕೋಟಿ ಡಾಲರ್‌ಗಳಷ್ಟಿದ್ದ ದೇಶಿ ಎಫ್‌ಡಿಐ, ಹಣಕಾಸು ವರ್ಷ 2024 ರಲ್ಲಿ 70 ಶತಕೋಟಿ ಡಾಲರ್‌ಗೆ ಕುಸಿದಿದೆ.
ʼಹಣಕಾಸು ವರ್ಷ 2020-21ರಲ್ಲಿ ₹ 4.42 ಲಕ್ಷ ಕೋಟಿ, 2021-22ರಲ್ಲಿ ₹ 4.37 ಲಕ್ಷ ಕೋಟಿ, 2022-23ರಲ್ಲಿ ₹ 3.67 ಲಕ್ಷ ಕೋಟಿ ಮತ್ತು 2023-24ರಲ್ಲಿ ₹ 3.47 ಲಕ್ಷ ಕೋಟಿಗೆ ಇಳಿದಿದೆ. ಕಳೆದ 4 ವರ್ಷಗಳಲ್ಲಿ ಎಫ್‌ಡಿಐ ನಿರಂತರವಾಗಿ ಹೀಗೆ ಕುಸಿಯುತ್ತಲೇ ಸಾಗಿರುವುದರತ್ತ ಸಚಿವರು ಬೆಳಕು ಚೆಲ್ಲಿದ್ದಾರೆ.

ʼದೇಶದಲ್ಲಿ ಹೂಡಿಕೆಯಾಗುವ ʼಎಫ್‌ಡಿಐʼನಲ್ಲಿ ಬಹುಪಾಲು ಈಕ್ವಿಟಿ ಸ್ವರೂಪದಲ್ಲಿ ಇರುತ್ತದೆ. ಹಿಂದಿನ ಮೂರು ಹಣಕಾಸು ವರ್ಷಗಳಲ್ಲಿ ಎಫ್‌ಡಿಐ ಈಕ್ವಿಟಿ ಹೂಡಿಕೆಯು ಕಳವಳಕಾರಿ ಮಟ್ಟದಲ್ಲಿ ಇಳಿಕೆಯಾಗಿದೆ. 2022-23ನೇ ಹಣಕಾಸು ವರ್ಷಕ್ಕೆ ಹೋಲಿಸಿದರೆ 2023-24ರಲ್ಲಿ ಹೂಡಿಕೆಯಲ್ಲಿನ ಇಳಿಕೆಯು ಶೇ 3 ರಷ್ಟು ಮಾತ್ರ ದಾಖಲಾಗಿದೆ. ಆದರೆ, ಅದಕ್ಕೂ ಮುಂಚಿನ 4 ಹಣಕಾಸು ವರ್ಷಗಳಲ್ಲಿನ ಇಳಿಕೆ ಪ್ರಮಾಣವು ಶೇ 25ಕ್ಕಿಂತಲೂ ಹೆಚ್ಚಿಗೆ ಇದೆʼ ಎಂದು ಹೇಳಿದ್ದಾರೆ.
ಬಿಜೆಪಿ ಸರ್ಕಾರದ ಉದಾಸೀನ ಧೋರಣೆ
ʼಎಫ್‌ಡಿಐ ಆಕರ್ಷಿಸುವಲ್ಲಿ ಮೊದಲ ಸ್ಥಾನದಲ್ಲಿ ಇದ್ದ ರಾಜ್ಯವು ಈಗ 3ನೇ ಸ್ಥಾನಕ್ಕೆ ಇಳಿಯಲು ಕೇಂದ್ರ ಸರ್ಕಾರದ ಧೋರಣೆ ಹಾಗೂ ಈ ರಾಜ್ಯದಲ್ಲಿ ಈ ಹಿಂದೆ ಅಧಿಕಾರದಲ್ಲಿ ಇದ್ದ ಬಿಜೆಪಿ ಸರ್ಕಾರದ ಉದಾಸೀನ ನಿಲುವು ಮುಖ್ಯ ಕಾರಣಗಳಾಗಿವೆ. ಕರ್ನಾಟಕವೂ ಸೇರಿದಂತೆ ದಕ್ಷಿಣ ಭಾರತದಲ್ಲಿ ಹೂಡಿಕೆಗೆ ಒಲವು ತೋರಿಸಿದ್ದ ವಿದೇಶಿ ಹೂಡಿಕೆದಾರರು ಇತ್ತೀಚಿನ ವರ್ಷಗಳಲ್ಲಿ ಕೇಂದ್ರ ಸರ್ಕಾರದ ಒತ್ತಾಸೆಯ ಮೇರೆಗೆ ಮಹಾರಾಷ್ಟ್ರ ಮತ್ತು ಗುಜರಾತ್‌ ರಾಜ್ಯಗಳತ್ತ ಮುಖ ಮಾಡಿರುವುದೂ ಇದಕ್ಕೆ ಕಾರಣʼ ಎಂದು ಸಚಿವರು ವಿವರಿಸಿದ್ದಾರೆ.

ʼದೇಶದ ಪರಿಸ್ಥಿತಿಯೇ ಹೀಗಿದ್ದ ಮೇಲೆ ಅದರ ಪರಿಣಾಮ ರಾಜ್ಯದ ಮೇಲೂ ಆಗುತ್ತದೆ. ಆದರೆ, ಅದು ಈ ಹಿಂದೆ ಬಿಜೆಪಿ ಸರ್ಕಾರ ಇದ್ದಾಗ ಎಫ್‌ಡಿಐ ಪಾತಾಳಕ್ಕೆ ಇಳಿದಷ್ಟು ಆಗಿಲ್ಲ. 2023-24ರಲ್ಲಿ ಇಳಿಕೆ ಪ್ರಮಾಣ ಕಡಿಮೆ ಆಗಿದ್ದು, ಪರಿಸ್ಥಿತಿಯನ್ನು ಗಣನೀಯವಾಗಿ ಸುಧಾರಿಸಲು ರಾಜ್ಯದಲ್ಲಿನ ಕಾಂಗ್ರೆಸ್‌ ಸರ್ಕಾರವು ರಚನಾತ್ಮಕವಾಗಿ ಕಾರ್ಯೋನ್ಮುಖವಾಗಿದೆ. ಎಫ್‌ಡಿಐ ಆಕರ್ಷಿಸುವಲ್ಲಿ ಮತ್ತು ಬಹುರಾಷ್ಟ್ರೀಯ ಕಂಪನಿಗಳ ಹೂಡಿಕೆಗೆ ಸೂಕ್ತ ಭೂಮಿಕೆ ಸಿದ್ಧಪಡಿಸುವಲ್ಲಿ ರಾಜ್ಯ ಸರ್ಕಾರವು ಸರ್ವ ಪ್ರಯತ್ನ ಮಾಡುತ್ತಿದೆʼ ಎಂದು ಹೇಳಿದ್ದಾರೆ.

ಎಫ್‌ಡಿಐ ಒಳಹರಿವಿಗೆ ಅಡ್ಡಿಯಾದ ಪ್ರತಿಕೂಲತೆಗಳು

ʼಕರ್ನಾಟಕದಲ್ಲಿ ಎಫ್‌ಡಿಐಗೆ ಸಂಬಂಧಿಸಿದ ಇತ್ತೀಚಿನ ಬೆಳವಣಿಗೆಗಳು, ನವೋದ್ಯಮ ಹಾಗೂ ಐಟಿ ಕ್ಷೇತ್ರಗಳು ಎದುರಿಸುತ್ತಿರುವ ಸವಾಲುಗಳಿಗೆ ನಿದರ್ಶನಗಳಾಗಿವೆ. ಕೇಂದ್ರ ಸರ್ಕಾರದ ನೀತಿ ನಿರೂಪಣೆಯಲ್ಲಿನ ದೋಷಗಳ ಕೊಡುಗೆಯೂ ಗಮನಾರ್ಹವಾಗಿವೆ. ಈ ಹಿಂದೆ ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರವು ಕೇಂದ್ರದಲ್ಲಿ ತನ್ನದೇ ಪಕ್ಷದ ಅಧಿಕಾರದಲ್ಲಿದ್ದರೂ (ಡಬಲ್‌ ಎಂಜಿನ್‌ ಸರ್ಕಾರ) ಎಫ್‌ಡಿಐ ಕುಸಿತ ತಡೆಗಟ್ಟಲು ಕ್ರಮ ಕೈಗೊಳ್ಳದಂತೆ ಪ್ರಭಾವ ಬೀರುವಲ್ಲಿ ವಿಫಲವಾಗಿರುವುದೂ ವೇದ್ಯವಾಗುತ್ತದೆ. ಮಹಾರಾಷ್ಟ್ರ, ಗುಜರಾತ್‌ ರಾಜ್ಯಗಳತ್ತ ಹರಿಯುತ್ತಿದ್ದ ಎಫ್‌ಡಿಐ ಯನ್ನು ರಾಜ್ಯದತ್ತ ತಿರುಗುವಂತೆ ಮಾಡುವಲ್ಲಿ ಹಿಂದಿನ ಬಿಜೆಪಿ ಸರ್ಕಾರವು ಯಾವುದೇ ರಚನಾತ್ಮಕ ಪ್ರಯತ್ನ ಮಾಡದಿರುವುದೇ ಇಂದಿನ ಪರಿಸ್ಥಿತಿಗೆ ಮುಖ್ಯ ಕಾರಣವಾಗಿದೆʼ ಎಂದು ಪಾಟೀಲ ಅವರು ಹೇಳಿದ್ದಾರೆ.

ಹೂಡಿಕೆದಾರರ ಗಮನ ಸೆಳೆಯಲು ಸರ್ವ ಪ್ರಯತ್ನ

ʼಇಂತಹ ಪ್ರತಿಕೂಲತೆಗಳ ನಡುವೆಯೂ ರಾಜ್ಯವು ದೇಶದ ಇತರ ರಾಜ್ಯಗಳಿಗೆ ಹೋಲಿಸಿದರೆ ಬಹುರಾಷ್ಟ್ರೀಯ ಕಂಪನಿಗಳ ಬಂಡವಾಳ ಹೂಡಿಕೆಯ ಆಕರ್ಷಕ ತಾಣವಾಗಿ ಗಮನ ಸೆಳೆಯುತ್ತಿದೆʼ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

ʼಕರ್ನಾಟಕ ರಾಜ್ಯವು ವಿಶ್ವದಾದ್ಯಂತ ವಿವಿಧ ದೇಶಗಳ ಬಹುರಾಷ್ಟ್ರೀಯ ಕಂಪನಿಗಳಿಂದ ಬಂಡವಾಳ ಹೂಡಿಕೆಯನ್ನು ಆಯಸ್ಕಾಂತದಂತೆ ಸೆಳೆಯುತ್ತಿದೆ. ಆದರೆ, ದೇಶದ ಆರ್ಥಿಕ ಪ್ರಗತಿಯ ಹಾದಿಯಲ್ಲಿನ ಅಡಚಣೆಗಳು, ಹೂಡಿಕೆದಾರರ ಬದಲಾದ ಒಲವು – ನಿಲುವು, ಜಾಗತಿಕ ವಿದ್ಯಮಾನಗಳ ಕಾರಣಕ್ಕೆ ರಾಜ್ಯದಲ್ಲಿಯೂ ʼಎಫ್‌ಡಿಐʼ ಒಳಹರಿವು ಕಡಿಮೆಯಾಗಿದೆʼ ಎಂದು ಹೇಳಿದ್ದಾರೆ.

₹1.13 ಲಕ್ಷ ಕೋಟಿ ಬಂಡವಾಳ ಹೂಡಿಕೆ ಆಕರ್ಷಣೆ

ʼದೇಶದಲ್ಲಿನ ʼಎಫ್‌ಡಿಐʼನ ಒಟ್ಟಾರೆ ಇಳಿಕೆ ಪ್ರವೃತ್ತಿ ಹಾಗೂ ರಾಜಕೀಯ ಕಾರಣಗಳ ಹೊರತಾಗಿಯೂ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿನ ಕಾಂಗ್ರೆಸ್‌ ಸರ್ಕಾರವು ಕಳೆದ ಒಂದು ವರ್ಷದಲ್ಲಿ ರಾಜ್ಯದಲ್ಲಿ ಎಫ್‌ಡಿಐ ಒಳಹರಿವು ಉತ್ತೇಜಿಸಲು ಹಲವಾರು ಬಗೆಗಳಲ್ಲಿ ಕಾರ್ಯಪ್ರವೃತ್ತವಾಗಿದೆ. ಕರ್ನಾಟಕವು 2023-24 ರ ಹಣಕಾಸು ವರ್ಷದಲ್ಲಿ ದೇಶಿ ಹಾಗೂ ವಿದೇಶಿ ಕಂಪನಿಗಳಿಂದ ₹ 1.13 ಲಕ್ಷ ಕೋಟಿ ಮೌಲ್ಯದ ಬಂಡವಾಳ ಹೂಡಿಕೆ ಆಕರ್ಷಿಸಿದೆ. ಎಲೆಕ್ಟ್ರಾನಿಕ್ಸ್ ಸಿಸ್ಟಮ್ ಡಿಸೈನ್ ಮತ್ತು ಮ್ಯಾನುಫ್ಯಾಕ್ಚರಿಂಗ್ (ಇಎಸ್‌ಡಿಎಂ), ವಿದ್ಯುತ್ ಚಾಲಿತ (ಇವಿ) ವಾಹನಗಳ ಲಿಆನ್ ಬ್ಯಾಟರಿ ತಯಾರಿಕೆ, ಉಕ್ಕು ತಯಾರಿಕೆಯಂತಹ ಪ್ರಮುಖ ತಯಾರಿಕಾ ವಲಯ, ದತ್ತಾಂಶ ಕೇಂದ್ರಗಳ ಸ್ಥಾಪನೆ ಮತ್ತಿತರ ಹಲವಾರು ಕ್ಷೇತ್ರಗಳಲ್ಲಿ ಈ ಹೂಡಿಕೆ ಮೊತ್ತವು ರಾಜ್ಯಕ್ಕೆ ಹರಿದು ಬರುತ್ತಿದೆʼ ಎಂದು ಸಚಿವರು ತಿಳಿಸಿದ್ದಾರೆ.

ʼಜಾಗತಿಕ ವಿದ್ಯಮಾನಗಳ ಜೊತೆಗೆ ಕೇಂದ್ರ ಸರ್ಕಾರದ ಕೆಲ ನಿರ್ಧಾರಗಳೂ ಎಫ್‌ಡಿಐ ಕುಸಿತಕ್ಕೆ ಕಾರಣಗಳಾಗಿವೆ. ತಯಾರಿಕಾ ವಲಯದಲ್ಲಿ ಸ್ಥಳೀಯವಾಗಿ ಜೋಡಣೆ ಸ್ವರೂಪದ ಉದ್ದಿಮೆಗಳಿಗೆ ಕೇಂದ್ರವು ಆದ್ಯತೆ ನೀಡುತ್ತಿದೆ. ಇಂತಹ ಉದ್ದಿಮೆಗಳು ತಮ್ಮ ಕಾರ್ಯನಿರ್ವಹಣೆಗೆ ವಿದೇಶಗಳನ್ನೇ ಹೆಚ್ಚಾಗಿ ಅವಲಂಬಿಸಬೇಕಾಗಿದೆ. ವಿದೇಶಗಳಿಂದ ಬಿಡಿಭಾಗಗಳ ಪೂರೈಕೆಯಲ್ಲಿನ ಅಡಚಣೆಗಳು ಮತ್ತು ತೆರಿಗೆ ಪದ್ಧತಿಯು ಈ ಉದ್ದಿಮೆಗಳ ಕಾರ್ಯನಿರ್ವಹಣೆ ಮೇಲೆ ವ್ಯತಿರಿಕ್ತ ಪ್ರಭಾವ ಬೀರುತ್ತಿವೆ. ತಯಾರಿಕಾ ವಲಯದಲ್ಲಿನ ಎಫ್‌ಡಿಐ ಹೂಡಿಕೆಗೆ ಅಡ್ಡಿಯಾಗಿವೆ. ಈ ಉದ್ದಿಮೆಗಳ ಪೂರ್ಣ ಪ್ರಮಾಣದ ತಯಾರಿಕೆಗೆ ಅವಕಾಶ ಮಾಡಿಕೊಟ್ಟರೆ ಮತ್ತು ಅವುಗಳ ದಕ್ಷ ಕಾರ್ಯನಿರ್ವಹಣೆಗೆ ಇರುವ ಅಡೆತಡೆಗಳನ್ನು ನಿವಾರಿಸಲು ಕ್ರಮ ಕೈಗೊಂಡರೆ ಈ ಕ್ಷೇತ್ರಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ಎಫ್‌ಡಿಐ ಹರಿದು ಬರಲಿದೆ ಎನ್ನುವ ಹೂಡಿಕೆ ತಜ್ಞರ ಸಲಹೆಗಳನ್ನು ಕೇಂದ್ರ ಸರ್ಕಾರವು ಗಂಭೀರವಾಗಿ ಪರಿಗಣಿಸಬೇಕಾಗಿದೆʼ ಎಂದೂ ಸಚಿವ ಪಾಟೀಲ ಅವರು ತಿಳಿಸಿದ್ದಾರೆ.

Tags: FDImbpatil
Previous Post

ವಿಧಾನ ಪರಿಷತ್ ಚುನಾವಣೆ; 8 ಜನರಿಗೆ ಟಿಕೆಟ್

Next Post

ವಿಧಾನಸಭೆ ಚುನಾವಣೆ ಮಾದರಿಯಲ್ಲಿ ಈಗಲೂ ಎಕ್ಸಿಟ್ ಪೋಲ್ ಸುಳ್ಳಾಗಲಿವೆ: ಡಿಸಿಎಂ ಡಿ.ಕೆ.ಶಿವಕುಮಾರ್

Related Posts

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!
Top Story

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

by ಪ್ರತಿಧ್ವನಿ
January 18, 2026
0

ಮೇಷ ರಾಶಿಯ ಇಂದಿನ ಭವಿಷ್ಯ ಕುಟುಂಬದೊಂದಿಗೆ ಹೆಚ್ಚಿನ ಸಮಯ ಕಳೆಯುವಿರಿ. ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲು ಇಂದು ಸೂಕ್ತ ದಿನ. ಸಂಜೆ ವೇಳೆಗೆ ಅನಿರೀಕ್ಷಿತ ಶುಭವಾರ್ತೆ ಕೇಳುವ ಸಾಧ್ಯತೆ...

Read moreDetails
25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

January 17, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

January 17, 2026
ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

January 17, 2026
Next Post
ಶತ್ರು ಭೈರವಿ ಯಾಗದ ಆರೋಪ ಮಾಡಿರುವ ಡಿಕೆಶಿ; ಕೇರಳ ಸರ್ಕಾರ ಹೇಳಿದ್ದೇನು?

ವಿಧಾನಸಭೆ ಚುನಾವಣೆ ಮಾದರಿಯಲ್ಲಿ ಈಗಲೂ ಎಕ್ಸಿಟ್ ಪೋಲ್ ಸುಳ್ಳಾಗಲಿವೆ: ಡಿಸಿಎಂ ಡಿ.ಕೆ.ಶಿವಕುಮಾರ್

Please login to join discussion

Recent News

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!
Top Story

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

by ಪ್ರತಿಧ್ವನಿ
January 18, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?
Top Story

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

by ಪ್ರತಿಧ್ವನಿ
January 17, 2026
ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್
Top Story

ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

January 18, 2026
25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

January 17, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada